ಬೀದರ್‌ | ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಕೇಂದ್ರ ಸಚಿವ ಭಗವಂತ ಖೂಬಾ

Date:

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಎಲ್ಲ 28 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ, ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಲಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಭವಿಷ್ಯ ನುಡಿದರು.

ಬೀದರ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಕಳೆದ ಹತ್ತು ತಿಂಗಳಿಂದ ಕಾಂಗ್ರೆಸ್‌ ಶಾಸಕರು ಅಸಮಧಾನಗೊಂಡಿದ್ದು, ಲೋಕಸಭಾ ಚುನಾವಣೆ ಬಳಿಕ ಅಸಮಾಧಾನ ಸ್ಫೋಟಗೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳುತ್ತದೆ” ಎಂದರು.

“ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾಗಿದ್ದ ಎಲ್ಲ ಅನುದಾನ ಬಿಡುಗಡೆ ಮಾಡಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್‌ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ರಾಜ್ಯದ ಸಿಎಂ ಸಿದ್ದರಾಮಯ್ಯನವರು ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಕೆಟ್ಟ ಚಾಳಿಯಿಂದ ಕೇಂದ್ರದ ಕಡೆಗೆ ಬೊಟ್ಟು ಮಾಡಿ ತೋರಿಸಿ ತಾವು ಬಚಾವ್‌ ಆಗಲು ಪ್ರಯತ್ನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯ ಸರ್ಕಾರದ ಒಂಬತ್ತು ತಿಂಗಳ ದುರಾಡಳಿತದಿಂದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಠೇವಣಿ ಕೂಡ ಸಿಗುವುದಿಲ್ಲ ಎಂದು ಮನಗಂಡು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನವನ್ನು ಸಿಎಂ ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

“ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರ್ಕಾರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶದ ಬಡವರಿಗೆ 4 ಕೋಟಿ ಮನೆಗಳನ್ನು ಕೊಟ್ಟಿದ್ದೇವೆ, ಕಾಂಗ್ರೆಸ್‌ ಸರ್ಕಾರ ವರ್ಷಕ್ಕೆ 7 ಲಕ್ಷ ಮನೆಗಳು ಕೊಟ್ಟಿತ್ತು, ನಾವು ವರ್ಷಕ್ಕೆ 40 ಲಕ್ಷ ಮನೆ ಕೊಟ್ಟಿದ್ದೇವೆ. ದೇಶದ 10.5 ಕೋಟಿ ಜನ ಬಡ ಹೆಣ್ಣು ಮಕ್ಕಳಿಗೆ ಉಚಿತ ಗ್ಯಾಸ್‌ ವಿತರಣೆ, ಹತ್ತು ವರ್ಷಗಳಲ್ಲಿ ಜೆಜೆಎಂ ಯೋಜನೆಯಡಿ 14 ಕೋಟಿ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, 12 ಕೋಟಿ ಮನೆಗಳಿಗೆ ಶೌಚಾಲಯ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅಂಜುಮನ್ ಸಂಸ್ಥೆಯಿಂದ ಮನವಿ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿ ಫಯಾಝ್...

ದಕ್ಷಿಣ ಕನ್ನಡ | ಬಿಜೆಪಿ ಸೋಲಿಸಿ ಜಾತ್ಯತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್ಐ ಕರೆ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು ಕಳೆದ ಎರಡು ಅವಧಿಯಿಂದ...

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು...