ಜೂ.15ರೊಳಗೆ ಮುಖ್ಯ ಕಚೇರಿಯಲ್ಲಿನ ಒತ್ತುವರಿ ಜಾಗ ಖಾಲಿ ಮಾಡಿ: ಎಎಪಿಗೆ ಸುಪ್ರೀಂ ಕೋರ್ಟ್ ಆದೇಶ

Date:

ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್‌ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ ಬಿಡುವಂತೆ ಗಡುವು ವಿಧಿಸಿದೆ.

ಎಎಪಿ ಪಕ್ಷವು ಪರ್ಯಾಯ ಭೂಮಿಗಾಗಿ ಕೇಂದ್ರದ ಭೂಮಿ ಮತ್ತು ಅಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಫೆಬ್ರವರಿಯಲ್ಲಿ,ನ್ಯಾಯಾಲಯವು ವಿಸ್ತರಣಾ ಯೋಜನೆಗಾಗಿ ದೆಹಲಿ ಹೈಕೋರ್ಟ್‌ಗೆ ನೀಡಿರುವ ಜಾಗವನ್ನು ಎಎಪಿ ಭೂಮಿ ಅತಿಕ್ರಮಿಸಿಕೊಂಡಿರುವುದನ್ನು ಗಮನಿಸಿತು.

ಯಾರೊಬ್ಬರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

“ಹೇಗೆ ಯಾವುದೇ ರಾಜಕೀಯ ಪಕ್ಷ ಇದರ ಮೇಲೆ ಕುಳಿತುಕೊಳ್ಳುತ್ತದೆ? ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಲಾಗುವುದು. ಸಾರ್ವಜನಿಕರಿಗೆ ಮತ್ತು ನಾಗರಿಕರಿಗೆ ಉಪಯೋಗವಾಗುವ ಭೂಮಿಯನ್ನು ಹೈಕೋರ್ಟ್ ಸ್ವಾಧೀನ ಪಡಿಸಿಕೊಳ್ಳಬೇಕು” ಎಂದು ಚಂದ್ರಚೂಡ್ ಹೇಳಿದರು.

“ಮುಂದಿನ ವಿಚಾರಣೆ ದಿನಾಂಕದೊಳಗಾಗಿ ದೆಹಲಿಯ ಲೋಕೋಪಯೋಗಿ ಕಾರ್ಯದರ್ಶಿ ಹಾಗೂ ಹಣಕಾಸಿನ ಕಾರ್ಯದರ್ಶಿ ಅವರು ದೆಹಲಿ ಹೈಕೋರ್ಟ್‌ನ ರಿಜಸ್ಟ್ರಾರ್‌ ಅವರೊಂದಿಗೆ ಸಭೆ ಹಮ್ಮಿಕೊಂಡು ಎಲ್ಲ ವಿಷಯಗಳನ್ನು ಪರಿಹರಿಸಿಕೊಳ್ಳಬೇಕು” ಎಂದು ಮುಖ್ಯ ನ್ಯಾಯಾಧೀಶರು ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...