ಲೈಂಗಿಕ ದೌರ್ಜನ್ಯ ಪ್ರಕರಣ | ಆರೋಪಿ ಶಿವಮೂರ್ತಿ ಮುರುಘಾಗೆ ಜಾಮೀನು; ಆದರೂ ಇಲ್ಲ ಬಿಡುಗಡೆ

Date:

ಮಠದ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ ಹೈಕೋರ್ಟ್‌ ಷರತ್ತುಬದ್ದ ಜಾಮೀನು ನೀಡಿದೆ. ಆದರೆ, ಚಿತ್ರದುರ್ಗ ಜಿಲ್ಲೆಯ ಪ್ರವೇಶಿಸದಂತೆ ನಿರ್ಬಂಧ ಹೇರಿದೆ.

ಆದರೂ, ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ ಜೈಲಿನಿಂದ ಬಿಡುಗಡೆಯ ಅವಕಾಶವಿಲ್ಲ. ಮುರುಘಾ ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ದೊರೆತಿದೆ. ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಜಾಮೀನು ದೊರೆತಿಲ್ಲ. ಹಾಗಾಗಿ, ಅವರು ಜೈಲಿನಿಂದ ಹೊರಬರಲು ಅವಕಾಶವಿಲ್ಲ.

“ಏಳು ಷರತ್ತುಗಳ ಮೇಲೆ ಮುರುಘಾ ಅವರಿಗೆ ಜಾಮೀನು ಲಭ್ಯವಾಗಿದೆ. ಪಾಸ್‌ಪೋರ್ಟ್ ಸರೆಂಡರ್‌ ಮಾಡಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಚಿತ್ರದುರ್ಗ ಜಿಲ್ಲೆ ಪ್ರವೇಶಿಸಬಾರದು. ಎರಡು ಲಕ್ಷ ಬಾಂಡ್ ಇರಿಸಬೇಕು ಹಾಗೂ ಇಬ್ಬರು ವ್ಯಕ್ತಿಗಳ ಶ್ಯೂರಿಟಿ ನೀಡಬೇಕೆಂಬ ಷರತ್ತುಗಳ ಮೇರೆಗೆ ಜಾಮೀನು ಮಂಜೂರು ಮಾಡಲಾಗಿದೆ” ಎಂದು ಆರೋಪಿ ಪರ ವಕೀಲ ಸ್ವಾಮಿ ಗಣೇಶ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2022ರ ಸೆಪ್ಟೆಂಬರ್ 1ರಿಂದ ಜೈಲುವಾಸ ಅನುಭವಿಸುತ್ತಿರುವ ಆರೋಪಿ ಮುರುಘಾ ಅವರ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ಬಳಿಕ, ಮುರುಘಾ ಅವರ ವಕೀಲು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಒಂದು ಪ್ರಕರಣದಲ್ಲಿ ಜಾಮೀನು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ | ಶೋಭಾ ಗೋಬ್ಯಾಕ್ ಅಭಿಯಾನ ರಾಜೀವ್ ಗೌಡರಿಗೆ ವರವಾಗಲಿದೆಯೆ?

ಹಲವು ರಾಜಕೀಯ ಇತಿಹಾಸ ಹೊಂದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾ...

ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ...

ದಕ್ಷಿಣ ಕನ್ನಡ | ಮೀನಿನ ಆಹಾರ ತಯಾರಿಕಾ ಘಟಕದಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ...

ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ...