ವಿಶ್ವಕಪ್ | ಜಡೇಜಾ ಸ್ಪಿನ್ ಮೋಡಿಗೆ ಮಂಡಿಯೂರಿದ ಹರಿಣಗಳು: ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ

Date:

ಟೀಮ್ ಇಂಡಿಯಾ ನೀಡಿದ್ದ 327 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ದಕ್ಷಿಣ ಆಫ್ರಿಕಾ, ಕೇವಲ 83 ರನ್‌ಗಳಿಗೆ ಆಲೌಟ್ ಆಗಿದೆ. ಆ ಮೂಲಕ ಟೀಮ್ ಇಂಡಿಯಾ 243 ರನ್‌ಗಳ ಬೃಹತ್ ಗೆಲುವು ದಾಖಲಿಸಿಕೊಂಡಿದೆ.

ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯವರ ಶತಕದ ನೆರವಿನಿಂದ 327 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಹರಿಣಗಳು, ಜಡೇಜಾ ಸ್ಪಿನ್ ಮೋಡಿಗೆ ಸಿಲುಕಿ, 27.1 ಓವರ್‌ಗಳಲ್ಲಿ ಕೇವಲ 83 ರನ್ ಗಳಿಸುವಷ್ಟರಲ್ಲಿ ಆಲೌಟ್ ಆದರು.

ಆಫ್ರಿಕಾ ಪರ ಡಸ್ಸನ್ 13, ಬಾವುಮಾ 11, ಮಿಲ್ಲರ್ 11 ರನ್ ಗಳಿಸಿದರು. ಟೀಮ್ ಇಂಡಿಯಾ ಪರ ಒಂಭತ್ತು ಓವರ್ ಎಸೆದ ರವೀಂದ್ರ ಜಡೇಜಾ 33 ರನ್‌ ನೀಡಿ, 5 ವಿಕೆಟ್‌ಗಳನ್ನು ಪಡೆದರು. ಉಳಿದಂತೆ ಕುಲ್‌ದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ ಎರಡು ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 1 ವಿಕೆಟ್ ಗಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ವಿಶ್ವಕಪ್‌ನಲ್ಲಿ ಆಡಿದ ಎಲ್ಲ ಎಂಟು ಪಂದ್ಯಗಳಲ್ಲಿ ಗೆಲುವು ದಾಖಲಿಸಿಕೊಂಡು, ಅಜೇಯ ಅಭಿಯಾನ ಮುಂದುವರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ನೆದರ್‌ಲ್ಯಾಂಡ್ಸ್‌ ಎದುರು ಕೊನೆಯ ಪಂದ್ಯವನ್ನಾಡಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌...

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...