ರಾಮನಗರ | ಪಿಡಿಒ ವಿರುದ್ಧ ಹಣ ದುರ್ಬಳಕೆ ಆರೋಪ; ತನಿಖೆಗೆ ಸಿದ್ಧ ಎಂದ ಪಿಡಿಒ

Date:

ಚರಂಡಿ ನೈರ್ಮಲ್ಯ, ಸ್ವಚ್ಛತೆ ಹಾಗೂ ನೀರು ಸರಬರಾಜು ಉಪಕರಣ ಖರೀದಿ ಹೆಸರಲ್ಲಿ ಸುಮಾರು 80 ಲಕ್ಷ ರೂಪಾಯಿ ದುರುಪಯೋಗವಾಗಿದೆ. ಗ್ರಾಮ ಪಂಚಾಯತಿ ಪಿಡಿಒ ಈ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಸಿ. ಮಹದೇವಯ್ಯ ಆರೋಪಿಸಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಮಾಗಡಿ ತಾಲೂಕಿನ ಅಜ್ಜನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಗಂಗಯ್ಯ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಿದ್ದಾರೆ.

“ಅಜ್ಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಚರಂಡಿಗಳನ್ನು ಪಂಚಾಯತಿ ನೌಕರರೇ ಸ್ವಚ್ಛತೆ ಮಾಡಿದ್ದಾರೆ. ಆದರೂ, ಗುತ್ತಿಗೆದಾರರಿಂದ ಸ್ವಚ್ಛತೆ ಮಾಡಿಸಲಾಗಿದೆ ಎಂದು ನಕಲಿ ಬಿಲ್‌ ತಯಾರಿಸಿದ್ದಾರೆ. ಅನಕ್ಷರಸ್ಥ ಅದ್ಯಕ್ಷರಿಂದ ಬಿಲ್‌ಗೆ ಸಹಿ ಪಡೆದು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚರಂಡಿ ಸ್ವಚ್ಛತೆ ಕಾಮಗಾರಿಗಳನ್ನು ಮಾಡಿಸಿರುವುದಾಗಿ ವೆಂಕಟೇಶ್‌ ಮೂರ್ತಿ ಮತ್ತು ಸುರೇಶ್‌ ಟಿ.ಜಿ ಎಂಬ ಗುತ್ತಿಗೆದಾರರ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಪಿಡಿಒ ತಯಾರಿಸಿದ್ದಾರೆ. ಕಿರಿಯ ಅಭಿಯಂತರರು ಮನರೇಗಾ ಯೋಜನೆಯಡಿ ಮಾಡಿಸಿರುವ ಅಭಿವೃದ್ದಿ ಕಾಮಗಾರಿಗಳಿಗೆ ಎಂ.ಬಿ ಪುಸ್ತಕದಲ್ಲಿ ಬಿಲ್‌ ಬರೆದಿದ್ದಾರೆ. ಆದರೆ, ದಿನಾಂಕ ಬರೆದಿಲ್ಲ. ಹಣ ಡ್ರಾ ಮಾಡಿದ ಚೆಕ್‌ ನೀಡಿದ ದಿನಾಂಕ ನಮೂದಿಸಿಲ್ಲ” ಎಂದು ದೂರಿದ್ದಾರೆ.

“ಪಿಡಿಒ ಗಂಗಯ್ಯ ಇದೇ ವರ್ಷ ಡಿಸೆಂಬರ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಆದರೆ, ಅವರು ಈಗಲೇ ರಜೆ ಮೇಲೆ ತೆರಳಿದ್ದಾರೆ. ಹಣ ದುರ್ಬಳಕೆಯ ಕುರಿತು ತಾಲೂಕು ಪಂಚಾಯಿತಿ ಇಒ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರ ಗಮನಕ್ಕೆ ತಂದಿದ್ದೇವೆ. ಆದರೂ ಪ್ರಯೋಜನವಾಗಿಲ್ಲ. ಪಿಡಿಒ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತಮ್ಮ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಒ ಗಂಗಯ್ಯ, “ಪಂಚಾಯತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಚತಾ ಕಾಮಗಾರಿಗಳನ್ನು ಪಂಚಾಯತ್‌ ರಾಜ್‌ ಅಧಿನಿಯಮದಂತೆ ನಡೆಸಲಾಗಿದೆ. ಕಾಮಗಾರಿಗಳಲ್ಲಿ ಯಾವುದೇ ಅವ್ಯವಹಾರ ನಡೆಸಿಲ್ಲ. ಮಹದೇವಯ್ಯ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ದನಿದ್ದೇನೆ” ಎಂದು ಗಂಗಯ್ಯ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕ: ಪ್ರಕರಣ ದಾಖಲು

ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ...

ವಿಜಯಪುರ | ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ: ಎಂ.ಬಿ ಪಾಟೀಲ್‌

ಈ ಬಾರಿ ಲೋಕಸಭೆಯಲ್ಲಿ ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ ಎಂದು...

ಮೈಸೂರು | ಬಿಜೆಪಿ ಸರ್ಕಾರ ಧಾರ್ಮಿಕ ದ್ವೇಷ ಹರಡಿ ರಾಜಕೀಯ ಮಾಡುತ್ತಿದೆ: ಡಾ. ತಿಮ್ಮಯ್ಯ

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಧರ್ಮ ಧರ್ಮಗಳ ಎತ್ತಿಕಟ್ಟಿ ರಾಜಕೀಯ ಮಾಡುತ್ತಿದೆ. ದೇಶದಲ್ಲಿ...

ಮೈಸೂರು | ಕೋಮುವಾದಿ ಶಕ್ತಿ ಸೋಲಿಸಿ, ಸಂವಿಧಾನ ಉಳಿಸಿ: ಸುಹೇಲ್ ಅಹಮದ್

ಸ್ವಾತಂತ್ರ್ಯ ಭಾರತದಲ್ಲಿ ಇಂದಿನ ಲೋಕಸಭಾ ಚುನಾವಣೆ ಐತಿಹಾಸಿಕವಾದದ್ದು ಯಾಕೆ ಅಂದ್ರೆ ಪ್ರಜಾಪ್ರಭುತ್ವ...