143 ಸಂಸದರ ಅಮಾನತು | ಡಿ.22ರಂದು ದೇಶಾದ್ಯಂತ ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟ ಕರೆ

Date:

ಸಂಸತ್‌ನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆಗೆ ಪಟ್ಟು ಹಿಡಿದಿದ್ದ ವಿರೋಧ ಪಕ್ಷಗಳ ಒಟ್ಟು 143 ಸಂಸದರನ್ನು ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತು ಮಾಡಿರುವುದನ್ನು ಖಂಡಿಸಿ, ದೆಹಲಿಯ ಜಂತ‌ರ್ ಮಂತರ್‌ ಸೇರಿ ದೇಶಾದ್ಯಂತ ನಾಳೆ(ಡಿ.22) ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟ ಕರೆ ನೀಡಿದೆ.

ಸಂಸದರನ್ನು ಅಮಾನತಿನಲ್ಲಿ ಇರಿಸಿರುವುದನ್ನು ಖಂಡಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಇಂದು ಬೆಳಗ್ಗೆ ಸಂಸತ್‌ ಭವನದಿಂದ ವಿಜಯ್ ಚೌಕ್‌ವರೆಗೆ ರ್‍ಯಾಲಿ ನಡೆಸಿದ ವಿರೋಧ ಪಕ್ಷದ ಸಂಸದರು, ಕೇಂದ್ರ ಸರ್ಕಾರದ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳಿಗೆ ಸಂದರ್ಶನ ನೀಡಿ, ಮಾತನಾಡಿದ್ದಾರೆ. ಆದರೆ ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಿಲ್ಲ. ದೆಹಲಿಯಲ್ಲಿಯೇ ಇದ್ದರೂ ಸಂಸತ್‌ಗೆ ಬಂದು ಮಾತನಾಡಲು ಧೈರ್ಯ ತೋರುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂಸತ್‌ ಭದ್ರತಾ ಉಲ್ಲಂಘನೆಯಂತಹ ಗಂಭೀರ ವಿಚಾರಗಳನ್ನು ವಿಪಕ್ಷದವರಾಗಿ ನಾವು ಪ್ರಶ್ನೆ ಮಾಡಿದ್ದೇವೆ. ಪ್ರಧಾನಿ ಹಾಗೂ ಗೃಹ ಸಚಿವರು ಇದಕ್ಕೆ ಸಮಗ್ರ ವಿವರಣೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಗ್ಗೆ ಪ್ರಧಾನಿ ವಾರಣಾಸಿ ಸೇರಿದಂತೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಆದರೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಾತನಾಡುತ್ತಿಲ್ಲ. ನಾವು ಇದನ್ನು ಖಂಡಿಸುತ್ತೇವೆ. ಆಡಳಿತ ಪಕ್ಷದ ಜನರು ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ. ನಿನ್ನೆ ಇದೇ ಮೊದಲ ಬಾರಿಗೆ ಸಂಸದೀಯ ವ್ಯವಹಾರಗಳ ಸಚಿವರು 120 ಸಂಸದರೊಂದಿಗೆ ರಾಜ್ಯಸಭೆಯಲ್ಲಿ ನಿಂತಿದ್ದು, ಸಂಸದರು ಘೋಷಣೆಗಳನ್ನು ಕೂಗುತ್ತಿದ್ದರು. ಇದು ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಖರ್ಗೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...