ಜ್ಞಾನವಾಪಿ ಮಸೀದಿ | ಹೈಕೋರ್ಟ್‌ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Date:

  • ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡು ಬಂದಿರುವ ಶಿವಲಿಂಗ
  • ಮು.ನ್ಯಾ. ಡಿ.ವೈ.ಚಂದ್ರಚೂಡ್‌ ನೇತೃತ್ವದ ಐವರ ಪೀಠ ವಿಚಾರಣೆ

ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೊರೆತಿದೆ ಎಂದು ಹೇಳಲಾಗಿರುವ ಶಿವಲಿಂಗ ರಚನೆಯ ಕಾರ್ಬನ್‌ ಡೇಟಿಂಗ್‌ಗೆ ಸಂಬಂಧಿಸಿ ಅಲಹಾಬಾದ್‌ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಗುರುವಾರ (ಮೇ 18) ಸಮ್ಮತಿಸಿದೆ.

ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಹಾಗೂ ಜೆ.ಬಿ.ಪರ್ದಿವಾಲಾ ಅವರ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಜ್ಞಾನವಾಪಿ ಮಸೀದಿಯ ಅರ್ಜಿಯ ಬಗ್ಗೆ ವಿಸ್ತೃತ ವಿಚಾರಣೆಯನ್ನು ಶುಕ್ರವಾರ (ಮೇ 19) ನಡೆಸುವುದಾಗಿ ಪೀಠ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಸೀದಿಯ ಆಡಳಿತ ಮಂಡಳಿ ಪರವಾಗಿ ಹಾಜರಾಗಿದ್ದ ವಕೀಲ ಹುಝೆಫಾ ಅಹ್ಮದಿ, “ಮೇಲ್ಮನವಿಯ ವಿಚಾರಣೆ ಬಾಕಿ ಇರುವಾಗಲೇ ಅಲಹಾಬಾದ್ ಹೈಕೋರ್ಟ್ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ಆದೇಶ ನೀಡಿದೆ” ಎಂದು ಹೇಳಿದರು.

ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿರುವ ಶಿವಲಿಂಗದ ಕಾಲ ನಿರ್ಣಯಕ್ಕಾಗಿ ವೈಜ್ಞಾನಿಕ ಪರೀಕ್ಷೆ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಇದೇ 12 ರಂದು ಆದೇಶ ನೀಡಿತ್ತು.

ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಪತ್ತೆಯಾದ ರಚನೆಯ ಕಾರ್ಬನ್ ಡೇಟಿಂಗ್ ಪರೀಕ್ಷೆಯನ್ನು ತಿರಸ್ಕರಿಸಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಅಲಹಾಬಾದ್‌ ಹೈಕೋರ್ಟ್ ರದ್ದುಗೊಳಿಸಿತ್ತು.

2022ರಲ್ಲಿ ನಡೆದ ಸಮೀಕ್ಷೆಯಲ್ಲಿ ಪತ್ತೆಯಾದ ರಚನೆಯ ಬಗ್ಗೆ ವೈಜ್ಞಾನಿಕ ತನಿಖೆ ನಡೆಸಲು ಹಿಂದೂ ಆರಾಧಕರು ಸಲ್ಲಿಸಿದ ಅರ್ಜಿಯ ಕುರಿತು ಕಾನೂನಿನ ಪ್ರಕಾರ ಮುಂದುವರಿಯುವಂತೆ ಹೈಕೋರ್ಟ್ ಜಿಲ್ಲಾ ನ್ಯಾಯಾಧೀಶರಿಗೆ ಸೂಚಿಸಿತ್ತು.

2022ರ ಅಕ್ಟೋಬರ್ ನಲ್ಲಿ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ತಿರಸ್ಕರಿಸಿದ ವಾರಾಣಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಲಕ್ಷ್ಮಿ ದೇವಿ ಮತ್ತು ಇತರ ಮೂವರು ಸಲ್ಲಿಸಿದ ಪರಿಷ್ಕರಣೆ ಅರ್ಜಿಯನ್ನು ಅದು ಅಂಗೀಕರಿಸಿತ್ತು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ; ಮಮತಾ ಬ್ಯಾನರ್ಜಿ

ಕಾರ್ಬನ್ ಡೇಟಿಂಗ್ ಎನ್ನುವುದು ಹಳೆಯ ವಸ್ತುಗಳ ವಯಸ್ಸನ್ನು ಲೆಕ್ಕಹಾಕುವ ವಿಧಾನವಾಗಿದ್ದು, ಅವುಗಳಲ್ಲಿರುವ ಇಂಗಾಲದ ನಾನಾ ರೂಪಗಳ ಪ್ರಮಾಣವನ್ನು ಅಳೆಯಲಾಗುತ್ತದೆ.

2021ರ ಆಗಸ್ಟ್‌ನಲ್ಲಿ ಐವರು ಮಹಿಳೆಯರು ಹಿಂದೂ ದೇವರುಗಳ ವಿಗ್ರಹಗಳನ್ನು ಹೊಂದಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಇರುವ ಮಾ ಶೃಂಗಾರ್ ಗೌರಿ ಸ್ಥಳದಲ್ಲಿ ಅಡೆತಡೆಯಿಲ್ಲದ ಪೂಜೆಯ ಹಕ್ಕನ್ನು ಕೋರಿ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...