45 ದಿನಗಳಿಗಿಂತ ಹೆಚ್ಚು ಅವಧಿಯ ತಾತ್ಕಾಲಿಕ ಗುತ್ತಿಗೆಗಳಿಗೂ ಮೀಸಲಾತಿ ಅನ್ವಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

Date:

45 ದಿನಗಳಿಗಿಂತ ಹೆಚ್ಚು ಅವಧಿಯ ತಾತ್ಕಾಲಿಕ ಗುತ್ತಿಗೆಗಳಿಗೂ ಮೀಸಲಾತಿ ಅನ್ವಯವಾಗುತ್ತದೆ. ಈ ಸಂಬಂಧ ಈಗಾಗಲೇ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಆದೇಶ ಹೊರಡಿಸಿದ್ದು, ಜಾರಿಗೊಳಿಸಲು ತಿಳಿಸಿರುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಸರ್ಕಾರಿ ಗುತ್ತಿಗೆ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೀಸಲಾತಿ ಅನುಷ್ಠಾನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಕೇಂದ್ರ ಸರ್ಕಾರವು ಈ ರೀತಿಯ ಹೇಳಿಕೊಂಡಿದೆ.

45 ದಿನ ಅಥವಾ ಅದಕ್ಕಿಂತ ಹೆಚ್ಚಿನ ಸೇವೆ ಇರುವ ತಾತ್ಕಾಲಿಕ ಗುತ್ತಿಗೆ ಹುದ್ದೆ ಇದ್ದರೆ ಅದಕ್ಕೂ ಮೀಸಲಾತಿ ಕೋಟಾ ಅನ್ವಯವಾಗುತ್ತದೆ ಎಂಬ ನೀತಿಯನ್ನು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌, ಅದು ಸರಿಯಾಗಿ ಅನುಷ್ಠಾನವಾಗುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾಮಾಜಿಕ ಕಾರ್ಯಕರ್ತ ಇಮ್ರಾನ್ ಅಹ್ಮದ್ ಎಂಬುವವರು ಸುಪ್ರೀಂ ಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದರು. ಇವರ ಪರವಾಗಿ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದಿಸಿದರಲ್ಲದೇ, ‘ವಿವಿಧ ಸರ್ಕಾರಿ ಇಲಾಖೆಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಇತ್ಯಾದಿಗಳಲ್ಲಿನ ಹೊರಗುತ್ತಿಗೆ/ಗುತ್ತಿಗೆ ಹುದ್ದೆಗಳನ್ನು ಮೀಸಲಾತಿ ನೀತಿಯಡಿ ಭರ್ತಿ ಮಾಡುತ್ತಿಲ್ಲ. ಅಲ್ಲದೇ, ಅಧಿಕೃತ ಮಾಹಿತಿಯ ಪ್ರಕಾರ, ಸರ್ಕಾರಿ ವಲಯದಲ್ಲಿ ಗುತ್ತಿಗೆ-ಹೊರಗುತ್ತಿಗೆ (ತಾತ್ಕಾಲಿಕ) ಉದ್ಯೋಗಿಗಳಿಗೆ ಸಂಬಂಧಿಸಿದಂತೆ ವರ್ಗವಾರು ಅಂಕಿ-ಸಂಖ್ಯೆಯೂ ಸರ್ಕಾರದ ಬಳಿ ಇಲ್ಲ’ ಎಂದು ಸುಪ್ರೀಂ ಕೋರ್ಟಿನ ಗಮನಕ್ಕೆ ತಂದಿದ್ದರು.

ಹಿಂಸಾಚಾರ

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರವು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಂಸದೀಯ ಸಮಿತಿಯು ಕಳೆದ ವರ್ಷ ಈ ಬಗ್ಗೆ ಪರಿಶೀಲನೆ ನಡೆಸಿದೆ. ಈಗಾಗಲೇ ನೀಡಿದ್ದ ಸರ್ಕಾರಿ ಸೂಚನೆಗಳನ್ನು ಅನುಸರಿಸುತ್ತಿಲ್ಲ ಎಂಬುದನ್ನು ಗಮನಿಸಿದೆ. ಹಾಗಾಗಿ, 45 ದಿನ ಅಥವಾ ಅದಕ್ಕಿಂತ ಹೆಚ್ಚಿನ ಸೇವೆ ಇರುವ ತಾತ್ಕಾಲಿಕ ಗುತ್ತಿಗೆ ಹುದ್ದೆ ಇದ್ದರೆ ಅದಕ್ಕೂ ಮೀಸಲಾತಿ ಕೋಟಾ ಅನ್ವಯವಾಗುತ್ತದೆ ಎಂಬ ನೀತಿಯ ಸೂಚನೆಗಳನ್ನು ಅನುಸರಿಸಲು ನಿರ್ದೇಶಿಸಿದೆ. ಅಲ್ಲದೇ, ಈ ಸಂಬಂಧ ಈಗಾಗಲೇ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಆದೇಶ ಹೊರಡಿಸಲಾಗಿದೆ” ಎಂದು ತಿಳಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠವು ಈ ಸಂಬಂಧ ಕಳೆದ ಅಕ್ಟೋಬರ್ 3 ರಂದು ಆದೇಶ ಕೂಡ ಹೊರಡಿಸಿದೆ. ಆದೇಶದಲ್ಲಿ, ‘ಮೀಸಲಾತಿ ಸಂಬಂಧ ಸರ್ಕಾರ ನೀಡಿರುವ ಮಾರ್ಗಸೂಚನೆಯನ್ನು ಸಂಬಂಧಪಟ್ಟವರು ಉಲ್ಲಂಘಿಸಿದ್ದು ಕಂಡುಬಂದರೆ, ಅರ್ಜಿದಾರರು ಅಥವಾ ಬಾಧಿತರು ಕಾನೂನಿನ ಪ್ರಕಾರ ಸೂಕ್ತ ಪರಿಹಾರ ಪಡೆದುಕೊಳ್ಳಲು ಮುಂದಾಗಬಹುದು’ ಎಂದು ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...