ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಆರ್ಎಸ್ಎಸ್ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ನಿವಾಸಿ ರಾಜು ಎಂಬಾತ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ‘ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುವ ಫ್ಯಾಕ್ಟರಿಗಳು’ ಎಂದು ಬಿಂಬಿಸುವ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿದ್ದರು. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದ ನೂರಾರು ಮಂದಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಬಂದ ಡಿಎಸ್ಪಿ ವೇಣುಗೋಪಾಲ್, “ಆರೋಪಿ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.
ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ. ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.