ಅತ್ಯಾಚಾರ ಪ್ರಕರಣ | ಆರೋಪಿಯೊಂದಿಗೆ ವಿವಾಹವಾಗಲು ಒಪ್ಪಿದ ಸಂತ್ರಸ್ತೆ; ಆರೋಪಿಗೆ ಒಂದು ತಿಂಗಳ ಗಡುವು ನೀಡಿದ ಹೈಕೋರ್ಟ್‌

Date:

ಅತ್ಯಾಚಾರಕ್ಕೆ ಕೊಳಗಾಗಿದ್ದ ಸಂತ್ರಸ್ತೆ (ಈಗ ವಯಸ್ಕಳು) ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ ನಂತರ ಆರೋಪಿ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿಗೆ ಒಂದು ತಿಂಗಳ ಗಡುವು ನೀಡಿದೆ.

ಕಾಮುಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಆರೋಪಿಯನ್ನು ಬಂಧಿಸಲಾಗಿತ್ತು. ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆ 18ನೇ ವಯಸ್ಸಿಗೆ ಕಾಲಿಟ್ಟಿದ್ದು, ಆಕೆ ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ್ದಾಳೆ.

ಮಂಗಳವಾರ, ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದ ಸಂತ್ರಸ್ತೆ ಮತ್ತು ಆಕೆಯ ತಂದೆ, ‘ವಿಚಾರಣೆಯನ್ನು ರದ್ದುಪಡಿಸಲು ತಮ್ಮ ಅಭ್ಯಂತರವಿಲ್ಲ’ ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂತ್ರಸ್ತೆ ತನ್ನ ಅಫಿಡವಿಟ್‌ನಲ್ಲಿ “ನಾನು ಆರೋಪಿಯನ್ನು ವಿವಾಹವಾಗಲು ಉದ್ದೇಶಿಸಿದ್ದೇನೆ. ಆತನೊಂದಿಗೆ ಸಂತೋಷದ ವೈವಾಹಿಕ ಜೀವನ ನಡೆಸಲು ಬಯಸಿದ್ದೇನೆ. ಆರೋಪಿಯೂ ಅದಕ್ಕೆ ಒಪ್ಪಿದ್ದಾನೆ. ಹೀಗಾಗಿ, ನ್ಯಾಯಾಲಯವು ಆತನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ನನ್ನ ಯಾವುದೇ ಅಭ್ಯಂತರವಿಲ್ಲ” ಎಂದು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದ ಆರೋಪಿಯೂ ಸಂತ್ರಸ್ತೆಯನ್ನು ವಿವಾಹವಾಗಲು ಸಿದ್ದನಿದ್ದೇನೆ ಎಂದು ಹೇಳಿದ್ದಾನೆ.

ಸಂತ್ರಸ್ತೆ ಮತ್ತು ಆರೋಪಿಯ ವಾದ ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡ ಅವರಿದ್ದ ಪೀಠವು, ಆರೋಪಿಯ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಿದೆ. ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಸೂಚನೆ ನೀಡಿದೆ.

“ನ್ಯಾಯಾಲಯದ ಮುಂದೆ ಹಾಜರಾದ ಸಂತ್ರಸ್ತೆಯು ಆರೋಪಿಯೊಂದಿಗೆ ಮದುವೆಯಾಗಲು ಉದ್ದೇಶಿಸಿರುವುದಾಗಿ ಹೇಳಿದ್ದಾರೆ. ಆರೋಪಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರೆಸಿದರೆ ಆರೋಪಿಯ ಸೆರೆವಾಸಕ್ಕೆ ಕಾರಣವಾಗುತ್ತದೆ. ಹೀಗಾಗಿ, ಆರೋಪಿ ವಿರುದ್ಧದ ವಿಚಾರಣೆಯನ್ನು ಒಂದು ತಿಂಗಳೊಳಗೆ ಸಂತ್ರಸ್ತೆಯನ್ನು ಮದುವೆಯಾಗುವ ಷರತ್ತಿನ ಮೇಲೆ ಮುಂದೂಡಲಾಗಿದೆ” ಎಂದು ಹೈಕೋರ್ಟ್‌ ಹೇಳಿದೆ.

“ಆರೋಪಿಯು ಆದೇಶ ಬಂದ ಒಂದು ತಿಂಗಳೊಳಗೆ ಸಂತ್ರಸ್ತೆಯೊಂದಿಗೆ ವಿವಾಹವಾಗಬೇಕು. ವಿವಾಹವನ್ನು ಸಕ್ಷಮ ಪ್ರಾಧಿಕಾರದ ಮುಂದೆ ನೋಂದಾಯಿಸಿಕೊಳ್ಳಬೇಕು” ಎಂದು ಷರತ್ತು ವಿಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...

ಚಿಕ್ಕಬಳ್ಳಾಪುರ | ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರೈತ ಸಂಘ ತೀರ್ಮಾನಿಸಿದೆ: ವೀರಸಂಗಯ್ಯ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ...

ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು...

ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ...