ಹಿಟ್ಲರ್‌, ಮುಸಲೋನಿ ಮೀರಿಸುವ ಸರ್ವಾಧಿಕಾರಿ ಸಿದ್ದರಾಮಯ್ಯ: ವಿ ಸುನಿಲ್‌ ಕುಮಾರ್‌ ಕಿಡಿ

Date:

  • ‘ಸಿದ್ದರಾಮಯ್ಯನವರೇ ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ’
  • ‘ಸಂವಿಧಾನದ ಆಶಯಗಳನ್ನು ಕಾಂಗ್ರೆಸ್ ಬುಡಮೇಲು ಮಾಡುತ್ತಿದೆ’

ಸಿದ್ದರಾಮಯ್ಯನವರೇ ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ. ಹಿಟ್ಲರ್, ಮುಸಲೋನಿಯವರನ್ನೇ ಮೀರಿಸುವ ಸರ್ವಾಧಿಕಾರಿ ನೀವು. ಅಭಿವ್ಯಕ್ತಿ ಸ್ವಾತಂತ್ರ್ಯ, ಸ್ತ್ರೀ ಸಮಾನತೆ, ಸಂವಿಧಾನದ ಆಶಯ ಎಂಬ ಶಬ್ದಗಳನ್ನು ಬಳಸುವುದಕ್ಕೆ ನೀವು ಅನರ್ಹ. ಸಾಕು ಮಾಡಿ ಸೋಗು ಎಂದು ಮಾಜಿ ಸಚಿವ ವಿ ಸುನಿಲ್‌ ಕುಮಾರ್‌ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹಿಟ್ಲರ್ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ. ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುತ್ತಿದೆ” ಎಂದು ಟೀಕಿಸಿದ್ದಾರೆ.

“ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು ತಪ್ಪು ಎಂದಾದರೆ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಹಕ್ಕು, ಮಾನ- ಸಮ್ಮಾನದ ಬಗ್ಗೆ ಗೌರವ ಇಲ್ಲವೆಂದು ಅರ್ಥವೇ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೂ ಅಪಮಾನವಾದರೆ ಸಹಿಸುತ್ತೀರಾ ಎಂದು ಶಕುಂತಲಾ ಪ್ರಶ್ನಿಸಿದ್ದರಲ್ಲಿ ತಪ್ಪೇನಿದೆ? ದಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೇಲ್ಜಾತಿ ಬಿಗಿಮುಷ್ಟಿ’ಯಲ್ಲಿ ಹೈಕೋರ್ಟುಗಳು-ಬಹುಜನರೇಕೆ ದೂರ ದೂರ?

“ವಿಡಿಯೋ ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ರಾಜ್ಯದ ಗಮನ ಸೆಳೆದ ರಶ್ಮಿಯವರ ಮನೆಗೆ ರಾತ್ರೋರಾತ್ರಿ ತೆರಳಿ ವಿಚಾರಣಾ ಹಿಂಸೆ ಮಾಡುವ ಪೊಲೀಸರಿಗೆ ಸಹ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ಮನೆಗೆ ತೆರಳಿ ವಿಚಾರಣೆ ನಡೆಸುವ ತಾಕತ್ತಿಲ್ಲವೇ? ಟ್ವೀಟ್ ಮಾಡಿದ್ದು ದೊಡ್ಡ ಅಪರಾಧವೊ, ವಿಡಿಯೊ ಮಾಡಿದ್ದು ಅಪರಾಧವೊ” ಎಂದು ಪ್ರಶ್ನಿಸಿದ್ದಾರೆ.

“ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ, ಹಾಂಡ್ ಗ್ರೆನೈಡ್ ಹಾಗೂ ಸ್ಫೋಟಕಗಳನ್ನು ಮನೆಯಲ್ಲಿಟ್ಟುಕೊಂಡವರನ್ನು ಉಗ್ರರು ಎನ್ನುವುದಕ್ಕೆ ನಿಮಗೆ ಶಕ್ತಿಯಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ಅಮಾಯಕರು. ಆದರೆ ಉಡುಪಿ ಕಾಲೇಜಿನಲ್ಲಿ ನಡೆದಿದ್ದು, ತಮಾಷೆ ಪ್ರಕರಣ, ಮಕ್ಕಳಾಟ! ನೀವು ಕರ್ನಾಟಕದ ಗೃಹ ಸಚಿವರೋ ಅಥವಾ ಒಂದು ವರ್ಗಕ್ಕೋ?” ಎಂದು ಕುಟುಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...