ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ; ರಾಜ್ಯ ಸರ್ಕಾರದ ಸುತ್ತೋಲೆ

Date:

“ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ” ಎಂದು ರಾಜ್ಯ ಸರ್ಕಾರ ಫೆ.16 ರಂದು ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಶಿಕ್ಷಣ ತಜ್ಞರು ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ (ಸಂಸ್ಕ್ರತಿ) ಸರ್ಕಾರದ ಅಧಿನ ಕಾರ್ಯದರ್ಶಿ ಎಸ್‌ ಗೀತಾಬಾಯಿ ಅವರು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಷ್ಟ್ರಕವಿ, ಜ್ಞಾನಪೀಠ ಪುರಸ್ಕೃತ ಡಾ.ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಾಗೂ ಅದಕ್ಕೆ ಫೆಬ್ರವರಿ 1ರಂದು ಮಾಡಲಾದ ತಿದ್ದುಪಡಿ ಪ್ರಕಾರ, “ಎಲ್ಲ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ, “ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಆದರೆ, ಈಗ ನೀಡಿರುವ ಈ ಸುತ್ತೋಲೆಯಲ್ಲಿ ‘ಎಲ್ಲ ಶಾಲೆಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆಯನ್ನು ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ’ ಎಂದು ತಿದ್ದುಪಡಿ ಮಾಡಲಾಗಿದೆ.

ಈ ಸುತ್ತೋಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದಂತೆ ಇದೆ. ಆದರೆ, ಸುತ್ತೋಲೆಯಲ್ಲಿ ನೇರವಾಗಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡಬಾರದು ಎಂದು ಉಲ್ಲೇಖಿಸಲಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏರ್ ಇಂಡಿಯಾ ಸಿಬ್ಬಂದಿಗೆ ತಾನು ‘ಉಗ್ರಗಾಮಿ’ ಎಂದು ಬೆದರಿಕೆ; ಪ್ರಯಾಣಿಕ ಪೊಲೀಸ್ ವಶಕ್ಕೆ

ಈ ಬಗ್ಗೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ ಅವರು, “ಇದು ತಪ್ಪು. ನಾಡಗೀತೆ ಮತ್ತು ರಾಷ್ಟ್ರಗೀತೆ ಎಲ್ಲರಿಗೂ ಅನ್ವಯಿಸುತ್ತದೆ. ನೆಲದ ನಿಯಮ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಖಾಸಗಿ ಶಾಲೆಗಳಿಗೆ ವಿನಾಯಿತಿ ನೀಡುವುದು ಸರಿಯಲ್ಲ. ಇದು ನಾಡಗೀತೆಗೆ ಮಾತ್ರವಲ್ಲ, ಕನ್ನಡ ನಾಡಿನ ಜನತೆಗೆ ಮಾಡಿದ ಅವಮಾನ. ನಾಡಿನ ನೆಲ – ಜಲ ಬೇಕು ನಾಡಗೀತೆ ಬೇಡವೆಂದರೆ, ಒಪ್ಪಲು ಸಾಧ್ಯವಿಲ್ಲ. ಇದು ನಾಡ ದ್ರೋಹ” ಎಂದಿದ್ದಾರೆ.

ಸದ್ಯ ಈ ಬಗ್ಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ತಂಗಡಗಿ, “ನಮಗೆ ಎಲ್ಲ ಶಾಲೆಗಳು ಒಂದೇ. ಇದು ಪ್ರಿಂಟ್ ಮಿಸ್ಟೇಕ್‌ ಆಗಿದೆ. ಸರ್ಕಾರದಿಂದ ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತಶಾಲೆ ಅಂತ ಪ್ರಿಂಟ್​​ ಮಿಸ್ಟೇಕ್ಆಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈಗಲೇ ಅದನ್ನು ತಿದ್ದುಪಡಿ ಮಾಡಿಸುತ್ತೇನೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...

 ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...