ರಜೆ ನೀಡಿ ಮೋದಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆದೇಶಿಸಿದ ಗೋವಾ ಸರ್ಕಾರ

Date:

ಪ್ರಧಾನಿ ನರೇಂದ್ರ ಮೋದಿ ಭೇಟಿ ಪ್ರಯುಕ್ತ ಇಂದು(ಫೆ.06) ಗೋವಾ ರಾಜ್ಯ ಸರ್ಕಾರ ದಕ್ಷಿಣ ಗೋವಾದ ಮಾರ್ಗೋವ್‌ ಪ್ರದೇಶಕ್ಕೆ ಅರ್ಧ ದಿನ ರಜೆ ಘೋಷಿಸಿದೆ. ಕಳೆದ ವಾರವೇ ಮಾರ್ಗೋವ್‌ ಪ್ರದೇಶದಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಲಾಗಿತ್ತು.

ಕಾಲೇಜುಗಳ ವಿದ್ಯಾರ್ಥಿಗಳನ್ನು ಮೋದಿ ಭಾಷಣ ಕಾರ್ಯಕ್ರಮಕ್ಕೆ ಕಳಿಸುವಂತೆ ಮನವಿ ಕೂಡ ಮಾಡಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

“ಫೆ.6ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಾರ್ಗೋವ್‌ ಪ್ರದೇಶದ ಕಾಲೇಜುಗಳನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಚ್ಚಲಾಗುವುದು. ಈ ಸಂಬಂಧ, ಆಯಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಪ್ರಧಾನಿ ಮಂತ್ರಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಳಿಸುವಂತೆ ಪ್ರಾಂಶುಪಾಲರಿಗೆ ಕೋರಲಾಗಿದೆ”ಎಂದು ಗೋವಾದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಸರ್ಕಾರದ ಈ ನಡೆಯನ್ನು ಟೀಕಿಸಿರುವ ಕಾಂಗ್ರೆಸ್‌ನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ನೌಶಾದ್ ಚೌಧರಿ, “ ನಾವು ಉನ್ನತ ಶಿಕ್ಷಣ ಇಲಾಖೆಯ ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದೆವು. ಇದು ಸರ್ಕಾರಿ ಆಡಳಿತದ ದುರುಪಯೋಪವಾಗಿದೆ. ಸರ್ಕಾರವು ಕಡ್ಡಾಯವಾಗಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದೆ. ವಿದ್ಯಾರ್ಥಿಗಳು ಹಾಜರಾಗಲು ಸ್ವಾಗತ, ಆದರೆ ಯಾವುದೇ ಒತ್ತಾಯವಿರಬಾರದು” ಎಂದಿದ್ದಾರೆ.

ಮಾರ್ಗೋವಾದಲ್ಲಿನ ಮೋದಿ ಸಾರ್ವಜನಿಕ ಭೇಟಿಗೆ ಮೂರು ಹಳೆಯ ಮರಗಳನ್ನು ಕಡಿದಿರುವುದಕ್ಕೆ ಸ್ಥಳೀಯರಿಂದಲೂ ಆಕ್ರೋಶ ವ್ಯಕ್ತವಾಗಿದೆ. ಹಲವಾರು ದಶಕಗಳಿಂದ ಈ ಮರಗಳಿದ್ದವು.ಬಸ್‌ ನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ಜಾಗವನ್ನು ವಿಸ್ತಾರಗೊಳಿಸುವ ಸಲುವಾಗಿ ಮರಗಳನ್ನು ಕಡಿಯಲಾಗಿದೆ ಎಂದು ಸ್ಥಳೀಯರು ಟೀಕಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...