ಶಿವಮೊಗ್ಗ | ಸಮಯಪಾಲನೆ ಮಾಡದ ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಧರಣಿ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯವಕ್ಕೆ ಹಾಜರಾಗುತ್ತಿಲ್ಲ. ಕರ್ತವ್ಯ ಲೋಪವೆಸಗಿರುವ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಒತ್ತಾಯಿಸಿದ್ದಾರೆ.

ವೈದ್ಯರ ವರ್ಗಾವಣೆ ಮತ್ತು ಆಸ್ಪತ್ರೆಯಲ್ಲಿ ವ್ಯವಸ್ಥಿತ ಕಾರ್ಯನಿರ್ವಹಣೆಗೆ ಆಗ್ರಹಿಸಿ ಫೆ.19ರಿಂದ ನ್ಯಾಯ ದೊರಕುವವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ದರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ಹೇಳಿದ್ದಾರೆ.

ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗದೆ ಇರುವುದನ್ನು ಖಂಡಿಸಿ 2022ರ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ನಡೆಸಿದ್ದೆವು. ತಾಲೂಕು ಆರೋಗ್ಯ ಅಧಿಕಾರಿಗೆ ವಿಡಿಯೋ ಸಮೇತ ಸಾಕ್ಷ್ಯಗಳನ್ನು ಒದಗಿಸಿದ್ದೆವು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೂ ಹಕ್ಕೊತ್ತಾಯ ಸಲ್ಲಿಸಿದ್ದೆವು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆಸ್ಪತ್ರೆಯ ವೈದ್ಯೆ ಗಾಯತ್ರಿ ಅವರು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವ ವಿಚಾರವನ್ನು ಆರೋಗ್ಯ ಅಧಿಕಾರಿ ಸಮರ್ಥಿಸಿಕೊಂಡು ತಪ್ಪು ವರದಿಯನ್ನು ತಮ್ಮ ಮೇಲಾಧಿಕಾರಿಗೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...