ಬೀದರ್‌ | ರೈತರಿಗೆ ನೆರವಾಗದ ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ : ಬಿ.ವೈ.ವಿಜಯೇಂದ್ರ

Date:

ರಾಜ್ಯದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ಮರೆತಿದೆ. ಜತೆಗೆ ರೈತರಿಂದಲೂ ಕೂಡ ದೂರವಾಗಿದೆ. ಬರಗಾಲದಲ್ಲಿ ರಾಜ್ಯದ ಜನರಿಗೆ ನೆರವಾಗಬೇಕಿದ್ದ ಕಾಂಗ್ರೆಸ್ ಸರಕಾರ ಕುಂಭಕರ್ಣ ನಿದ್ದೆಯಲ್ಲಿ ಆಡಳಿತ
ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಭಾಲ್ಕಿ ತಾಲೂಕಿನ ಖಟಕ್ ಚಿಂಚೋಳಿ ಗ್ರಾಮದ ರೈತ ವೈಜಿನಾಥ ಉಂಬರಗೆ ಎಂಬುವರ ಹೊಲಕ್ಕೆ ಬುಧವಾರ ಭೇಟಿ ನೀಡಿ ಬರ ಅಧ್ಯಯನ ಮಾಹಿತಿ ಕಲೆಹಾಕಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಜನರಿಗೆ ಬರ ಪರಿಹಾರ ಕೊಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ರಾಜ್ಯದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಹಿರಿಯರ ನಾಯಕರ ನೇತೃತ್ವದಲ್ಲಿ ತಂಡ ರಚಿಸಿ ಅನಾವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆನಷ್ಟದ ಮಾಹಿತಿ ಕಲೆ ಹಾಕಲಾಗುತ್ತಿದೆ” ಎಂದರು.

ಬೀದರ್ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ತಿಂಗಳಲ್ಲಿ ಸುಮಾರು 12ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಗಂಭೀರವಾಗಿ ಪರಿಗಣಿಸಬೇಕಿತ್ತು. ಅನಾವೃಷ್ಟಿಯಿಂದ ಜಿಲ್ಲೆಯ ಜನ ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಎಲ್ಲ ತಾಲೂಕು, ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಅವಲೋಕನ ನಡೆಸಬೇಕಿತ್ತು. ಆದರೆ, ಸಚಿವರು ರೈತರ ಸಮಸ್ಯೆ ಆಲಿಸದೇ ತಮ್ಮ ಕರ್ತವ್ಯ ಮರೆತಿದ್ದಾರೆ. ಜಿಲ್ಲೆಯ ಯಾವ ತಾಲೂಕು, ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದ್ದೀರಿ, ಎಷ್ಟು ಸಭೆ ನಡೆಸಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಿ” ಎಂದು ಉಸ್ತುವಾರಿ ಸಚಿವರಿಗೆ ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಪ್ರಯತ್ನ ಸರಿಯಲ್ಲ:

“ರಾಜ್ಯದ ಸಿಎಂ ಸಿದ್ದರಾಮಯ್ಯ ಸೇರಿ ಅವರ ಸಚಿವ ಸಂಪುಟದ ಮಂತ್ರಿಗಳು ತಮ್ಮ ಕರ್ತವ್ಯವನ್ನು ಮರೆತು ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ. ಕೇಂದ್ರದ ತಂಡ
ಈಗಾಗಲೇ ಬರ ಅಧ್ಯಯನ ನಡೆಸಿದೆ. ಅದು ಮುಂದಿನ ದಿನಗಳಲ್ಲಿ ಪರಿಹಾರ ಬಿಡುಗಡೆ ಮಾಡಲಿದೆ. ಆದರೆ, ಕಾಂಗ್ರೆಸ್ ಸರಕಾರ ಏಕೆ ರೈತರ ಪರ ನಿಲುವು ತಾಳುತ್ತಿಲ್ಲ” ಎಂದು ಪ್ರಶ್ನಿಸಿದರು.

