ರಾಮನಗರ | ಜಾನುವಾರು ವ್ಯಾಪಾರಿಯ ಅನುಮಾನಾಸ್ಪದ ಸಾವು; ಪುನೀತ್ ಕೆರೆಹಳ್ಳಿ ಬಂಧನ?

Date:

  • ಜಾನುವಾರು ವ್ಯಾಪಾರಿ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆ
  • ರಾಮನಗರದ ಸಾತನೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು
ಜಾನುವಾರು ವ್ಯಾಪಾರಿ ಇದ್ರೀಸ್‌ ಪಾಷಾ ಅವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಲಪಂಥೀಯ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ ಅವರನ್ನು, ಈದಿನ.ಕಾಮ್‌ ಮಧ್ಯಾಹ್ನ ಸಂಪರ್ಕಿಸಿದ್ದ ವೇಳೆ “ಪುನೀತ್‌ ಕೆರೆಹಳ್ಳಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಈವರೆಗೂ ಯಾರನ್ನು ಬಂಧಿಸಿಲ್ಲ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದರು. ಈಗ ಮತ್ತೆ ಅವರನ್ನು ಸಂಪರ್ಕಿಸಿದಾಗ, ಕರೆಗೆ ಅವರು ಲಭ್ಯರಾಗುತ್ತಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ಸೇರಿದಂತೆ ಇತರರ ವಿರುದ್ಧ ರಾಮನಗರ ಜಿಲ್ಲೆ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.
ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಭಾನುವಾರ ಮಧ್ಯಾಹ್ನ ಕನಕಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ ಎದುರು ದಲಿತ ಸಂಘಟನೆಗಳ ನೇತೃತ್ವದಲ್ಲಿ ಸಂಬಂಧಿಕರು, ಸ್ಥಳೀಯ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.
ಈ ಪ್ರಕರಣ ಸಂಬಂಧ ದಲಿತ ಮುಖಂಡ ನೀಲಿ ರಮೇಶ್‌, ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಇದ್ರೀಸ್‌ ಪಾಷಾ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಕೃತ್ಯದ ಹಿಂದಿರುವ ವ್ಯಕ್ತಿಗಳು ಯಾರೆಂದು ಬಹಿರಂಗಪಡಿಸಬೇಕು ಎಂದು ಪೊಲೀಸರಲ್ಲಿ ಒತ್ತಾಯಿಸಿದ್ದೇವೆ” ಎಂದು ತಿಳಿಸಿದರು.
ರಾಮನಗರ
ರಾಮನಗರದಲ್ಲಿ ದಲಿತ ಮುಖಂಡರು ಮತ್ತು ಸ್ಥಳೀಯ ಮುಸ್ಲಿಂ ಮುಖಂಡರು ಸಭೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ತಂಡದ ಮೇಲೆ ಎಫ್‌ಐಆರ್

ಘಟನೆ ಹಿನ್ನೆಲೆ

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ (38) ಎಂಬುವವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪುನೀತ್ ಕೆರೆಹಳ್ಳಿ ಮತ್ತು ಅವರ ಸಹವರ್ತಿಗಳು ಇದೇ ಸ್ಥಳದಲ್ಲಿ ಜಾನುವಾರುಗಳ ರಕ್ಷಣೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದರು.
ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು
ಹೇಳಲಾಗಿತ್ತು. ಅದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...