ಕ್ರಿಕೆಟ್ ವಿಶ್ವಕಪ್ | ‘ಶಮಿ’ಯಿಂದ ಫೈನಲ್‌ಗೆ ಟೀಮ್ ಇಂಡಿಯಾ

Date:

ವೇಗದ ಬೌಲರ್ ಮೊಹಮ್ಮದ್ ಶಮಿಯವರ ಏಳು ವಿಕೆಟ್ ಮತ್ತು ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಅಮೋಘ ಶತಕದಿಂದ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದೆ.

ನ್ಯೂಜಿಲ್ಯಾಂಡ್ ವಿರುದ್ಧ ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ 70 ರನ್‌ಗಳ ಅಮೋಘ ಗೆಲುವು ದಾಖಲಿಸಿದೆ.

2019ರ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿದ್ದ ನ್ಯೂಜಿಲ್ಯಾಂಡ್‌ ತಂಡವನ್ನು 2023ರ ವಿಶ್ವಕಪ್‌ನಲ್ಲಿ ರೋಚಕವಾಗಿ ಸೋಲಿಸುವ ಮೂಲಕ, ಹಳೆಯದನ್ನು ಮರೆಸಿ ಹೊಸ ವಿಶ್ವಾಸದತ್ತ ಹೆಜ್ಜೆ ಹಾಕಿದೆ. ಆ ಮೂಲಕ ಒಟ್ಟಾರೆಯಾಗಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟೀಮ್ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮಿಂಚಿದ ಮೊಹಮ್ಮದ್ ಶಮಿ 9.5 ಓವರ್‌ಗಳನ್ನು ಎಸೆದು 57 ರನ್‌ ನೀಡಿ 7 ವಿಕೆಟ್ ಗಳಿಸಿ ಮಿಂಚಿದ್ದಲ್ಲದೇ, ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ ನೇತೃತ್ವದ ತಂಡ ನಿಗದಿತ 50 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 397 ರನ್ ದಾಖಲಿಸಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲ್ಯಾಂಡ್‌ ತಂಡ ಪ್ರಬಲ ಹೋರಾಟ ನೀಡಿತು, 7 ವಿಕೆಟ್‌ಗಳನ್ನು ಕಳೆದುಕೊಂಡು 48.5 ಓವರ್‌ಗಳಲ್ಲಿ 327 ರನ್ ಗಳಿಸಲಷ್ಟೇ ಶಕ್ತವಾಯಿತು.

ನ್ಯೂಜಿಲ್ಯಾಂಡ್ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ಡ್ಯಾರಿಲ್ ಮಿಚೆಲ್ ಏಕಾಂಗಿ ಹೋರಾಟ ನಡೆಸಿ, 119 ಎಸೆತಗಳಲ್ಲಿ 7 ಭರ್ಜರಿ ಸಿಕ್ಸರ್ ಹಾಗೂ ಒಂಭತ್ತು ಬೌಂಡರಿಗಳ ನೆರವಿನಿಂದ 134 ರನ್ ಗಳಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಉಳಿದಂತೆ ಕಿವೀಸ್ ಪರ ನಾಯಕ ಕೇನ್ ವಿಲಿಯಮ್ಸನ್ 69, ಗ್ಲೆನ್ ಫಿಲಿಫ್ಸ್‌ 41 ರನ್ ಗಳಿಸಿದರು.

ಶಮಿ ಏಳು ವಿಕೆಟ್ ಹೊರತುಪಡಿಸಿದರೆ ಟೀಮ್ ಇಂಡಿಯಾ ಪರ ಬೌಲಿಂಗ್‌ನಲ್ಲಿ ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬುಮ್ರಾ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...