“ರಾಜ್ಯದಲ್ಲಿ 33 ಸಾವಿರ ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಸರಕಾರ ವರದಿ ನೀಡಿದೆ. 17 ಸಾವಿರ ಕೋಟಿ ರೂ ಪರಿಹಾರ ಕೊಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರಕಾರ ಬರದಲ್ಲಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಕೇವಲ 340 ಕೋಟಿ ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ ಹೊರತು ಇದು ವರೆಗೂ ಬಿಡುಗಡೆ ಮಾಡಿಲ್ಲ. ಇದು ರಾಜ್ಯ ಸರಕಾರದ ರೈತಪರ ಕಾಳಜಿ ತೋರಿಸಿ ಕೊಡುತ್ತದೆ. ಈ ಸರಕಾರಕ್ಕೆ ರೈತರ ಬಗ್ಗೆ ಕನಿಕರ ಇಲ್ಲ. ರೈತರ ಆಕ್ರಂದನ ಕೇಳುತ್ತಿಲ್ಲ. ಉದ್ದಟತನದಲ್ಲಿ ಸರಕಾರ ಮೊಳಗಿದೆ. ಮಾಜಿ ಸಿಎಂ ಯಡಿಯೂರಪ್ಪನವರು ಸಲಹೆ ನೀಡಿದರೂ ಕೂಡ ಸಿಎಂ ಸಿದ್ದರಾಮಯ್ಯನವರಿಗೆ ಕೇಳುವ ಮನಸ್ಥಿತಿ ಇಲ್ಲ” ಎಂದು ದೂರಿದರು.

“ಬರವನ್ನು ಸಮರ್ಥವಾಗಿ ನಿಭಾಯಿಸುವ ಬದಲು ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಟೀಕೆ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಬರಗಾಲವನ್ನು ಸಮರೋಪಾದಿಯಲ್ಲಿ ನಿರ್ವಹಣೆ ಮಾಡುವಲ್ಲಿ ಸರಕಾರ ಸಂಪೂರ್ಣವಾಗಿ ಎಡವಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ಬರದಿಂದ ಸಂಕಷ್ಟ ಅನುಭವಿಸುತ್ತಿರುವ ರೈತರ ಸಮಸ್ಯೆ ಆಲಿಸಬೇಕು. ಪ್ರತಿ ಎಕರೆಗೆ 20-25 ಸಾವಿರ ರೂ ಪರಿಹಾರ ಘೋಷಣೆ ಮಾಡಬೇಕು. ಜತೆಗೆ ಮಧ್ಯಂತರ ಬೆಳೆ ಪರಿಹಾರ ನೀಡುವತ್ತ ರಾಜ್ಯ ಸರಕಾರ ಕಾರ್ಯನ್ಮುಖವಾಗಬೇಕು” ಎಂದುಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಲ್ಲಿ 36 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ವರದಿ : ಡಿಸಿ ಗೋವಿಂದ ರೆಡ್ಡಿ

ಈ ಸಂದರ್ಭದಲ್ಲಿ ಶಾಸಕರಾದ ಪ್ರಭು ಚವ್ಹಾಣ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದು ಪಾಟೀಲ್, ಶರಣು ಸಲಗರ, ರೈಲ್ವೆ ಸಲಹಾ ಸಮಿತಿ ಸದಸ್ಯ ಶಿವರಾಜ ಗಂದಗೆ, ಬಾಬು ವಾಲಿ, ಜಿಪಂ ಮಾಜಿ ಸದಸ್ಯ ರವೀಂದ್ರ ರೆಡ್ಡಿ, ತಾಪಂ ಮಾಜಿ ಸದಸ್ಯ ವಿಜಯಕುಮಾರ ಕಡಗಂಚಿ, ದಿಗಂಬರರಾವ ಮಾನಕಾರಿ, ವೀರಣ್ಣ ಕಾರಬಾರಿ, ಕೆ.ಡಿ.ಗಣೇಶ, ಸನ್ಮುಖಯ್ಯ ಸ್ವಾಮಿ, ಸಂಗಮೇಶ ಟೆಂಕಾಳೆ, ರವೀಂದ್ರ ಕಣಜೆ ಸೇರಿದಂತೆ ಹಲವರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...