ತುಮಕೂರು | ಶಾಲೆಯಲ್ಲಿ ಊಟ ಮಾಡಿದ್ದ ಶಿಕ್ಷಕರು, 30 ವಿದ್ಯಾರ್ಥಿಗಳು ಅಸ್ವಸ್ಥ

0
177
ಸಾಂದರ್ಭಿಕ ಚಿತ್ರ

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ಇಬ್ಬರು ಶಿಕ್ಷಕರು ಹಾಗೂ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ರಾತ್ರಿ ವೇಳೆಗೆ ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಶಾಲೆಯೊಂದರಲ್ಲಿ ನಡೆದಿದೆ.

ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ಬುಧವಾರ ಮಧ್ಯಾಹ್ನದ ಊಟದಲ್ಲಿ ಮೊಸರನ್ನ ನೀಡಲಾಗಿತ್ತು. ಮೊಸರನ್ನ ತಿಂದಿದ್ದ ಶಿಕ್ಷಕರು ಮತ್ತು ಮಕ್ಕಳ ಆರೋಗ್ಯದಲ್ಲಿ ರಾತ್ರಿ ವೇಳೆಗೆ ಏರುಪೇರು ಕಂಡುಬಂದಿದೆ ಎಂದು ವರದಿಯಾಗಿದೆ.

ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಕುಣಿಗಲ್ ಟಿಹೆಚ್​ಒ ಡಾ. ಮರಿಯಪ್ಪ, ಆರೋಗ್ಯಾಧಿಕಾರಿ ಬೋರೆಗೌಡ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಸ್ವಸ್ಥಗೊಂಡಿದ್ದ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವ ಕಾರಣಕ್ಕಾಗಿ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

LEAVE A REPLY

Please enter your comment!
Please enter your name here