ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ : ಶಶಿ ತರೂರ್

Date:

2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ತಿಳಿಸಿದ್ದಾರೆ.

ತಿರುವನಂತಪುರಂನ ಟೆಕ್ನೋಪಾರ್ಕ್‌ನಲ್ಲಿ ತಮ್ಮ ಕಚೇರಿಯನ್ನು ಉದ್ಘಾಟಿಸಿದ ನಂತರ ಅಮೆರಿಕಾ ಮೂಲದ ಮತ್ತು ಸಿಲಿಕಾನ್ ವ್ಯಾಲಿ-ಇನ್‌ಕ್ಯುಬೇಟೆಡ್ ಡಿ2ಸಿ ಮಾರ್ಕೆಟ್‌ಪ್ಲೇಸ್ ವೇ.ಕಾಮ್‌ನ ವೃತ್ತಿಪರರೊಂದಿಗೆ ಸಂವಾದ ನಡೆಸಿದರು.

ಪ್ರತಿಪಕ್ಷಗಳ ಒಕ್ಕೂಟದ ಉಪಸ್ಥಿತಿಯಿಂದಾಗಿ ಮುಂದಿನ ವರ್ಷದ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರುವ ಸಾಧ್ಯತೆಯಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸುವ ಮೂಲಕ ಇಂಡಿಯಾ ಮೈತ್ರಿಕೂಟವು ಕೇಂದ್ರದಲ್ಲಿ ಅಧಿಕಾರವನ್ನು ಪಡೆಯುವ ಅವಕಾಶವಿದೆ ಎಂದು ತರೂರ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪ್ರಶ್ನೆಗೆ ಲಂಚ: ಸಿಬಿಐಗೆ ಸ್ವಾಗತ ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಚುನಾವಣೋತ್ತರ ಸನ್ನಿವೇಶದ ಕುರಿತು ಮಾತನಾಡಿದ ಅವರು, ”ಒಮ್ಮೆ ಫಲಿತಾಂಶ ಬಂದರೆ, ಅದು ಒಂದು ಪಕ್ಷವಲ್ಲದ ಸಮ್ಮಿಶ್ರ ಬಣವಾಗಿರುವ ಕಾರಣ, ಆ ಪಕ್ಷಗಳ ನಾಯಕರು ಒಟ್ಟಾಗಿ ಯಾರನ್ನಾದರನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಆದರೆ ನನ್ನ ಊಹೆ ಏನೆಂದರೆ, ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಆಗಿರಬಹುದು, ಆಗ ಅವರು ಭಾರತದ ಮೊದಲ ದಲಿತ ಪ್ರಧಾನಿಯಾಗುತ್ತಾರೆ ಅಥವಾ ರಾಹುಲ್ ಗಾಂಧಿ ಆಗಿರಬಹುದು ಎಂದು ಹೇಳಿದರು.

ಶಶಿ ತರೂರ್ ಕೂಡ ತಮಗೆ ವಹಿಸುವ ಯಾವುದೇ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ಹೊಂದಿರುವುದಾಗಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...