2023-24ನೇ ಸಾಲಿನ ಶೈಕ್ಷಣಿಕ ವರ್ಷ; ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸಿಗಲಿದೆ 26 ರಜಾ ದಿನಗಳು

Date:

  • ಕಳೆದ ಶೈಕ್ಷಣಿಕ ವರ್ಷದಲ್ಲಿ 228 ಬೋಧನಾ ಕಲಿಕೆ ದಿನ; ಈ ಬಾರಿ 180 ದಿನ
  • ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ 48 ದಿನಗಳಷ್ಟು ಇಳಿಕೆ

2023-24ನೇ ಸಾಲಿನ ಶೈಕ್ಷಣಿಕ ವರ್ಷದ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಳಿಸಿದ್ದು, ಒಟ್ಟು 244 ದಿನಗಳು ಮಾತ್ರ ಶಾಲೆಗಳು ತೆರೆದಿರುತ್ತವೆ. ಅದರಲ್ಲಿ 180 ದಿನಗಳು ಮಾತ್ರ ಬೋಧನಾ ದಿನಗಳು ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆಗಳ ಕ್ಯಾಲೆಂಡರ್ ಬಿಡುಗಡೆ ಮಾಡಿದೆ.

ಕೋವಿಡ್ ಉಲ್ಬಣಗೊಂಡಿದ್ದ ಕಾಲದಲ್ಲಿ ಭೌತಿಕವಾಗಿ ಯಾವುದೇ ಪಾಠವನ್ನು ಕೇಳದೆ, ವಿದ್ಯಾರ್ಥಿಗಳ ಕಲಿಕೆ ಹಿಂದುಳಿದಿತ್ತು. ಕಲಿಕೆಯ ನಷ್ಟವನ್ನು ಸರಿದೂಗಿಸಲು, 2022-23 ಶೈಕ್ಷಣಿಕ ವರ್ಷವು ಸಾಮಾನ್ಯಕ್ಕಿಂತ ಮುಂಚಿತವಾಗಿ ಪ್ರಾರಂಭಗೊಂಡಿತ್ತು. ಕಳೆದ ವರ್ಷದಲ್ಲಿ ಹೆಚ್ಚುವರಿಯಾಗಿದ್ದ ಕಲಿಕಾ ಚೇತರಿಕೆ ಈ ವರ್ಷ ಇಲ್ಲದಿರುವುದು ಹಾಗೂ ದಸರಾ ರಜೆ ಹೆಚ್ಚಾಗಿರುವುದರಿಂದ ಈ ಬಾರಿ ಶಾಲಾ ದಿನಗಳು ಕಡಿಮೆಯಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಬಿಎಸ್ಸಿ ನರ್ಸಿಂಗ್ ‘ಸಿಇಟಿ’ಗೆ ಅರ್ಜಿ ಆಹ್ವಾನ

2022-23ರ ಶೈಕ್ಷಣಿಕ ವರ್ಷದಲ್ಲಿ 270 ಕರ್ತವ್ಯದ ದಿನಗಳಿದ್ದವು. ಈ ಬಾರಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ 26 ರಜಾ ದಿನಗಳು ಸಿಗಲಿದೆ. ಒಟ್ಟಾರೆಯಾಗಿ ಹಿಂದಿನ ವರ್ಷದ ಶೇ.74ರಷ್ಟು ದಿನ ಶಿಕ್ಷಣ ಸಂಬಂಧಿ ಚಟುವಟಿಕೆ ನಡೆದಿದ್ದರೆ, ಈ ವರ್ಷ ಶೇ.67ರಷ್ಟು ದಿನಗಳು ಮಾತ್ರ ನಡೆಯಲಿದೆ.

ಇನ್ನು ಕಳೆದ ಶೈಕ್ಷಣಿಕ ವರ್ಷದಲ್ಲಿ 228 ಬೋಧನಾ ಕಲಿಕೆ ದಿನಗಳಿದ್ದರೆ, ಈ ವರ್ಷ ಕೇವಲ 180 ಕಲಿಕಾ ದಿನಗಳಿರಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 244 ಶಾಲಾ ಕರ್ತವ್ಯದ ದಿನಗಳನ್ನು ಸರ್ಕಾರ ನಿಗದಿ ಪಡಿಸಿದೆ.

ಇದರಲ್ಲಿ ಬೋಧನಾ – ಕಲಿಕೆ ಪ್ರಕ್ರಿಯೆಗೆ ಕೇವಲ 180 ದಿನ ಉಳಿಯಲಿದೆ. ಉಳಿದಂತೆ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಪ್ರಕ್ರಿಯೆಗಳಿಗಾಗಿ 26 ದಿನಗಳು, ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ ಹಾಗೂ ಸ್ಪರ್ಧೆಗಳ ನಿರ್ವಹಣೆ ಕಾರ್ಯಕ್ಕಾಗಿ 24 ದಿನಗಳನ್ನು ನಿಯೋಜಿಸಲಾಗಿದೆ. ಮೌಲ್ಯಮಾಪನ ಮತ್ತು ಫ‌ಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು ಮತ್ತು ಶಾಲಾ ಸ್ಥಳೀಯ ರಜೆಗಳು ಎಂದು ನಾಲ್ಕು ದಿನವನ್ನು ನಿಗದಿಪಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...

5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ,...