ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲು ಮೊತ್ತ ₹50 ಲಕ್ಷ ದಿಂದ ₹1 ಕೋಟಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Date:

  • 2023ರ ಫೆಬ್ರವರಿ 17ರಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಸಿಎಂ
  • ₹1 ಕೋಟಿ ಮೊತ್ತದ ಕಾಮಗಾರಿಗಳಲ್ಲಿ ಶೇ 24ರಷ್ಟು ಮೀಸಲಾತಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ನೀಡಲಾಗುವ ಕಾಮಗಾರಿಗಳ ಗುತ್ತಿಗೆ ಮೊತ್ತವನ್ನು ₹50 ಲಕ್ಷದಿಂದ ₹1 ಕೋಟಿಗೆ ವಿಸ್ತರಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲಾತಿ ಪ್ರಮಾಣವನ್ನು ₹50 ಲಕ್ಷ ದಿಂದ ₹1 ಕೋಟಿಗೆ ಹೆಚ್ಚಿಸಬೇಕು ಎಂದು 2018ರಲ್ಲಿಯೇ ಘೋಷಣೆ ಮಾಡಲಾಗಿತ್ತು. ಅನುಷ್ಠಾನಗೊಳ್ಳುವುದು ಬಾಕಿ ಇತ್ತು. 2023ರ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಅಂಶವನ್ನು ಪುನಃ ಘೋಷಿಸಿದ್ದರು.

ಗುತ್ತಿಗೆಯ ಮೀಸಲು ಮೊತ್ತ ಹೆಚ್ಚಳದ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಎನ್ ಮಹದೇವ ಸ್ವಾಮಿ, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ₹50 ಲಕ್ಷದವರೆಗಿನ ಸಣ್ಣ ಕಾಮಗಾರಿಗಳಲ್ಲಿ ಶೇ.24ರವರೆಗೆ ಮೀಸಲಾತಿ ನಿಗದಿ ಮತ್ತು ಗುತ್ತಿಗೆ ಮೊತ್ತವನ್ನು ₹1 ಕೋಟಿಗೆ ಹೆಚ್ಚಳ ಮಾಡುವುದಾಗಿ ಘೋಷಿಸಿರುವುದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದೆವು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ…

“ಬಹಳಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡುವ ಜೊತೆಗೆ ಹೋರಾಟಗಳ ಮೂಲಕ ಗಮನ ಸೆಳೆದಿದ್ದೇವು. 2023ರ ಬಜೆಟ್‌ನಲ್ಲಿ ಪುನಃ ಅದೇ ವಿಚಾರವನ್ನು ಘೋಷಣೆ ಮಾಡಿದ್ದರು. ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಸುಗ್ರೀವಾಜ್ಞೆ ಹೊರಡಿಸಬೇಕು ಎಂಬುದು ನಮ್ಮ ಆಗ್ರಹವಾಗಿತ್ತು. ಅದರಂತೆಯೇ ಇಂದು ಆದೇಶ ಮಾಡಲಾಗಿದೆ” ಎಂದು ಸಂತಷ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...