91 ವರ್ಷದ ವ್ಯಕ್ತಿಗೆ ಯಶಸ್ವಿ ಹೃದಯದ ಮಹಾಅಪಧಮನಿ ಕವಾಟ ಬದಲಾವಣೆ

Date:

  • ಹೃದಯದಲ್ಲಿ ರಕ್ತದ ಹರಿಯುವಿಕೆಯ ಪ್ರಮಾಣ ಕಡಿಮೆಯಾಗಿ ಉಸಿರಾಟದ ಸಮಸ್ಯೆ
  • ಪರೀಕ್ಷೆಗಳಿಗೆ ಒಳಪಡಿಸಿದಾಗ ಕ್ಯಾಲ್ಸಿಫಿಕ್ ಮಹಾಅಪಧಮನಿಯ ಸ್ಟೆನೋಸಿಸ್ ಸಮಸ್ಯೆ ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯ ವೈದ್ಯರು 91 ವರ್ಷದ ಹಿರಿಯ ವ್ಯಕ್ತಿಗೆ ಪ್ರಜ್ಞೆ ಇರುವಾಗಲೇ ಯಶಸ್ವಿಯಾಗಿ ಹೃದಯದ ಟ್ಯಾನ್ಸ್‌ಕ್ಯಾಥೆಟರ್‌ ಮಹಾಪಧಮನಿ ಕವಾಟ ಬದಲಾವಣೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಯ ನಿರ್ದೇಶಕ ರಾಜ್‌ಪಾಲ್ ಸಿಂಗ್, “91 ವರ್ಷದ ಹಿರಿಯ ವ್ಯಕ್ತಿಯೊಬ್ಬರು ಅವರ ಹೃದಯದ ಮಹಾಅಪಧಮನಿ ಕವಾಟದಲ್ಲಿ ದೀರ್ಘಕಾಲದ ಸಮಸ್ಯೆ ಹೊಂದಿದ್ದರು. ಹೃದಯದಲ್ಲಿ ರಕ್ತದ ಹರಿಯುವಿಕೆಯ ಪ್ರಮಾಣ ಕಡಿಮೆಯಾಗಿ ಉಸಿರಾಟದ ಸಮಸ್ಯೆ ಸೇರಿದಂತೆ ಇನ್ನಿತರ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು” ಎಂದರು.

“ಹೀಗಾಗಿ, ಹಿರಿಯ ವ್ಯಕ್ತಿಯನ್ನು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಿದಾಗ ಅವರಿಗೆ ಕ್ಯಾಲ್ಸಿಫಿಕ್ ಮಹಾಅಪಧಮನಿಯ ಸ್ಟೆನೋಸಿಸ್ ಸಮಸ್ಯೆ ಇರುವುದು ಪತ್ತೆಯಾಯಿತು. ಇದು ತೀವ್ರವಾಗಿದೆ ಎಂಬುದು ಗೊತ್ತಾಯಿತು. ಬಳಿಕ ರೋಗಿಗೆ ವಯಸ್ಸಾದ ಕಾರಣ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡುವುದು ಅಪಾಯವಿತ್ತು. ಹಾಗಾಗಿ, ಟ್ರಾನ್ಸ್‌ಕ್ಯಾಥೆಟರ್ ಮಹಾಅಪಧಮನಿಯ ಕವಾಟದ ಬದಲಾವಣೆ ಮಾಡುವುದೇ ಸೂಕ್ತವೆಂದು ಅನಿಸಿತು. ರೋಗಿಗೆ ಚಿಕಿತ್ಸೆ ನೀಡಲು ಈ ವಿಧಾನವನ್ನು ಆಯ್ಕೆ ಮಾಡಿಕೊಂಡೆವು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗ್ರಾಹಕರೇ ನಕಲಿ ಬಿಲ್‌ ಬಗ್ಗೆ ಎಚ್ಚರವಿರಲಿ ಎಂದ ಬೆಸ್ಕಾಂ

“ಕ್ಯಾಲ್ಸಿಫಿಕ್ ಮಹಾಅಪಧಮನಿಯ ಸ್ಟೆನೋಸಿಸ್ ಸಮಸ್ಯೆ ಇದ್ದಾಗ ಹೃದಯದ ಕವಾಟ ಕಿರಿದಾಗುತ್ತದೆ. ಇದರಿಂದ ದೇಹಕ್ಕೆ ಸಮರ್ಪಕವಾಗಿ ರಕ್ತ ಪೂರೈಕೆಯಾಗುವುದಿಲ್ಲ. ಇನ್ನೂ ವಯಸ್ಸಾದಂತೆ ಈ ಕವಾಟಗಳಿಗೆ ಹಾನಿಯಾಗುವ ಸಮಸ್ಯೆ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಇಂತಹ ಕಾಯಿಲೆ ಕಾಣಿಸಿಕೊಂಡಾಗ ಹಾನಿಗೊಳಗಾದ ಕವಾಟಗಳನ್ನು ತೆರೆದ ಹೃದಯ ಶಸ್ತ್ರಚಿಕಿತ್ಸೆ ಮೂಲಕ ಬದಲಾಯಿಸಲಾಗುತ್ತದೆ” ಎಂದು ಹೇಳಿದರು.

“ರೋಗಿಗೆ 91 ವರ್ಷ ವಯಸ್ಸಾದ ಕಾರಣ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮೂಲಕ ಚಿಕಿತ್ಸೆ ನೀಡುವುದು ಅಪಾಯವಿತ್ತು. ಹಾಗಾಗಿ, ಅತ್ಯಾಧುನಿಕ ತಂತ್ರಜ್ಞಾನವಾದ ಟಿಎವಿಐ (TAVI) ವಿಧಾನದ ಮೂಲಕ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ನೀಡುವ ವೇಳೆ ರೋಗಿಯು ಪ್ರಜ್ಞೆ ಇರುವಾಗಲೇ ಸಂಪೂರ್ಣ ಅಳವಡಿಕೆ ಮಾಡಲಾಗಿದೆ. ಟಿಎವಿಐ(TAVI) ವಿಧಾನದ ಮರುದಿನವೇ ರೋಗಿಯನ್ನು ಬಿಡುಗಡೆಗೊಳಿಸಲಾಗಿದ್ದು, ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...