ಸಿಬಿಐ, ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕೇಜ್ರಿವಾಲ್‌ ಸರ್ಕಾರ

Date:

  • ಏಪ್ರಿಲ್ 16 ರಂದು ಕೇಜ್ರಿವಾಲ್‌ ಹಾಜರಾಗುವಂತೆ ಸಮನ್ಸ್ ನೀಡಿರುವ ಸಿಬಿಐ
  • ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್‌, ಮನೀಶ್ ಸಿಸೋಡಿಯಾ

ತಮ್ಮ ಪಕ್ಷದ ನಾಯಕರ ವಿರುದ್ಧ ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷ್ಯಗಳನ್ನು ಒದಗಿಸಿದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ದೆಹಲಿಯ ಎಎಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ತಮ್ಮ ಪಕ್ಷದ ಪ್ರಮುಖ ಇಬ್ಬರು ಸಚಿವರನ್ನು ಗುರಿಯಾಗಿಸಲಾಗಿದೆ. ಕೇಂದ್ರೀಯ ತನಿಖಾ ದಳದಿಂದ ಸಮನ್ಸ್ ಪಡೆಯುವ ಸಾಲಿನಲ್ಲಿ ಮುಂದಿನ ಸರದಿ ನನ್ನದು ಎಂದು ನನಗೆ ತಿಳಿದಿದೆ. ದೆಹಲಿ ವಿದಾನಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡಿದ ದಿನದಿಂದ ನಮ್ಮ ಪಕ್ಷವನ್ನು ಗುರಿ ಮಾಡಲಾಗುತ್ತದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ ದೆಹಲಿ ಮುಖ್ಯಮಂತ್ರಿ, “ಕೇಜ್ರಿವಾಲ್ ಭ್ರಷ್ಟರಾಗಿದ್ದರೆ, ಈ ಜಗತ್ತಿನಲ್ಲಿ ಪ್ರಾಮಾಣಿಕರು ಯಾರೂ ಇಲ್ಲ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತನಿಖಾ ಸಂಸ್ಥೆಗಳು ಬಂಧಿನಕ್ಕೊಳಪಟ್ಟ ಆರೋಪಿಗಳಿಗೆ ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ನೀಡುತ್ತಿವೆ. ಬಂಧಿತರಲ್ಲಿ ಒಬ್ಬರಾದ ಚಂದನ್ ರೆಡ್ಡಿ ಎಂಬವರ ವೈದ್ಯಕೀಯ ವರದಿಯನ್ನು ಪ್ರಸ್ತುತಪಡಿಸಿದ ಕೇಜ್ರೀವಾಲ್ ‘2022ರ ಸೆಪ್ಟೆಂಬರ್ 16, ಮತ್ತು 17 ನೇ ರಂದು ಇ.ಡಿ ಅಧಿಕಾರಿಗಳು ಚಂದನ್‌ ರೆಡ್ಡಿಯ ಎರಡು ಕಿವಿ ಹಾಗೂ ಮುಖದ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸೂಚಿಸಿದರು.

“ಚಂದನ್‌ ಅವರನ್ನು ಈ ರೀತಿ ಥಳಿಸಲು ಆತ ಏನು ಮಾಡಿದ್ದಾನೆ? ಯಾವ ಕಾಗದಕ್ಕೆ ಸಹಿ ಹಾಕಿಸಿಕೊಳ್ಳಲು ಈ ರೀತಿ ಮಾಡಲಾಯಿತು? ಅಥವಾ ಅವರು ಸುಳ್ಳು ಹೇಳಲು ನಿರಾಕರಿಸಿದ ಕಾರಣ ಅವರನ್ನು ಥಳಿಸಲಾಗಿದೆಯೇ” ಎಂದು ಕೇಜ್ರಿವಾಲ್ ಪ್ರಶ್ನಿಸಿದರು.

ಅಬಕಾರಿ ನೀತಿಯನ್ನು ಶ್ಲಾಘಿಸಿದ ಕೇಜ್ರಿವಾಲ್, “ಇದು ಅಬಕಾರಿ ವಲಯದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುತ್ತದೆ. ಇದೇ ನೀತಿಯನ್ನು ಪಂಜಾಬ್‌ ರಾಜ್ಯದಲ್ಲಿ ಜಾರಿಗೆ ತಂದ ನಂತರ ಅಬಕಾರಿ ಆದಾಯವು ಶೇ 50 ರಷ್ಟು ಹೆಚ್ಚಾಗಿದೆ” ಎಂದು ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಎಎಪಿ ಸಂಸದ ಸಂಜಯ್ ಸಿಂಗ್, “ಕೇಜ್ರಿವಾಲ್ ಅವರನ್ನು ಏಪ್ರಿಲ್ 16 ರಂದು ಬಂಧಿಸಿ ಜೈಲಿಗೆ ಕಳುಹಿಸುವ ಪಿತೂರಿಯು ಅವರ ಧ್ವನಿಯನ್ನು ಹತ್ತಿಕ್ಕುವುದಿಲ್ಲ. ದೆಹಲಿಯ ವಿಧಾನಸಭೆಯಲ್ಲಿ ಕೇಜ್ರಿವಾಲ್ ಪ್ರಧಾನಿ ಮೋದಿಯವರ ‘ಸ್ನೇಹಿತ’ರನ್ನು ಪ್ರಶ್ನಿಸಿದ ಮುಂದಿನ ದಿನವೇ ಸಿಬಿಐ ಸಮನ್ಸ್ ಜಾರಿಗೊಳಿಸಿದೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...