ಚಾಮರಾಜನಗರ | ಕಲ್ಲುಕ್ವಾರಿ ದುರಂತ ಪ್ರಕರಣ; ವರ್ಷದ ಬಳಿಕ ಆರೋಪಿಗಳ ಬಂಧನ

Date:

  • ಅವೈಜ್ಞಾನಿಕವಾಗಿ ಕ್ವಾರಿ ನಡೆಸಿದ್ದು ದುರಂತಕ್ಕೆ ಕಾರಣವಾಗಿತ್ತು
  • ಕಲ್ಲುಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಗಳನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಉಪಗುತ್ತಿಗೆ ಪಡೆದು ಕ್ವಾರಿ ನಡೆಸುತ್ತಿದ್ದ ಮಹಮ್ಮದ್ ಹಕೀಂ ಮತ್ತು ಮಹಮ್ಮದ್ ಹಿಲಾಲ್ ಬಂಧಿತ ಆರೋಪಿಗಳು. ಕಳೆದ ಒಂದು ವರ್ಷದಿಂದಲೂ ದುರಂತದ ಪ್ರಮುಖ ಆರೋಪಿ ಹಕೀಂ‌ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದನು. ಆರೋಪಿಯನ್ನು ಬಂಧಿಸಿಲ್ಲವೆಂದು ಪೊಲೀಸರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಆರೋಪಿಯ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು. ಇದೀಗ, ಕೇರಳದ ಗುರುವಾಯೂರಿನಲ್ಲಿದ್ದ ಹಕೀಂ ಹಾಗೂ ಗುಂಡ್ಲುಪೇಟೆ ಪಟ್ಟಣದಲ್ಲಿದ್ದ ಹಿಲಾಲ್‌ನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ 

2022ರ ಮಾರ್ಚ್ 4 ರಂದು ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಗುಮ್ಮಕಲ್ಲು ಗುಡ್ಡದ  ಕಲ್ಲುಕ್ವಾರಿ ಕುಸಿದಿತ್ತು. ದುರ್ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಬಬ್ಲು, ಮೀರಜ್ ಹಾಗೂ ಸರ್ಫರಾಜ್ ಎಂಬ ಮೂವರು ಕಾರ್ಮಿಕರು ಕಲ್ಲಿನಡಿ ಸಿಲುಕಿ ಮೃತರಾಗಿದ್ದರು. ಅವೈಜ್ಞಾನಿಕವಾಗಿ ಕ್ವಾರಿ ನಡೆಸಿದ್ದು ದುರಂತಕ್ಕೆ ಕಾರಣವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...