ಚಂದ್ರಶೇಖರ್ ಆಜಾದ್‌ ಭೇಟಿ ಮಾಡಿದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ

Date:

ಅಂತರರಾಷ್ಟ್ರೀಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಗುಂಡೇಟಿನಿಂದ ದಾಳಿಗೊಳಗಾಗಿರುವ ಆಜಾದ್ ಸಮಾಜ್ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪುನಿಯಾ, “ಚಂದ್ರಶೇಖರ್ ಆಜಾದ್ ಯಾವುದೇ ಒಂದು ಸಮಾಜದ ನಾಯಕನಲ್ಲ. ಅವರು ಇಡೀ ಸಮಾಜದ ನಾಯಕ. ಅದು ರೈತ ಚಳವಳಿಯಾಗಲಿ ಅಥವಾ ಕುಸ್ತಿಪಟುಗಳ ಹೋರಾಟವೇ ಆಗಿರಲಿ, ಅವರು ಸತ್ಯಕ್ಕಾಗಿ ಹೋರಾಡುವ ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ನಿಂತಿದ್ದಾರೆ. ಭೀಮ್ ಆರ್ಮಿ ಮುಖ್ಯಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದಾಗ ನಾವು ಭೇಟಿಯಾಗಲು ಇಲ್ಲಿಗೆ ಬಂದಿದ್ದೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಸಂತ್ರಸ್ತ ಪರಿಹಾರ ಶಿಬಿರದಲ್ಲಿ ಮಕ್ಕಳೊಂದಿಗೆ ಆಹಾರ ಸೇವಿಸಿದ ರಾಹುಲ್‌ ಗಾಂಧಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದು ನಾಚಿಕೆಗೇಡಿನ ಸಂಗತಿ. ಇಂದು ಸತ್ಯಕ್ಕಾಗಿ ಹೋರಾಡುವವರ ಮೇಲೆ ಮಾತ್ರ ದಾಳಿ ಮಾಡಲಾಗುತ್ತಿದೆ. ಪೊಲೀಸರು ಕೂಡಲೇ ದಾಳಿಕೋರರನ್ನು ಬಂಧಿಸಬೇಕು” ಎಂದು ಪುನಿಯಾ ಆಗ್ರಹಿಸಿದ್ದಾರೆ.

ಬುಧವಾರ ಸಂಜೆ(ಜೂನ್‌ 28) ಸಹರಾನ್‌ಪುರ ಜಿಲ್ಲೆಯ ದಿಯೋಬಂದ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡು ಹಾರಿಸಿದ್ದು ಈ ದಾಳಿಯಲ್ಲಿ ಚಂದ್ರಶೇಖರ್ ಆಜಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ಸಹರಾನ್‌ಪುರದ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

ಆಜಾದ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಎಸ್‌ಯುವಿಯಲ್ಲಿ ಹಿಂತಿರುಗುತ್ತಿದ್ದಾಗ ದೇವಬಂದ್‌ನ ಗಾಂಧಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಛತ್ತೀಸ್‌ಗಢ| ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್...

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...