ಬ್ರಾಹ್ಮಣ-ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ₹5.53 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ

Date:

  • ಬ್ರಾಹ್ಮಣ ಸಮಾಜದ 2710 ವಿದ್ಯಾರ್ಥಿಗಳಿಗೆ ₹3.78 ಕೋಟಿ ರೂ.
  • ಆರ್ಯ ವೈಶ್ಯ ಸಮಾಜದ 1,357 ವಿದ್ಯಾರ್ಥಿಗಳಿಗೆ ₹1.75 ಕೋಟಿ ರೂ

ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4,067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ₹5.53 ಕೋಟಿ ರೂ ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಿದರು.

ಹಣ ವರ್ಗಾವಣೆ ನಂತರ ಮಾತನಾಡಿದ ಅವರು, “ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಎರಡೂ ಸಮಾಜದ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜಕ್ಕೆ ಬೆಳಕಾಗಬೇಕು” ಎಂದು ಹಾರೈಸಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವಿದ್ಯಾರ್ಥಿ ವೇತನದ ವಿವರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023-24ನೇ ಸಾಲಿನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2710 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲಾಗಿದೆ.

ಪದವಿಪೂರ್ವ (ಪಿಯುಸಿ) ವ್ಯಾಸಾಂಗ ಮಾಡುತ್ತಿರುವ 758 ಬ್ರಾಹ್ಮಣ ವಿದ್ಯಾರ್ಥಿಗಳಿಗೆ 15,000 ರೂ. ಎಂಬಂತೆ 113.70 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ. ವೃತ್ತಿಪರ ಕೋರ್ಸ್ ವ್ಯಾಸಾಂಗದ 1952 ವಿದ್ಯಾರ್ಥಿಗಳಿಗೆ ಅವರ ಒಟ್ಟು ಶುಲ್ಕದ 2/3 ಭಾಗ ವಿದ್ಯಾರ್ಥಿ ವೇತನವಾಗಿ 2.65 ಕೋಟಿ ರೂ ಎಂಬಂತೆ ಒಟ್ಟು 3.78 ಕೋಟಿ ರೂ. ನಿಗಮದ ಮೂಲಕ ಪಾವತಿಸಲಾಗಿದೆ.

ಆರ್ಯ ವೈಶ್ಯ ಅಭಿವೃದ್ಧಿ ನಗಮ ವಿದ್ಯಾರ್ಥಿ ವೇತನದ ವಿವರ

2023-24ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 1,357 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲಾಗಿದೆ.

ವೃತ್ತಿಪರ ಪದವಿ ಮತ್ತು ಸ್ನಾತ್ತಕೋತ್ತರ ಪದವಿಗಳಿಗೆ ಗರಿಷ್ಠ 1.20 ಲಕ್ಷ ರೂ.ವರೆಗೆ ಹಾಗೂ ಪದವಿ-ಪದವಿಪೂರ್ವ ವಿದ್ಯಾರ್ಥಿಗಳಿಗೆ ಗರಿಷ್ಠ 30,000 ರೂ.ಗಳವರೆಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಒಟ್ಟಾರೆ ಈ ಸಾಲಿನಲ್ಲಿ 1357 ವಿದ್ಯಾರ್ಥಿಗಳಿಗೆ ₹1.75 ಕೋಟಿ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ಜಮಾಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ಪೂರ್ಣಿಮಾ .ಪಿ.ವಿ ಹಾಗೂ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀಯವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....