ರೋಹಿತ್ ವೇಮುಲ: ಮತ್ತೆ ಮರುಹುಟ್ಟು ಪಡೆಯಬೇಕಾಗಿತ್ತು ಎನ್ನುತ್ತಾರೆ ದೇವನೂರ ಮಹಾದೇವ

Date:

ರೋಹಿತ್ ವೇಮುಲ ತನ್ನ ಡೆತ್‍ನೋಟ್‍ನಲ್ಲಿ ”ಈ ನಿಮಿಷದಲ್ಲಿ ನಾನು… ಖಾಲಿಯಾಗಿದ್ದೇನೆ” ಎಂದು ಬರೆದಿದ್ದಾನೆ. ಜರ್ಝರಿತ ಆ ಅಮಾನವೀಯ ಆ ಖಾಲಿಯಾದ ಸ್ಥಿತಿಯಲ್ಲಿ ಸಂಭಾಳಿಸಿಕೊಂಡು ಅಂಬೇಡ್ಕರ್ ಮರುಹುಟ್ಟು ಪಡೆಯುತ್ತಾರೆ. ಧಾರಣಾಶಕ್ತಿಯನ್ನು ಕೂಡಿಸಿಕೊಂಡು ವಿಷಕಂಠನಂತಾಗುತ್ತಾರೆ. ಆದರೆ ವೇಮುಲ, ಅಂಬೇಡ್ಕರರ ಶೇಕಡ ಹತ್ತರಷ್ಟು ಅವಮಾನ, ತಾರತಮ್ಯಗಳನ್ನು ಅನುಭವಿಸದ ವೇಮುಲ, ತನ್ನ ಅಸಹಾಯಕ ಸಮುದಾಯಕ್ಕೆ ಬೆಳಕಾಗಬೇಕಿದ್ದ ರೋಹಿತ್ ವೇಮುಲ, ಆ ಖಾಲಿಯಾದ ಸ್ಥಿತಿಯೊಳಗಿಂದಲೇ ಅಂಬೇಡ್ಕರರಂತೆ ಮರುಹುಟ್ಟು ಪಡೆಯಬೇಕಾಗಿತ್ತು

ರೋಹಿತ್ ವೇಮುಲನ ಬಗ್ಗೆ ಒಂದು ಸಣ್ಣ ಟಿಪ್ಪಣಿ ಬರೆಯಲು ಕೂತಾಗಲೆಲ್ಲಾ ರೋಹಿತನ ಮುಖ, ಆತನು ಬರೆದ ಡೆತ್‍ನೋಟ್ ಕಲೆಸಿಕೊಂಡು ಕಣ್ಮುಂದೆ ನಿಲ್ಲುತ್ತದೆ. ಇದಕ್ಕೆ ಪದಗಳು ಸಿಗುತ್ತಿಲ್ಲ.

…ಸಾಯುವ ಕ್ಷಣಗಳಲ್ಲಿ ಬರೆದ ಆ ಡೆತ್‍ನೋಟ್‍ ಅನ್ನು ರೋಹಿತ್ ಯಾರಿಗೆ ಬರೆದ? ಓದಿದರೆ ಈ ಭೂಮಿ ಉದ್ದೇಶಿಸಿ ಮಾತಾಡುತ್ತಿದ್ದಾನೆ ಅನ್ನಿಸುತ್ತದೆ. ಅವನು ಸತ್ತು, ಆ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳುವ ರೋಹಿತ್ ಈಗ ಬದುಕುತ್ತಿರುವವರಿಗೆ ಅಂದರೆ ನಾಳೆ ಸಾಯುವವರಿಗೆ ಅಣುಕಿಸುತ್ತಿದ್ದಾನೊ ಅಥವಾ ಸಾಂತ್ವನ ಹೇಳುತ್ತಿದ್ದಾನೊ?

ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದ ರೋಹಿತನು ಡಿಸೆಂಬರ್ 18, 2015 ರಲ್ಲಿ ಉಪಕುಲಪತಿಗೆ ಬರೆದ ಪತ್ರದಲ್ಲಿ-

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

”ಎಲ್ಲಾ ದಲಿತ ವಿದ್ಯಾರ್ಥಿಗಳಿಗೂ ಅವರ ಪ್ರವೇಶಾತಿಯ ಸಮಯದಲ್ಲಿ 10 ಮಿಲಿಗ್ರಾಂ ಸೋಡಿಯಂ ಆಕ್ಸೈಡ್ ಕೊಡಿ. ಅಂಬೇಡ್ಕರ್ ಅನ್ನು ಓದಬೇಕು ಅನ್ನಿಸಿದಾಗ ಅವರಿಗೆ ಅದನ್ನು ತಿನ್ನಲು ಸೂಚನೆ ನೀಡಿ”,

”ಒಂದು ಒಳ್ಳೆಯ ಹಗ್ಗವನ್ನು ಎಲ್ಲಾ ದಲಿತ ವಿದ್ಯಾರ್ಥಿಗಳ ಕೊಠಡಿಗೆ ನಿಮ್ಮ ಗೆಳೆಯರಾದ ಮಹಾನ್ ವಾರ್ಡನ್ ಅವರಿಗೆ ಹೇಳಿ ಸರಬರಾಜು ಮಾಡಿಸಿ.”

ಈ ಮಾತುಗಳಲ್ಲಿ ರೋಹಿತನ ಅಗ್ನಿಪರ್ವತದಿಂದ ಹೊಮ್ಮುವ ಲಾವಾರಸದಂಥ ಮಾತುಗಳಲ್ಲಿ ಆತನ ಸಾವಿನ ಕಾರಣ ಅಡಗಿ ಕೂತಿದೆ.

ಆದರೂ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದು ನೇಣಿಗೆ ಜೀವ ಕೊಡುವ ರೋಹಿತನ ಪ್ರಜ್ಞೆ ಹೇಗಿರಬಹುದು? ತನ್ನ ಸುತ್ತಲ ಜಗತ್ತು ಹೇಗೆ ಕಂಡಿರಬಹುದು? ಈ ಜಾತಿ ಈ ಮತ ಈ ಸುಳ್ಳು, ಈ ತಾರತಮ್ಯ ವಂಚನೆಗಳಲ್ಲಿ ಬದುಕು ಸವೆಸುತ್ತಿರುವ ತನ್ನ ಸುತ್ತಲ ಸಮೂಹವು ಕ್ಷುದ್ರಜೀವಿಗಳು, ಹುಳುಗಳು ಎಂದು ಅನ್ನಿಸದಿದ್ದರೆ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆಯಲು ರೋಹಿತನಿಗೆ ಸಾಧ್ಯವಾಗುತ್ತಿತ್ತೇ? ಅದಕ್ಕೇ ಆತನಿಗೆ ಈ ಬದುಕು ಅಸಹ್ಯ ಅನ್ನಿಸಿರಬೇಕು. ಸಹ್ಯ ಮಾಡಿಕೊಳ್ಳಲು ಆತ ಆಕಾಶಕ್ಕೆ ನೆಗೆದು ಬಿಡುತ್ತಾನೇನೊ?

ಹೀಗಿದ್ದೂ, ಭಾರತವನ್ನಾಳುವ ಸಂಸತ್‍ನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರು ”ರೋಹಿತ್ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾನೆ” ಎಂದು ಹೇಳಿ ಅದು ಸಾಲದೆ ಸುಳ್ಳಿನ ಹೂಮಾಲೆ ಕಟ್ಟಿ ಸಂಸತ್‍ ಅನ್ನೆ ಕುಬ್ಜಗೊಳಿಸಿಬಿಟ್ಟರು. ನಾಚಿಕೆಯನ್ನೇ ಕೊಂದುಬಿಟ್ಟರು. ಸಂಸತ್‍ ಅನ್ನು ಸಂವೇದನಾಹೀನ ಕುಷ್ಠ ಜೀವಿಗಳ ಸಂತೆ ಮಾಡಿಬಿಟ್ಟರು. ಇರಲಿ…

ವಿದೇಶಗಳಲ್ಲಿ ಉನ್ನತ ವ್ಯಾಸಂಗ ಪೂರೈಸಿ ಅಂಬೇಡ್ಕರ್, 1917ರಲ್ಲಿ ಭಾರತದ ಬರೋಡಾಕ್ಕೆ ಬಂದು ಎಲ್ಲೂ ಮನೆ ಸಿಗದೆ ಕೊನೆಗೆ ಪಾರ್ಸಿ ಹೋಟೆಲಿನಲ್ಲಿ ಸುಳ್ಳು ಜಾತಿ ಹೇಳಿ ಉಳಿದುಕೊಂಡಿದ್ದಾಗ ಮಹರ್ ಎಂದು ಗೊತ್ತಾಗಿ ಹೋಟೆಲ್‍ನಿಂದ ಅಂಬೇಡ್ಕರ್ ರನ್ನು ಅವಮಾನಕರವಾಗಿ ಹೊರ ಹಾಕಲ್ಪಟ್ಟ ಆ ದಿಕ್ಕೆಟ್ಟ ಸಂದರ್ಭದ ಬಗ್ಗೆ ಅಂಬೇಡ್ಕರ್ ಬರೆಯುತ್ತಾ ”ನನ್ನ ತಲೆ ಖಾಲಿಯಾಗಿತ್ತು” ಎನ್ನುತ್ತಾರೆ.

