3 ಭಾರತೀಯ ಅಥ್ಲೀಟ್‌ಗಳಿಗೆ ಏಷ್ಯನ್ ಗೇಮ್ಸ್‌ನಿಂದ ಚೀನಾದಿಂದ ಮಾನ್ಯತೆ ನಿರಾಕರಣೆ: ಪ್ರತಿಯಾಗಿ ಕ್ರೀಡಾ ಸಚಿವರ ಚೀನಾ ಪ್ರವಾಸ ರದ್ದು

Date:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯಾನ್‌ ಕ್ರೀಡಾಕೂಟದಿಂದ ಅರುಣಾಚಲ ಪ್ರದೇಶದ ಮೂವರು ಭಾರತೀಯ ಅಥ್ಲೀಟ್‌ಗಳಿಗೆ ವೀಸಾ ಮತ್ತು ಮಾನ್ಯತೆಯನ್ನು ನಿರಾಕರಿಸಿದ ನಂತರ ಕೇಂದ್ರ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ.

ಚೀನಾದ ದ್ವೇಷ ರಾಜಕಾರಣಕ್ಕೆ ಪ್ರತಿಯಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಅನುರಾಗ್‌ ಸಿಂಗ್‌ ಠಾಕೂರ್‌ ಅವರು ಶುಕ್ರವಾರ ತಮ್ಮ ನಿಗದಿತ ಚೀನಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಭಾರತದ ಮೂವರು ವುಶು ಆಟಗಾರರಾದ ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಅವರಿಗೆ ಏಷ್ಯಾನ್‌ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಚೀನಾ ಪ್ರವೇಶವನ್ನು ನಿರಾಕರಿಸಿದ ನಂತರ ಈ ಬೆಳವಣಿಗೆಯು ಪ್ರತಿಭಟನೆಯ ಸಂಕೇತವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಮೂವರು ಆಟಗಾರರನ್ನು ಹೊರತುಪಡಿಸಿ ಇತರ ಏಳು ಆಟಗಾರರು ಮತ್ತು ಸಿಬ್ಬಂದಿಯನ್ನು ಒಳಗೊಂಡ ಭಾರತೀಯ ವುಶು ತಂಡ ಏಷ್ಯನ್‌ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹಾಂಗ್ ಕಾಂಗ್‌ಗೆ ಪ್ರಯಾಣಿಸಿದ್ದು, ಅಲ್ಲಿಂದ ಚೀನಾದ ಹ್ಯಾಂಗ್‌ಝೌಗೆ ತೆರಳಲಿದೆ.

“ನಮ್ಮ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಭಾರತ ಸರ್ಕಾರ ಹೊಂದಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಸನಾತನ ಧರ್ಮ ವಿವಾದ: ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್

“ಕ್ರೀಡಾಪಟುಗಳಿಗೆ ಉದ್ದೇಶಪೂರ್ವಕ ಮತ್ತು ಆಯ್ದ ತೊಂದರೆಯ” ವಿರುದ್ಧ ಭಾರತ ಔಪಚಾರಿಕ ಪ್ರತಿಭಟನೆಯನ್ನು ಸಲ್ಲಿಸಿದೆ. ಕೇಂದ್ರ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಕೂಡ ಚೀನಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ದಕ್ಷಿಣ ಟಿಬೆಟ್ ಎಂದು ಕರೆಯುವ ಅರುಣಾಚಲ ಪ್ರದೇಶವನ್ನು ಚೀನಾ ತನ್ನ ಭೂಪ್ರದೇಶವೆಂದು ಹಕ್ಕು ಸಾಧಿಸುತ್ತಾ ಬಂದಿದೆ. ಕಳೆದ ತಿಂಗಳು, ಅಂತಾರಾಷ್ಟ್ರೀಯ ಟೀಕೆಗೆ ಗುರಿಯಾದ ಕ್ರಮದಲ್ಲಿ, ಚೀನಾ ಸರ್ಕಾರವು ಈಶಾನ್ಯ ರಾಜ್ಯ ಮತ್ತು ಪೂರ್ವ ಲಡಾಖ್‌ನಲ್ಲಿರುವ ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಗಡಿಯೊಳಗೆ ಒಳಗೊಂಡಿರುವ ಹೊಸ “ಪ್ರಮಾಣಿತ ನಕ್ಷೆ”ಯನ್ನು ಬಿಡುಗಡೆ ಮಾಡಿತ್ತು. ಚೀನಾದ ಈ ನಡೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...

ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್,...

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...