ಕುಸ್ತಿಪಟುಗಳ ಹೋರಾಟಕ್ಕೆ ರಾಬಿನ್ ಉತ್ತಪ್ಪ ಬೆಂಬಲ

Date:

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ [ಡಬ್ಲ್ಯೂಎಫ್ಐ] ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಕ್ರಮ ಮತ್ತು ಬಂಧನದ ವಿರುದ್ಧ ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಧ್ವನಿ ಎತ್ತಿದ್ದಾರೆ. ಇದರ ಬೆನ್ನಲ್ಲೇ ಮತ್ತೋರ್ವ ಕನ್ನಡಿಗ, ಕ್ರಿಕಟಿಗ ರಾಬಿನ್ ಉತ್ತಪ್ಪ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದಾರೆ.

“ನಮ್ಮ ಕುಸ್ತಿ ಹೀರೋಗಳ ಮೇಲಾಗುತ್ತಿರುವ ಧೋರಣೆಯನ್ನು ಕೇಳಿ ದುಃಖವಾಗುತ್ತಿದೆ. ಇದಕ್ಕೆ ಶಾಂತಿಯುತ ಹೋರಾಟದಲ್ಲಿ ಪರಿಹಾರ ಮಾರ್ಗವಿದೆ ಎಂದು ನಾನು ಭಾವಿಸುತ್ತೇನೆ. ಅದು ಬೇಗ ಆಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ರಾಬಿನ್ ಉತ್ತಪ್ಪ ಟ್ವಿಟ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಳೆದ ಏಪ್ರಿಲ್ ತಿಂಗಳಿನಿಂದ ದೇಶದ ಕುಸ್ತಿಪಟುಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.

ಪ್ರತಿಭಟನಾ ನಿರತ ಭಾರತೀಯ ಕುಸ್ತಿಪಟುಗಳನ್ನು ರಸ್ತೆಯಲ್ಲಿ ಎಳೆದೊಯ್ದು ಬಂಧಿಸಿದ ದಿಲ್ಲಿ ಪೊಲೀಸರ ನಡೆಯನ್ನು ಒಲಿಪಿಂಕ್ಸ್‌ ಚಿನ್ನದ ಪದಕ ವಿಜೇತ ನೀರಜ್‌ ಚೋಪ್ರಾ, ಭಾರತ ಫುಟ್ಬಾಲ್‌ ತಂಡದ ನಾಯಕ ಸುನೀಲ್ ಛೆಟ್ರಿ, ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್‌ ಇರ್ಫಾನ್‌ ಪಠಾಣ್‌ ಸೇರಿದಂತೆ ಹಲವು ಕ್ರೀಡಾಪಟುಗಳು ಖಂಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...