ಮಂಡ್ಯ | ಕೇಸರಿ ಧ್ವಜ ವಿವಾದ: ಗ್ರಾಮ ಪಂ. ಸರ್ಕಾರಿ ಜಾಗದಲ್ಲಿ ರಾಷ್ಟ್ರಧ್ವಜ ಹಾರಿಸಲಷ್ಟೇ ಅವಕಾಶ: ಸಚಿವ

Date:

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಎದುರು ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಎನ್ ಚಲಯವರಾಯಸ್ವಾಮಿ, “ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರಧ್ವಜ ಹಾರಿಸಲು ಮಾತ್ರವೇ ಅವಕಾಶವಿದೆ. ಅದರ ಹೊರತಾಗಿ, ಯಾವುದೇ ರಾಜಕೀಯ, ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದು ಹೊರತು ಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸಿದ್ದಾರೆ. ಅದು ತಪ್ಪು. ಇವತ್ತು ಬಿಟ್ಟರೆ, ನಾಳೆ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಾರಿಸ್ತೀವಿ ಅಂತಾರೆ. ಆಗ ಅವಕಾಶ ಕೊಡಲು ಆಗುತ್ತಾ? ಒಂದು ಕಡೆ ಅವಕಾಶ ಕೊಟ್ರೆ ಎಲ್ಲ ಕಡೆ ಕೇಳ್ತಾರೆ” ಎಂದಿದ್ದಾರೆ.

“ಸ್ಥಳೀಯ ಯುವಕರು ಒಳ್ಳೆಯವರೇ, ಅವರನ್ನ ಕೆಲವರು ದಾರಿ ತಪ್ಪಿಸುತ್ತಿದ್ದಾರೆ. ಎಲ್ಲ ಯುವಕರ ಜೊತೆ ಮಾತನಾಡುತ್ತೇನೆ. ಹನುಮ ಧ್ವಜ ಹಾರಿಸಲು ಖಾಸಗಿ ಜಾಗದಲ್ಲಿ ಅಥವಾ ದೇವಾಲಯದ ಮುಂದೆ ಹಾಕಲು ಅವಕಾಶ ಕೊಡೊಣ. ಆದರೆ, ಸರ್ಕಾರಿ ಕಚೇರಿ ಮುಂದೆ ಬೇಡ” ಎಂದರು‌.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಕೇಸರಿ ಧ್ವಜ ತೆರವಿಗೆ ಹಿಂದುತ್ವವಾದಿಗಳ ವಿರೋಧ

“ನಾನು ರಾಮ ಭಕ್ತ, ನಮ್ಮ ಮನೆ ದೇವರು ವಿಷ್ಣು. ನಾವು ಯಾವುದೇ ಧ್ವಜದ ವಿರೋಧಿಗಳಲ್ಲ. ಪಂಚಾಯತಿ ಸಭೆಯಲ್ಲಿ ಹನುಮ ಧ್ವಜ ಹಾರಿಸಲು ಅನುಮೋದನೆ ನೀಡದ್ದರೆ ತಪ್ಪು. ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ನಾನಾಗಲಿ, ಸ್ಥಳೀಯ ಶಾಸಕರಾಗಲಿ ರಾಜಕೀಯ ಮಾಡ್ತಿಲ್ಲ. ಸರ್ಕಾರಿ ಕಚೇರಿ ಮುಂದೆ ಹನುಮ ಧ್ವಜ ಹಾರಿಸಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಹೀಗಾಗಿ, ಅದನ್ನು ತೆರವು ಮಾಡಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು...

ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು...