ಬಜೆಟ್ | ಶಾಲಾ ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಾಂವಿಧಾನಿಕ ಒತ್ತು ಕೊಟ್ಟಿದೆ: ನಿರಂಜನಾರಾಧ್ಯ

Date:

“ಇಡೀ ಶಾಲಾ ಶಿಕ್ಷಣ ವ್ಯವಸ್ಥೆಯ ಪುನಶ್ಚೇತನ ಮತ್ತು ಬಲವರ್ಧನೆಯನ್ನು ಸಾಂವಿಧಾನಿಕ ಮತ್ತು ವೈಚಾರಿಕತೆಯ ನೆಲೆಯಲ್ಲಿ ನೋಡಿರುವುದು ಈ ಆಯವ್ಯಯದ ವಿಶೇಷತೆ ಮತ್ತು ಕಾಲದ ಕರೆ” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ಹಾಗೂ ಸಮಾನ ಶಾಲೆಯ ಹರಿಕಾರ ನಿರಂಜನಾರಾಧ್ಯ ವಿ.ಪಿ. ಹೇಳಿದ್ದಾರೆ.

“2024-25ರ ಆಯವ್ಯಯದಲ್ಲಿ ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚಿನ ಹಣ ನೀಡಿರುವುದು ಅತ್ಯಂತ ಆಶಾದಾಯಕ ಬೆಳವಣಿಗೆ. ಎಲ್ಲ ಕನ್ನಡಿಗರು ಸ್ವಾಗತಿಸಬೇಕಾದ ಆಯವ್ಯಯ. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ, ಬರೋಬರಿ ₹6,835 ಕೋಟಿ ಹೆಚ್ಚಿನ ಮೊತ್ತವನ್ನು ಮೀಸಲಿರಿಸಲಾಗಿದೆ. ಶೇಕಡಾವಾರು ಲೆಕ್ಕದಲ್ಲಿ ಶೇಕಡ 18.18ರಷ್ಟು ಹೆಚ್ಚಳವಾಗಿದೆ. ಒಟ್ಟು ಆಯವ್ಯಯದಲ್ಲಿ ಶಿಕ್ಷಣಕ್ಕೆ 12% ರಷ್ಟು ಮೀಸಲಿಡಲಾಗಿದೆ. ಕಳೆದ ಬಾರಿಗೆ ಹೋಲಿಸಿದರೆ 1% ರಷ್ಟನ್ನು ಹೆಚ್ಚಿಸಲಾಗಿದೆ. ಒಟ್ಟು ಆಯವ್ಯಯದಲ್ಲಿ ಶೇಕಡ ಒಂದರಷ್ಟರ ಹೆಚ್ಚಳ ನಿರ್ಣಾಯಕ ಹೆಚ್ಚಳವಾಗಿದೆ” ಎಂದು ತಿಳಿಸಿದ್ದಾರೆ.

