ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ: ಬಾಲಿವುಡ್ ನಟ ರಣಬೀರ್ ಕಪೂರ್‌ಗೆ ಇಡಿ ಸಮನ್ಸ್

Date:

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಅಕ್ಟೋಬರ್ 6ರಂದು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗೆ ಬರುವಂತೆ ನಟನಿಗೆ ಸಮನ್ಸ್ ನೀಡಲಾಗಿದೆ ಎಂದು ‘ದಿ ಫ್ರೀ ಪ್ರೆಸ್ ಜರ್ನಲ್’ ವರದಿ ಮಾಡಿದೆ.

ಬಾಲಿವುಡ್ ನಟ ರಣಬೀರ್ ಕಪೂರ್ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಬಳಸುವಂತೆ ಪ್ರಚಾರ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ಇ ಡಿ ಸೂಚಿಸಿದೆ ಎಂದು ವರದಿಯಾಗಿದೆ. ಇವರ ಜೊತೆಗೆ 13 ಮಂದಿ ಇತರ ನಟರಿಗೂ ಸಮನ್ಸ್ ಕಳುಹಿಸಿದೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ₹417 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದರು.

ದುಬೈನಿಂದ ಕಾರ್ಯಾಚರಣೆ ನಡೆಸುತ್ತಿದ್ದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರು ಪ್ರಚಾರ ಮಾಡುತ್ತಿರುವ ಕಂಪನಿಯು ಆನ್‌ಲೈನ್ ಬುಕ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಹೊಸ ಬಳಕೆದಾರರನ್ನು ದಾಖಲಿಸಲು, ಬಳಕೆದಾರರ ಐಡಿಗಳನ್ನು ರಚಿಸಲು ಮತ್ತು ಬೇನಾಮಿ ಬ್ಯಾಂಕ್ ಖಾತೆಗಳ ಲೇಯರ್ಡ್ ವೆಬ್ ಮೂಲಕ ಅಕ್ರಮ ಹಣ ವ್ಯವಹಾರ ಮಾಡಲು ಬಳಸುತ್ತಿದೆ ಎಂದು ಅಧಿಕಾರಿಗಳು ಆರೋಪಿಸಿದ್ದರು.

ಇಡಿ ಇತ್ತೀಚೆಗೆ ಕೋಲ್ಕತ್ತಾ, ಭೋಪಾಲ್, ಮುಂಬೈ ಮುಂತಾದ ನಗರಗಳಲ್ಲಿ ಮಹದೇವ್ ಆ್ಯಪ್​​ನೊಂದಿಗೆ ಸಂಪರ್ಕ ಹೊಂದಿದ ಮನಿ ಲಾಂಡರಿಂಗ್ ನೆಟ್‌ವರ್ಕ್‌ಗಳ ವಿರುದ್ಧ ವ್ಯಾಪಕ ಶೋಧ ನಡೆಸಿ ದೊಡ್ಡ ಪ್ರಮಾಣದ ದೋಷಾರೋಪಣೆಯ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದ್ದು, 417 ಕೋಟಿ ರೂಪಾಯಿ ಮೌಲ್ಯದ ಅಪರಾಧದ ಆದಾಯವನ್ನು ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...