ಜ್ವರದಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Date:

ಕಾಂಗ್ರೆಸ್ ಸಂಸದೀಯ ಮಂಡಳಿಯ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಜ್ವರದಿಂದ ಬಳಲುತ್ತಿದ್ದ ಕಾರಣ ನವದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋನಿಯಾ ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ಇರಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸೋನಿಯಾ ಅವರ ಆರೋಗ್ಯ ಸ್ಥಿರವಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾವಹಿಸಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ

ಆ.31 ಹಾಗೂ ಸೆ.01 ರಂದು ಮುಂಬೈನಲ್ಲಿ ನಡೆದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ದ ಮೂರನೇ ಸಭೆಯಲ್ಲಿ ಸೋನಿಯಾ ಅವರು ಪುತ್ರ ರಾಹುಲ್‌ ಗಾಂಧಿಯ ಜೊತೆ ಪಾಲ್ಗೊಂಡಿದ್ದರು. ಬಳಿಕ ಅವರು ದೆಹಲಿಗೆ ವಾಪಸ್ ಆಗಿದ್ದರು. ಆಯಾಸವಾದ ಕಾರಣ ಜ್ವರ ಕಾಣಿಸಿಕೊಂಡಿದೆ. ಬಳಿಕ ಅವರನ್ನು ಪರೀಕ್ಷೆ ನಡೆಸಿದ ವೈದ್ಯರು ಅವರಿಗೆ ಎದೆ ಭಾಗದ ಸೋಂಕಿನ ಸಮಸ್ಯೆ ಇರುವುದಾಗಿ ಹೇಳಿದ್ದಾರೆ.

ಈ ವರ್ಷದ ಜನವರಿಯಲ್ಲಿ ಸೋನಿಯಾ ಗಾಂಧಿ ಉಸಿರಾಟದ ತೊಂದರೆಯ ಕಾರಣ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದಲ್ಲಿನ ವೈರಾಣು ಸೋಕಿನಿಂದ ಅವರು ಬಳಲುತ್ತಿದ್ದರು. ಆಗ ಆಸ್ಪತ್ರೆಯ ಡಾ. ಅನುಪ್ ಬಸು ತಂಡ ಸೋನಿಯಾ ಗಾಂಧಿಗೆ ಚಿಕಿತ್ಸೆ ನೀಡಿತ್ತು. ಭಾನುವಾರ ಸಂಜೆ ಸೋನಿಯಾ ಗಾಂಧಿಯವರ ಹೆಲ್ತ್ ಬುಲೆಟಿನ್ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

ಚುನಾವಣೆ ನಡೆಯಬೇಕಾದದ್ದು ನಿಜವಾಗಿಯೂ ಜನರ ನೈಜ ಸಮಸ್ಯೆಗಳ ಮೇಲೆ ಅಲ್ಲವೇ? ಇನ್ನೂ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ...