ವಿಶ್ವಕಪ್ | ಕೇನ್ ವಿಲಿಯಮ್ಸನ್ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ

Date:

ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ವಿಶ್ವಕಪ್‌ನಲ್ಲಿ ಅತ್ಯಂತ ಪ್ರಭಾವಶಾಲಿ ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಆಡಿದ ಬಹುತೇಕ ಎಲ್ಲ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಆ ಮೂಲಕ ಆರಂಭಿಕ ಮುನ್ನಡೆ ನೀಡಿ, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇಂದಿನ ಫೈನಲ್‌ ಪಂದ್ಯದಲ್ಲೂ ಕೇವಲ 31 ಎಸೆತಗಳಲ್ಲಿ 47 ರನ್ ಗಳಿಸಿ ನಂತರ ವಿಕೆಟ್ ಒಪ್ಪಿಸಿದ್ದಾರೆ. ಟೂರ್ನಿಯಲ್ಲಿ ಒಟ್ಟು 597 ರನ್‌ಗಳನ್ನು ಕೂಡಿ ಹಾಕಿದ್ದಾರೆ. ಇದು ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ತಂಡವೊಂದರ ನಾಯಕ ಗಳಿಸಿದ ಗರಿಷ್ಠ ಮೊತ್ತವಾಗಿ ದಾಖಲೆಯಾಗಿದೆ. 2019 ರಲ್ಲಿ 578 ರನ್ ಬಾರಿಸಿದ್ದ ಕೇನ್ ವಿಲಿಯಮ್ಸನ್ ಅವರ ಮೊತ್ತ ಇದುವರೆಗಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿದ್ದಾರೆ. ಈ ಸಾಧನೆಯ ಪಟ್ಟಿಯಲ್ಲಿ ಶ್ರೀಲಂಕಾದ ನಾಯಕನಾಗಿದ್ದ ಮಹೇಲಾ ಜಯವರ್ಧನೆ 548 ರನ್‌ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೋಹಿತ್ ಶರ್ಮಾ ಅವರ 597 ರನ್‌ಗಳು 125.95 ಸ್ಟ್ರೈಕ್ ರೇಟ್‌ನಲ್ಲಿ ಬಂದಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅವರ ಅತ್ಯಧಿಕ ಸ್ಕೋರ್ ಅಫ್ಘಾನಿಸ್ತಾನ ವಿರುದ್ಧವಾಗಿತ್ತು. ಕೇವಲ 84 ಎಸೆತಗಳಲ್ಲಿ 131 ರನ್ ಗಳಿಸಿದ್ದರು. ಆದರೆ ಪಂದ್ಯಾವಳಿಯುದ್ದಕ್ಕೂ ಅವರು ಭಾರತ ತಂಡದ ಗೆಲುವಿನಲ್ಲಿ ಸಾಕಷ್ಟು ಪ್ರಭಾವ ಬೀರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌...

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...