ವೇಮುಲನು ತನ್ನ ಡೆತ್‍ನೋಟ್‍ನಲ್ಲಿ ”ಈ ನಿಮಿಷದಲ್ಲಿ ನಾನು… ಖಾಲಿಯಾಗಿದ್ದೇನೆ” ಎಂದು ಬರೆದಿದ್ದಾನೆ. ಜರ್ಝರಿತ ಆ ಅಮಾನವೀಯ ಆ ಖಾಲಿಯಾದ ಸ್ಥಿತಿಯಲ್ಲಿ ಸಂಭಾಳಿಸಿಕೊಂಡು ಅಂಬೇಡ್ಕರ್ ಮರುಹುಟ್ಟು ಪಡೆಯುತ್ತಾರೆ. ಧಾರಣಾಶಕ್ತಿಯನ್ನು ಕೂಡಿಸಿಕೊಂಡು ವಿಷಕಂಠನಂತಾಗುತ್ತಾರೆ. ಆದರೆ ವೇಮುಲ, ಅಂಬೇಡ್ಕರರ ಶೇಕಡ ಹತ್ತರಷ್ಟು ಅವಮಾನ, ತಾರತಮ್ಯಗಳನ್ನು ಅನುಭವಿಸದ ವೇಮುಲ, ತನ್ನ ಅಸಹಾಯಕ ಸಮುದಾಯಕ್ಕೆ ಬೆಳಕಾಗಬೇಕಿದ್ದ ವೇಮುಲ, ಆ ಖಾಲಿಯಾದ ಸ್ಥಿತಿಯೊಳಗಿಂದಲೇ ಅಂಬೇಡ್ಕರರಂತೆ ಮರುಹುಟ್ಟು ಪಡೆಯಬೇಕಾಗಿತ್ತು, ಅಂತ ಅವನ ಮುಖ ನೆನಪಾದಾಗಲೆಲ್ಲಾ ಅನ್ನಿಸುತ್ತದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಟಿ ಕೋಟಿ ಲೂಟಿ ಮಾಡಿದ ಸ್ಕ್ಯಾಮರ್‌ಗಳನ್ನು ಮೋದಿ ಸರ್ಕಾರ ಮಟ್ಟ ಹಾಕಿದ್ದು ಹೀಗೆ!

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೋಕಸಭೆಯಲ್ಲಿ ಮಾತನಾಡುತ್ತಾ, "ಕಾಂಗ್ರೆಸ್‌ ಮತ್ತು...

ಬಾಬಾ ರಾಮ್‌ದೇವ್‌ಗೂ ಪ್ರಧಾನಿ ಮೋದಿಗೂ ಏನು ಸಂಬಂಧ? ಕೇಂದ್ರ ಸರ್ಕಾರವೇಕೆ ಕಣ್ಮುಚ್ಚಿ ಕೂತಿದೆ?

ಸನಾತನದ ನೆಪದಲ್ಲಿ ದೇಶವನ್ನು ಪುರಾತನ ಕಾಲಕ್ಕೆ ಕೊಂಡೊಯ್ಯುತ್ತಿರುವ ಸಂಘಿಗಳ ಸಾರಥ್ಯದ ಬಿಜೆಪಿಯ...

ಡಾ ಮಂಜುನಾಥ್ ರಾಜಕಾರಣದಲ್ಲಿ ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು

ಇತ್ತೀಚಿನ ದಿನಗಳಲ್ಲಿ ಕೆಲವು ಅವಿವೇಕಿಗಳು ಮತ್ತು ಜಾತಿವಾದಿಗಳು ಡಾ ಮಂಜುನಾಥ್ ಅವರು...

ಬಿಜೆಪಿ & ಗೋದಿ ಮೀಡಿಯಾ ʼಪಾಕಿಸ್ತಾನ್‌ ಜಿಂದಾಬಾದ್‌ ಎಂದರುʼ ಎಂಬ ಸುಳ್ಳನ್ನು ಹಬ್ಬಿಸಿದ 22 ಪ್ರಕರಣಗಳು

'ಪಾಕಿಸ್ತಾನ್‌ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು...