ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Date:

  • ಕೇಂದ್ರ ಸರ್ಕಾರದಂತೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ
  • ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ್ದ ಬಿಜೆಪಿ ಸರ್ಕಾರ

2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಒಂದು ತಿಂಗಳಿನಿಂದ ರಾಜ್ಯ ನೌಕರರು ತುಟ್ಟಿ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದರು. ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರ ವಹಿಸಿಕೊಂಡ ತಿಂಗಳಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮೊದಲ ಸಿಹಿ ಸುದ್ದಿ ನೀಡಿದೆ.

ಕೇಂದ್ರ ಸರ್ಕಾರದಂತೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಬುಧವಾರ ಸಹಿ ಹಾಕಿದ್ದರು. ಆರ್ಥಿಕ ಇಲಾಖೆ ಈ ಸಂಬಂಧ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏಪ್ರಿಲ್ 3ರಂದು ಕೇಂದ್ರ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ರಾಜ್ಯ ಸರ್ಕಾರವು ಈಗ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.

7ನೇ ವೇತನ ಆಯೋಗದ ಮಧ್ಯಂತರ ಪರಹಾರವಾಗಿ ಶೇ.17 ವೇತನ ಹೆಚ್ಚಳ ಮಾಡಿ ಹಿಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಹೆಚ್ಚಳವನ್ನು ಏಪ್ರಿಲ್ ತಿಂಗಳ ವೇತನದಲ್ಲಿಯೇ ಜಾರಿಗೆ ತರಲಾಗಿದೆ.

ಅಲ್ಲದೇ ಹಿಂದಿನ ಸರ್ಕಾರವು ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದು 2022ರ ಜುಲೈ1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಿತ್ತು.

ಅದಕ್ಕೂ ಮೊದಲು ಏಪ್ರಿಲ್‌ನಲ್ಲಿ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಜನವರಿ 1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು...

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...