ರಿಷಬ್‌ ಶೆಟ್ಟಿ ಬಿಜೆಪಿ ಸಿದ್ಧಾಂತಕ್ಕೆ ಹತ್ತಿರದವರು ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Date:

ಮುಖ್ಯಮಂತ್ರಿ ಬೊಮ್ಮಾಯಿ ಜೊತೆಗೆ ಮೂಕಾಂಬಿಕೆ ದರ್ಶನ ಪಡೆದ ರಿಷಬ್‌

ರಿಷಬ್‌ ಶೆಟ್ಟಿ ಭೇಟಿಯಾಗಿದ್ದು ಆಕಸ್ಮಿಕ ಎಂದ ಬಸವರಾಜ ಬೊಮ್ಮಾಯಿ

ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕುಟುಂಬಸ್ಥರ ಜೊತೆಗೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ರಿಷಬ್‌, ಮುಖ್ಯಮಂತ್ರಿಗಳ ಜೊತೆ ಕಾಣಿಸಿಕೊಳ್ಳುತ್ತಲೇ ಸುದೀಪ್‌ ರೀತಿಯಲ್ಲಿ ಅವರು ಕೂಡ ಬಿಜೆಪಿ ಪರ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿತ್ತು. ಈ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ರಿಷಬ್‌ ಬಿಜೆಪಿ ಸಿದ್ಧಾಂತಕ್ಕೆ ಹತ್ತಿರ ಇರುವ ವ್ಯಕ್ತಿ ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೂಕಾಂಬಿಕೆಯ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ರಿಷಬ್‌ ಶೆಟ್ಟಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. “ರಿಷಬ್‌ ಅವರು ಕೊಲ್ಲೂರಿಗೆ ಬಂದಿರುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಅವರು ಮೊದಲಿಂದಲೂ ನನಗೆ ಒಳ್ಳೆಯ ಸ್ನೇಹಿತರು. ನಮ್ಮ ಸಿದ್ಧಾಂತಕ್ಕೆ ಹತ್ತಿರ ಇರುವವರು. ಚುನಾವಣಾ ಪ್ರಚಾರದ ಬಗ್ಗೆ ಅವರೊಂದಿಗೆ ಚರ್ಚೆ ನಡೆದಿಲ್ಲ. ಸದ್ಯದ ಮಟ್ಟಿಗೆ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಯಾವುದೇ ಯೋಚನೆ ಇಲ್ಲ” ಎಂದಿದ್ದಾರೆ.

ಸ್ಯಾಂಡಲ್‌ವುಡ್‌ನ ಖ್ಯಾತ ನಟ ಸುದೀಪ್‌ ಇತ್ತೀಚೆಗಷ್ಟೇ ತಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಿಸಿದ್ದರು. ರಿಷಬ್‌ ಶೆಟ್ಟಿ ಕೂಡ ಆಗಾಗ ತಾವು ಬಿಜೆಪಿ ಪರ ಎಂಬುದನ್ನು ಸಾಬೀತು ಪಡಿಸುತ್ತಲೇ ಬಂದಿದ್ದಾರೆ. ಬಸವರಾಜ ಬೊಮ್ಮಾಯಿ ಮತ್ತು ರಿಷಬ್‌ ಶೆಟ್ಟಿ ಅವರ ಆಕಸ್ಮಿಕ ಭೇಟಿ ರಾಜಕೀಯ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಎಂಕೆ ನೇತೃತ್ವದ ಮೈತ್ರಿಗೆ ಸೇರ್ಪಡೆಗೊಂಡ ಕಮಲ್ ಹಾಸನ್ ಪಕ್ಷ

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕನ್ನಡ ವಿಭಾಗದಲ್ಲಿ ‘ನಿರ್ವಾಣ’ ತುಳು ಚಿತ್ರಕ್ಕೆ ಪ್ರಶಸ್ತಿ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು(ಮಾ.7) ತೆರೆಬಿದ್ದಿದ್ದು, ಕನ್ನಡ ವಿಭಾಗದಲ್ಲಿ ತುಳು...

ಇಫ್ ಓನ್ಲಿ ಐ ಕುಡ್ ಹೈಬರ್ನೇಟ್ | ಕುಟುಂಬದ ಕಷ್ಟವನ್ನು ಜಗತ್ತಿನ ಜನರೆದೆಗೆ ದಾಟಿಸುವ ಮಂಗೋಲಿಯನ್ ಮೂವಿ

ಮಂಗೋಲಿಯಾದ ಜನ ಚಳಿಗಾಲವನ್ನು ದಾಟುವಂತೆ, ಉಲ್ಝಿ ಎಂಬ ಹುಡುಗ ತನಗೆ ಎದುರಾಗಿರುವ...

‘ಟೆರಸ್ಟ್ರಿಯಲ್ ವರ್ಸಸ್’ ಸಿನಿಮಾ: ‘ಹಿಂದೂರಾಷ್ಟ್ರ ಕಟ್ಟುತ್ತೇವೆ’ ಎನ್ನುವವರಿಗೂ ಇಲ್ಲಿದೆ ಪಾಠ

ಬಹುತ್ವ ಭಾರತವು ಉಳಿದಾಗ ಮಾತ್ರ ಸಂವಿಧಾನ ಉಳಿಯುತ್ತದೆ. ಈ ಕಾರಣಕ್ಕೆ 'ಟೆರಸ್ಟ್ರಿಯಲ್...