ಭಾರತೀಯ ಪ್ರವಾಸಿಗರಿಗೆ ಉಚಿತ ‘ವೀಸಾ’ ನೀಡಲು ಶ್ರೀಲಂಕಾ ನಿರ್ಧಾರ

Date:

ಭಾರತ ಮತ್ತು ಇತರ ಆರು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ಮಸೂದೆಯನ್ನು ಶ್ರೀಲಂಕಾ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಪುನರ್‌ನಿರ್ಮಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್‌ನ ಪ್ರವಾಸಿಗರಿಗೆ ತಕ್ಷಣದಿಂದಲೇ ಉಚಿತ ವೀಸಾ ನೀಡಲು ಸಂಪುಟ ಒಪ್ಪಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ 2024ರ ಮಾರ್ಚ್‌ 31ರವರೆಗೆ ಜಾರಿಗೊಳಿಸಲಾಗುವುದು ಎಂದು ಸಬ್ರಿ ಹೇಳಿದ್ದಾರೆ.

ಈ ಆರು ದೇಶಗಳ ಪ್ರವಾಸಿಗರು ಶ್ರೀಲಂಕಾಕ್ಕೆ ಭೇಟಿ ನೀಡಲು ಶುಲ್ಕವಿಲ್ಲದೆ ವೀಸಾಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಭಾರತವು ಶ್ರೀಲಂಕಾದ ಪ್ರವಾಸೋದ್ಯಮಕ್ಕೆ ಪ್ರಮುಖ ಗ್ರಾಹಕ ರಾಷ್ಟ್ರವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶ್ರೀಲಂಕಾದ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್‌ನಲ್ಲಿ  ಭಾರತದ 30,000 ಪ್ರವಾಸಿಗರು ಶ್ರೀಲಂಕಾಗೆ ಭೇಟಿ ನಿಡಿದ್ದು, ಆ ರಾಷ್ಟ್ರಕ್ಕೆ ಭೇಟಿ ನೀಡಿದ ಪ್ರವಾಸಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಪಡೆದಿದೆ. 8,000 ಕ್ಕೂ ಹೆಚ್ಚು ಚೀನೀ ಪ್ರವಾಸಿಗರು ಭೇಟಿ ನೀಡಿದ್ದು 2ನೇ ಸ್ಥಾನ ಪಡೆದಿದೆ.

ಈ ಸುದ್ದಿ ಓದಿದ್ದೀರಾ?: ಸೈಬರ್ ಕ್ರೈಮ್‌ಗೆ ಅಲಹಾಬಾದ್, ಸೂರತ್ ಹಾಟ್‌ಸ್ಪಾಟ್- ಗುಜರಾತ್ ಮಾಡೆಲ್ ಎಂದು ವ್ಯಂಗ್ಯವಾಡಿದ ನೆಟ್ಟಿಗರು

2019ರಲ್ಲಿ ಶ್ರೀಲಂಕಾದಲ್ಲಿ ನಡೆದ ಈಸ್ಟರ್ ಸಂಡೆ ಬಾಂಬ್ ದಾಳಿಯಲ್ಲಿ 11 ಭಾರತೀಯರು ಸೇರಿದಂತೆ 270 ಜನರು ಸಾವನ್ನಪ್ಪಿದರು. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಆ ಘಟನೆಯ ನಂತರ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡುವ ಪ್ರವಾಸಿಗರ ಗಣನೀಯವಾಗಿ ಕುಸಿದಿದೆ.

ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಲಂಕಾ ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಳೆದ ವರ್ಷ ಅಲ್ಲಿನ ಜನರು ಭಾರೀ ಪ್ರತಿಭಟನೆ ನಡೆಸಿದ್ದರು. ಇಂದಿಗೂ ಆಹಾರ, ಔಷಧಿ, ಅಡುಗೆ ಅನಿಲ ಮತ್ತು ಇಂಧನ, ಟಾಯ್ಲೆಟ್ ಪೇಪರ್ ಮತ್ತು ಬೆಂಕಿಕಡ್ಡಿಗಳಂತಹ ಅಗತ್ಯ ವಸ್ತುಗಳ ತೀವ್ರ ಕೊರತೆಯು ಲಂಕಾವನ್ನು ಕಾಡುತ್ತಿದೆ. ಬಿಕ್ಕಟ್ಟಿನಿಂದ ಹೊರ ಬರಲು ಶ್ರೀಲಂಕಾ ಭಾರೀ ಪ್ರಯತ್ನಗಳನ್ನು ಮಾಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ...

ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು...

ವಿವಿಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹೆಚ್ಚು ಅಂಕ

ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ...