ಶಿವಮೊಗ್ಗ | ಜಿಲ್ಲಾ ಪಂಚಾಯತಿ ಸಿಇಒ ಬಂಧನಕ್ಕೆ ಕೋರ್ಟ್‌ ಆದೇಶ

Date:

ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ವಿಳಂಬ ಮಾಡಿದ್ದಾರೆ. ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 71.45 ಲಕ್ಷ ರೂ. ನಷ್ಟವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಕಾರ್ಯಪಾಲಕ ಇಂಜಿನಿಯರ್ ವರದಿ ಸಲ್ಲಿಸಿದ್ದರು.

ವರದಿ ಆಧಾರದ ಮೇಲೆ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ‘ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011’ರ ಕಲಂ 09ರ ಅಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣ ಸಂಬಂಧ ನವೆಂಬರ್ 24ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತಿ ಸಿಇಒಗೆ ನಿರ್ದೇಶಿಸಲಾಗಿತ್ತು. ಆದರೆ, ಅವರು ಇದೂವರೆಗೂ ವರದಿ ಸಲ್ಲಿಸಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೀಗಾಗಿ, ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶಿಸಿದೆ. ಫೆಬ್ರವರಿ 16 ರಂದು ಅವರು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಬೇಕು. ತಪ್ಪದೆ ವರದಿ ಸಲ್ಲಿಸಬೇಕು. ಅಲ್ಲದೆ, 25,000 ರೂ. ದಂಡ ಕಟ್ಟಿ, ಮುಚ್ಚಳಿಕೆ ಬರೆದುಕೊಟ್ಟರೆ ಅವರನ್ನು ಬಿಡುಗಡೆ ಮಾಡಬಹುದು ಎಂದು ಆದೇಶದಲ್ಲಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮೇ 7ರಂದು ಮತದಾನದ ಹಬ್ಬದಲ್ಲಿ ಭಾಗಿಯಾಗಿ ಮತ ಚಲಾಯಿಸಿ; ಎಸ್ ಕೆ ಇನಾಮದಾರ

ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇ...

ಯಾದಗಿರಿ | 40 ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ; ಕ್ರಮಕ್ಕೆ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ...

ಬೀದರ್‌ | ಸಾಮಾಜಿಕ ಬದಲಾವಣೆಗೆ ಶಿಕ್ಷಣ ಪ್ರಬಲ ಅಸ್ತ್ರ : ನಾಗಶೆಟ್ಟಿ ಗಾದಗೆ

ಶಿಕ್ಷಣದಿಂದ ಮಾತ್ರ ತಳವರ್ಗ ಸಮುದಾಯಗಳ ಏಳಿಗೆ ಸಾಧ್ಯ ಎಂಬ ಬಾಬಾ ಸಾಹೇಬ್‌...

ಬೀದರ್‌ | ನಮಗೆ ಬೇಕಾಗಿರುವುದು ಸಮಾನತೆ, ಸಮೃದ್ಧ ಭಾರತ : ಅಪ್ಪಗೆರೆ ಸೋಮಶೇಖರ

ದೇಶದ ಎಲ್ಲ ಧರ್ಮಗಳಿಗೆ ರಕ್ಷಾ ಕವಚವಾಗಿರುವ ಸಂವಿಧಾನದ ಕತೃ ‌ಬಾಬಾ ಸಾಹೇಬ್‌...