“2023-24ರ ಆಯವ್ಯಯಗಳ ಒಂದು ಅಧ್ಯಯನ ವರದಿಯ ಅನ್ವಯ, 2023-24ನೇ ಸಾಲಿನ ಅಂದಾಜು ಆಯವ್ಯಯದಲ್ಲಿ ಶಿಕ್ಷಣಕ್ಕೆ ಹೆಚ್ಚು ಹಣ ಹೂಡಿದ ದಕ್ಷಿಣ ಭಾರತದ ಮೊದಲ ಐದು ರಾಜ್ಯಗಳೆಂದರೆ ಮಹಾರಾಷ್ಟ್ರ, ಗೋವಾ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ. ಈ ರಾಜ್ಯಗಳು ಕ್ರಮವಾಗಿ 14.9%, 14%, 12.3%, 12.1% ಮತ್ತು 11.7% ರಷ್ಟನ್ನು ಹೂಡಿದ್ದವು. ಈಗ ಕರ್ನಾಟಕ ಶಿಕ್ಷಣಕ್ಕೆ 12% ರಷ್ಟನ್ನು ನೀಡುವ ಮೂಲಕ ಮೊದಲ 5 ರಾಜ್ಯಗಳ ಪಟ್ಟಿಗೆ ಸೇರಿರುವುದು ಸ್ವಾಗತಾರ್ಹ ಬೆಳವಣಿಗೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜೊತೆಗೆ, ಮೂಲಭೂತ ಸೌಕರ್ಯಕ್ಕೆ ₹850 ಕೋಟಿ, ಶಾಲಾ ಹಾಗೂ ಪದವಿ ಪೂರ್ವ ಹಂತದಲ್ಲಿ ವಿಜ್ಞಾನ-ಕಂಪ್ಯೂಟರ್‌ ಶಿಕ್ಷಣಕ್ಕೆ ಒತ್ತು ನೀಡುವ ಹಲವು ಉಪಕ್ರಮಗಳು ಗುಣಮಟ್ಟದ ವರ್ಧನೆಗೆ ಸಹಕಾರಿಯಾಗಲಿವೆ. ಶಿಕ್ಷಕರ ನೇಮಕಾತಿಯ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪಿಸಿ ಭರವಸೆ ನೀಡಿರುವುದು ಸರ್ಕಾರಿ ಶಾಲೆಗಳ ಬಲವರ್ಧನೆಯ ಬಗ್ಗೆ ಆಶಾಭಾವನೆ ಮೂಡಿಸುತ್ತದೆ” ಎಂದು ಹೇಳಿದ್ದಾರೆ.

“ಈ ಎಲ್ಲ ರಚನಾತ್ಮಕ ಅಂಶಗಳ ಜತೆಗೆ, ಸಾಮಾಜಿಕ ನ್ಯಾಯದ ಹರಿಕಾರರೆಂದೇ ಬಿಂಬಿತವಾಗಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಸಮಾನ ಶಾಲೆಗಳ ಬಗ್ಗೆ ಪ್ರಸ್ತಾಪಿಸಬೇಕಿತ್ತು. 2000 ಸರ್ಕಾರಿ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳನ್ನಾಗಿಸುವ ಬದಲು, ಆ ಶಾಲೆಗಳನ್ನು ಕನ್ನಡ ಮಾಧ್ಯಮದಲ್ಲಿಯೇ ಮುಂದುವರಿಸಿ ಆಂಗ್ಲ ಭಾಷೆಯನ್ನು ಅತ್ಯುತ್ತಮ ಹಾಗೂ ಪ್ರಭುತ್ವದ ಮಟ್ಟಕ್ಕೆ ಕಲಿಸಲು ಅನುವಾಗುವಂತೆ ಈ 2000 ಶಾಲೆಗಳಲ್ಲಿ ಆಂಗ್ಲ ಶಿಕ್ಷಕರ ನೇಮಿಸುವ ಬಗ್ಗೆ ಕ್ರಮ ವಹಿಸಬೇಕಿತ್ತು” ಎಂದಿದ್ದಾರೆ.

“ಜತೆಗೆ, ಅವರದೇ ಸರ್ಕಾರ 2015ರಲ್ಲಿ ಜಾರಿಗೊಳಿಸಿದ್ದ ಕನ್ನಡ ಕಲಿಕಾ ಅಧಿನಿಯಮ 2015ನ್ನು ಕನ್ನಡ ಮಾಧ್ಯಮೇತರ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಡ್ಡಾಯಗೊಳಿಸುವ ಬಗ್ಗೆ ಪ್ರಸ್ತಾಪಿಸಬೇಕಿತ್ತು. ಬಹಳ ಮುಖ್ಯವಾಗಿ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಅವರ ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಸರ್ಕಾರಿ ಶಾಲೆಗಳ ಸಬಲೀಕರಣ ವರದಿ 2017 ಅನ್ನು ಸದನದಲ್ಲಿ ಮಂಡಿಸಿ ಜಾರಿಗೊಳಿಸುವ ಬಗ್ಗೆ ಮತ್ತು ಅದಕ್ಕಾಗಿ ಸರ್ಕಾರಿ ಶಾಲೆಗಳ ಸಬಲೀಕರಣ ಪ್ರಾಧಿಕಾರ ರಚನೆಗೆ ಒತ್ತು ನೀಡಬೇಕಿತ್ತು. ಜತೆಗೆ, ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕ ನಿಯಂತ್ರಣ ಮತ್ತು ಉತ್ತಮ ಆಡಳಿತದಲ್ಲಿ ಪಾಲಕರ ಭಾಗವಹಿಸುವಿಕೆಗೆ ಸೂಕ್ತ ಕಾನೂನು ಜಾರಿಗೊಳಿಸುವ ಭರವಸೆ ಬೇಕಿತ್ತು” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉತ್ತಮ ಆರೈಕೆ, ರಕ್ಷಣೆ, ಪೋಷಣೆ, ಆರೋಗ್ಯ ಮತ್ತು ಗುಣಾತ್ಮಕ ಶಿಕ್ಷಣ ಒದಗಿಸಬೇಕಾದರೆ, ಮಕ್ಕಳ ಹಕ್ಕುಗಳ ಆಧಾರಿತ ಕಾನೂನುಗಳಾದ ಬಾಲ್ಯ ವಿವಾಹ ನಿಷೇಧ ಕಾಯಿದೆ (2006), ಶಿಕ್ಷಣ ಹಕ್ಕು ಕಾಯಿದೆ (2009), ಆಹಾರ ಭದ್ರತೆ ಕಾಯಿದೆ (2013), ಬಾಲನ್ಯಾಯ ಕಾಯಿದೆ (2015) ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕಾಯಿದೆ (2016) ಅನ್ನು ಜಾರಿಗೊಳಿಸುವುದು ಅತ್ಯಂತ ಮುಖ್ಯವಾದ ಸಂಗತಿ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೂಲ ಹುಡುಕಿ ಸ್ವೀಡನ್‌ನಿಂದ ಭಾರತಕ್ಕೆ ಬಂದ 39 ವರ್ಷದ ಮಹಿಳೆ

“ಎಲ್ಲ ಮಕ್ಕಳಿಗೆ ನೆರೆಹೊರೆ ಶಾಲೆಯಲ್ಲಿಯೇ ಗುಣಮಟ್ಟದ ಶಿಕ್ಷಣ ಒದಗಿಸಲು ಮತ್ತು ಸಾರ್ವಜನಿಕ ಶಾಲೆಗಳನ್ನು ಬಲವರ್ಧನೆಗೊಳಿಸುವ ನಮಗಿರುವ ಮಾರ್ಗ ಕೇವಲ ಮೂರು. ಒಂದು, ಯುಪಿಎ ಸರ್ಕಾರ ರೂಪಿಸಿ ಜಾರಿಗೊಳಿಸಿದ ಶಿಕ್ಷಣ ಹಕ್ಕು ಕಾಯಿದೆ(2009)ಯ ಸಮರ್ಪಕ ಹಾಗೂ ಪರಿಣಾಮಕಾರಿ ಜಾರಿ. ಎರಡು, ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಒಳಮಾಡಿಕೊಂಡು ಉನ್ನತ ಫ್ರೌಢ ಶಿಕ್ಷಣದವರೆಗೆ ಶಾಲಾ ಶಿಕ್ಷಣವನ್ನು ಎಲ್ಲ ಮಕ್ಕಳಿಗೆ ಒಂದು ಮೂಲಭೂತ ಹಕ್ಕನ್ನಾಗಿಸಲು ಶಿಕ್ಷಣ ಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ. ಮೂರನೇಯದಾಗಿ, ರಾಜ್ಯದ ಎಲ್ಲ ಮಕ್ಕಳಿಗೆ ನೆರೆಹೊರೆಯ ಶಾಲೆ ತತ್ವದ ಅಡಿಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಪೂರ್ಣ ಉಚಿತವಾಗಿ ಒದಗಿಸುವ ಮೂಲಕ ಕೊಥಾರಿ ಆಯೋಗದ ಸಮಾನ ಶಾಲಾ ಶಿಕ್ಷಣದ ಕನಸನ್ನು ನನಸಾಗಿಸಲು ಅಗತ್ಯ ಸಂಪನ್ಮೂಲ ಹೂಡಿಕೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು...

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...