ಸಮ್ಮತಿ ಇಲ್ಲದೆ ಫೋನ್ ರೆಕಾರ್ಡ್ ಮಾಡುವುದು ಖಾಸಗಿ ಹಕ್ಕಿನ ಉಲ್ಲಂಘನೆ; ಛತ್ತೀಸ್‌ಗಡ ಹೈಕೋರ್ಟ್

Date:

ಸಮ್ಮತಿಯಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದರೆ, ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 125ರ ಅಡಿಯಲ್ಲಿ ದಾಖಲಾಗಿದ್ದ ಜೀವನಾಂಶ ಪ್ರಕರಣದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಲಾದ ಗೌಪ್ಯತೆಯ ಹಕ್ಕಿನ ಕುರಿತು ಈ ಹಿಂದೆ ನೀಡಲಾಗಿರುವ ಹಲವು ತೀರ್ಪುಗಳನ್ನು ಅವಲಂಬಿಸಿರುವ ಹೈಕೋರ್ಟ್, “ಒಪ್ಪಿಗೆಯಿಲ್ಲದೆ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡುವುದು ಗೌಪ್ಯತೆಯ ಮೇಲಿನ ಆಕ್ರಮಣಕ್ಕೆ ಸಮಾನವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ 38 ವರ್ಷದ ಮಹಿಳೆಯೊಬ್ಬರು 2021ರ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಸಮ್ಮತಿಯಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡುವುದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ.

ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಕೆಲವು ದೂರವಾಣಿ ಸಂಭಾಷಣೆಗಳ ಆಧಾರದಲ್ಲಿ 44 ವರ್ಷದ ಪತಿ (ಪೊಲೀಸ್ ಕಾನ್‌ಸ್ಟೆಬಲ್‌) ತನ್ನ ಪತ್ನಿಯನ್ನು ಮರು ಪರೀಕ್ಷಿಸಲು ಕೌಟುಂಬಿಕ ನ್ಯಾಯಾಲಯ ಅನುಮತಿ ನೀಡಿತ್ತು.

ಮಹಿಳೆಯ ಪರ ವಕೀಲ ವೈಭವ್ ಗೋವರ್ಧನ್ ಅವರು ಸುಪ್ರೀಂ ಕೋರ್ಟ್ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ನ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ಕೌಟುಂಬಿಕ ನ್ಯಾಯಾಲಯದ ಆದೇಶವು ತನ್ನ ಕಕ್ಷಿದಾರನ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದೆ ಎಂದಿದ್ದರು.

ಇದನ್ನೂ ಓದಿರಿ: ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ ಟಿ ರವಿ ವ್ಯಂಗ್ಯ

ಎರಡೂ ಕಡೆಯ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶ ರಾಕೇಶ್ ಮೋಹನ್ ಪಾಂಡೆ ಅವರು, “ಪ್ರತಿವಾದಿಯು ಅರ್ಜಿದಾರರ ಸಂಭಾಷಣೆಯನ್ನು ಆಕೆಗೆ ತಿಳಿಯದಂತೆ ದಾಖಲಿಸಿದ್ದಾರೆ ಎಂದು ತೋರುತ್ತಿದೆ. ಇದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ತಿಳಿಸಿದ್ದಾರೆ.

“ಇದಲ್ಲದೆ, ಖಾಸಗಿತನದ ಹಕ್ಕು ಸಂವಿಧಾನದ 21 ನೇ ವಿಧಿಯಿಂದ ಕಲ್ಪಿಸಲ್ಪಟ್ಟಿರುವ ಜೀವನದ ಹಕ್ಕಿನ ಅತ್ಯಗತ್ಯ ಅಂಶವಾಗಿದೆ. ಆದ್ದರಿಂದ ಕೌಟುಂಬಿಕ ನ್ಯಾಯಾಲಯವು ಸಿಆರ್‌ಪಿಸಿಯ ಸೆಕ್ಷನ್ 311ರ ಅಡಿಯಲ್ಲಿ ಅರ್ಜಿ ಅನುಮತಿಸಿ ಲೋಪವೆಸಗಿದೆ. ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿ ಪ್ರಮಾಣ ಪತ್ರವನ್ನು ನೀಡಿರುವುದು ತಪ್ಪು” ಎಂದಿದೆ. ಜೊತೆಗೆ ಕೌಟುಂಬಿಕ ನ್ಯಾಯಾಲಯವು ನೀಡಿದ ಆದೇಶವನ್ನು ಈ ಮೂಲಕ ರದ್ದುಪಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...

ಚುನಾವಣೆಗೆ ಜನರ ಬೆಂಬಲ ಬೇಕು, ಹಣವಲ್ಲ; ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಡಿಎಂಕೆ ತಿರುಗೇಟು

ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ʼಲೋಕಸಭೆ ಎಲೆಕ್ಷನ್‌ಗೆ ಸ್ಪರ್ಧೆ...