ಸುರೇಶ್‌ಗೆ ರಾಜಕೀಯ ವೈರಾಗ್ಯವಿಲ್ಲ; ಹೊಸಬರನ್ನು ಬೆಳೆಸುವ ಇಚ್ಛೆಇದೆ: ಸಚಿವ ಡಿಕೆಶಿ

Date:

  • ಸಹೋದರ ಡಿ ಕೆ ಸುರೇಶ್ ರಾಜಕಿಯ ಭವಿಷ್ಯದ ಬಗ್ಗೆ ಮಾತನಾಡಿದ ಡಿಕೆಶಿ
  • ಅಕ್ಕಿ ರಾಜಕೀಯ ಮಾಡಲು ಹೊರಟ ಕೇಂದ್ರದ ವಿರುದ್ಧ ನಾಳೆ ʼಕೈʼ ಪ್ರತಿಭಟನೆ

ಡಿ ಕೆ ಸುರೇಶ್‌ಗೆ ಬೇರೆಯವರನ್ನು ಬೆಳೆಸಬೇಕೆಂಬ ಇಚ್ಚೆ ಇದೆ. ಹಾಗಾಗಿ ಅವರು ನನಗೆ ರಾಜಕಾರಣ ಸಾಕಾಗಿದೆ ಎಂದಿದ್ದಾರೆಯೇ ಹೊರತು ರಾಜಕೀಯ ವೈರಾಗ್ಯದ ಕಾರಣಕ್ಕಲ್ಲ ಎಂದು ಸಚಿವ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ತಮ್ಮ ಸಹೋದರ ಡಿ ಕೆ ಸುರೇಶ್ ತಮ್ಮ ರಾಜಕೀಯ ಜೀವನದ ಕುರಿತು ನೀಡಿದ್ದ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು” ಎಂದರು.

“ಸುರೇಶ್ ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎನ್ನುವ ಆಸೆ ಇದೆ. ಆವರು ಆ ಹಿನ್ನೆಲೆಯಲ್ಲಿ ರಾಜಕೀಯ ಸಾಕಾಗಿದೆ ಎಂದಿರಬಹುದು. ಆದರೆ ಮಾಧ್ಯಮದವರು ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಹೇಗೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಮಾಜಿ ಸಚಿವ ಆರ್ ಅಶೋಕ್ ‌ ಹೇಳಿಕೆ ಕುರಿತು ಕೇಳಿದಾಗ, ‘ಅಶೋಕ್ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದರು.

“ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ. ನಮ್ಮ ಬಗ್ಗೆ ಮಾತನಾಡುವ ಅಶೋಕ್ ಅವರ ಪಕ್ಷ ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಶಿವಕುಮಾರ್ ಹೇಳಿದರು.

ಕೇಂದ್ರ ಸರ್ಕಾರದ ಅಕ್ಕಿ ರಾಜಕೀಯದ ಬಗ್ಗೆ ಮಾತನಾಡಿದ ಶಿವಕುಮಾರ್, “ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ?:ಅನ್ನಭಾಗ್ಯ: ರಾಜ್ಯದಲ್ಲೇ ಬೇಡಿಕೆ ಪೂರೈಕೆಯಷ್ಟು ಅಕ್ಕಿ ಇದ್ದರೆ ಇಲ್ಲೇ ಖರೀದಿ: ಸಿಎಂ ಸಿದ್ದರಾಮಯ್ಯ

“ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡುವುದು ಹಾಗೂ ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ತೀರ್ಮಾನಿಸಿದೆ. ಪುಕ್ಕಟ್ಟೆ ಅಕ್ಕಿ ನೀಡಿ ಎಂದು ನಾವು ಅವರಲ್ಲಿ ಕೇಳಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ. ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದ್ದು, ಆರಂಭದಲ್ಲಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....