ಒಂದು ರಾಷ್ಟ್ರ, ಒಂದು ಚುನಾವಣೆ: ರಾಷ್ಟ್ರಪತಿಗೆ ವರದಿ ಸಲ್ಲಿಸಿದ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ

Date:

ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೊಳಿಸುವ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಬೆಳಿಗ್ಗೆ ವರದಿ ಸಲ್ಲಿಸಿದೆ.

ಮೂಲಗಳ ಪ್ರಕಾರ ವರದಿಯು ಎಂಟು ಪರಿಚ್ಚೇದಗಳೊಂದಿಗೆ 18 ಸಾವಿರ ಪುಟಗಳನ್ನು ಒಳಗೊಂಡಿದೆ.

ಸಮಿತಿಯು ಸಂವಿಧಾನದ ಐದು ತಿದ್ದುಪಡಿಗಳೊಂದಿಗೆ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ತನ್ನ ಶಿಫಾರಸ್ಸಿನಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉದ್ದೇಶಿತ ವರದಿಯು ಏಕಕಾಲದಲ್ಲಿ ಲೋಕಸಭೆ, ರಾಜ್ಯ ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಗಮನಹರಿಸಲಿದೆ.

ಸಮಿತಿಯು ಈಗ ಪ್ರಸ್ತುತ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಚೌಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಲೋಕಸಭೆ, ವಿಧಾನಸಭೆ ಪುರಸಭೆ ಹಾಗೂ ಪಂಚಾಯತ್‌ ಚುನಾವಣೆಗಳನ್ನು ಏಕಕಾಲದಲ್ಲಿ ಕಡ್ಡಾಯಗೊಳಿಸುವ ಬಗ್ಗೆ ಶಿಫಾರಸ್ಸುಗೊಳಿಸುವ ವರದಿಯನ್ನು ಪರಿಶೀಲನೆಗೊಳಿಸಲು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಕೇದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಹಾಗೂ ಹಿರಿಯ ನ್ಯಾಯವಾದಿ ಹರೀಶ್ ಸಾಳ್ವೆ ಇದ್ದಾರೆ.

ಹಾಗೆಯೇ ಸಮಿತಿಯಲ್ಲಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಮಿತಿಯ ಸದಸ್ಯರನ್ನಾಗಿಸಲಾಗಿತ್ತು. ಸಮಿತಿಯು ಕೇವಲ ಕಣ್ಣೊರೆಸುವ ತಂತ್ರ ಎಂದು ಸದಸ್ಯತ್ವವನ್ನು ಚೌಧರಿ ಅವರು ನಿರಾಕರಿಸಿದರು.

ಸಮಿತಿಯಲ್ಲಿ ಅರ್ಜುನ್ ರಾಮ್‌ ಮೇಘವಾಲ್‌ ಅವರನ್ನು ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಾಂಗ್ಲಿಯಿಂದ ಶಿವಸೇನೆ ಸ್ಪರ್ಧೆ; ಬಿಜೆಪಿಗೆ ನೆರವು ನೀಡದಂತೆ ಸಂಜಯ್ ರಾವತ್ ಕರೆ

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು...

ಸಿಎಂ ಹುದ್ದೆಯಿಂದ ಕೇಜ್ರಿವಾಲ್ ಪದಚ್ಯುತಿಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ...

ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ...