ಸಂಘ ಸಂಸ್ಥೆಗಳ ಮೇಲಿನ ಪ್ರಕರಣ ಹಿಂಪಡೆಯಲು ಉಪಸಮಿತಿ : ಸಚಿವ ಎಚ್.ಕೆ. ಪಾಟೀಲ್

Date:

  • ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ
  • ಅನ್ನಭಾಗ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ಮಾತನ್ನು ಉಳಿಸಿಕೊಂಡಿದ್ದೇವೆ

ಪ್ರತಿಭಟನಾನಿತರ ಸಂಘಸಂಸ್ಥೆಗಳ ಮೇಲೆ ಪೊಲೀಸರು ಸುಳ್ಳು ಕೇಸು ದಾಖಲಿಸಿ, ಸದ್ಯ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳನ್ನು ಹಿಂಪಡೆಯುವ ಸಲುವಾಗಿ ಅದನ್ನು ಪರಿಶೀಲಿಸಲು ಸಚಿವ ಸಂಪುಟವು ಉಪಸಮಿತಿಯೊಂದನ್ನು ನೇಮಿಸಲು ನಿರ್ಧಾರ ತೆಗೆದುಕೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಹಲವಾರು ಸಂಘಸಂಸ್ಥೆಗಳ ಪ್ರತಿನಿಧಿಗಳು ಹಲವು ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸರು ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ. ಹೀಗಾಗಿ ಅವುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಹೀಗಾಗಿ, ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಬಗ್ಗೆ ಹಿಂಪಡೆಯುವುದನ್ನು ಪರಿಶೀಲಿಸಲು ಸಲುವಾಗಿ ಸಚಿವ ಸಂಪುಟವು ಉಪಸಮಿತಿಯೊಂದನ್ನು ನೇಮಿಸಲು ನಿರ್ಧಾರ ತೆಗೆದುಕೊಂಡಿದೆ. ಈ ಉಪಸಮಿತಿಯ ರಚನೆ ಹಾಗೂ ಸದಸ್ಯರ ನೇಮಕದ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ: ಅಕ್ಕಿ ಬದಲು ಹಣ ನೀಡಲು ಸರ್ಕಾರ ನಿರ್ಧಾರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯಾವುದೇ ಸಂಘಟನೆ ಇರಲಿ. ಅವರು ನಿರಪರಾಧಿಗಳು, ಸುಳ್ಳು ಆರೋಪ ಅಥವಾ ಅನ್ಯಾಯವಾಗಿದೆ ಎಂಬುವುದು ಕಂಡುಬಂದರೆ ಈ ಉಪಸಮಿತಿ ಅವುಗಳನ್ನು ಪರಿಗಣಿಸುತ್ತದೆ. ಪೊಲೀಸರ ಕೆಟ್ಟ ನಿರ್ಣಯಗಳಿಂದ ಜನರಿಗೆ ತೊಂದರೆ, ಕಿರುಕುಳ ಆಗುವಂತಹ ಪ್ರಕರಣಗಳು ದಾಖಲಾಗಿದ್ದರೆ ನ್ಯಾಯವನ್ನು ಸರ್ಕಾರ ನೀಡುತ್ತದೆ ಎಂಬ ಸಂದೇಶ ಇದರಲ್ಲಿದೆ ಎಂದು ಕಾನೂನು ಸಚಿವ ಪಾಟೀಲ್ ಸಂಪುಟದ ಈ ನಿರ್ಣಯಕ್ಕೆ ಸ್ಪಷ್ಟನೆ ನೀಡಿದರು.

ಹಲವು ಪ್ರತಿಭಟನಾಕಾರರ ಮೇಲೆ ಪೊಲೀಸರು ದಾಖಲಿಸಿರುವ ಸುಳ್ಳು ಕೇಸುಗಳನ್ನು ಹಿಂಪಡೆಯಬೇಕೆಂದು ಇತ್ತೀಚೆಗೆ ಹಲವು ಸಂಘಸಂಸ್ಥೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದವು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...