ತೆಲಂಗಾಣ | ಉಮೇದುದಾರಿಕೆಯಲ್ಲಿ ಅಕ್ರಮ ; ಬಿಆರ್‌ಎಸ್‌ ಶಾಸಕ ವೆಂಕಟೇಶ್ವರ ರಾವ್‌ ಅನರ್ಹಗೊಳಿಸಿದ ಹೈಕೋರ್ಟ್‌

Date:

  • 2018ರ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ವೆಂಕಟೇಶ್ವರ ರಾವ್‌ ತಪ್ಪು ಆಸ್ತಿ ವಿವರ ಸಲ್ಲಿಕೆ ಆರೋಪ
  • ಶಾಸಕ ವೆಂಕಟೇಶ್ವರ ರಾವ್‌ ವಿರುದ್ಧ ರಾಜ್ಯ ಹೈಕೋರ್ಟ್‌ಗೆ ದೂರು ನೀಡಿದ್ದ ಸೋತ ಅಭ್ಯರ್ಥಿ ಜಲಗಂ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಉಮೇದುದಾರಿಕೆಯಲ್ಲಿ ಆಸ್ತಿ ವಿವರದ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಕೊತಗುಡೆಂನ ಕ್ಷೇತ್ರದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ವನಮಾ ವೆಂಕಟೇಶ್ವರ ರಾವ್‌ ಅವರನ್ನು ರಾಜ್ಯ ಹೈಕೋರ್ಟ್‌ ಬುಧವಾರ (ಜುಲೈ 28) ಅನರ್ಹಗೊಳಿಸಿ ಆದೇಶ ನೀಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ವೆಂಕಟೇಶ್ವರ ರಾವ್‌ ನಂತರದ ಸ್ಥಾನ ಪಡೆದಿದ್ದ ಬಿಆರ್‌ಎಸ್‌ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಜಲಗಂ ವೆಂಕಟ ರಾವ್‌ ಅವರನ್ನು ಚುನಾಯಿತ ಅಭ್ಯರ್ಥಿ ಎಂದು ನ್ಯಾಯಾಲಯ ಘೋಷಿಸಿದೆ.

ತೆಲಂಗಾಣದ ಚುನಾವಣೆಯಲ್ಲಿ ವೆಂಕಟೇಶ್ವರ ರಾವ್‌ ಅವರು ಈ ಮುನ್ನ ಕಾಂಗ್ರೆಸ್‌ನಿಂದ ಚುನಾಯಿತರಾಗಿದ್ದರು. ಬಳಿಕ ಇತರ 12 ಶಾಸಕರೊಂದಿಗೆ ಬಿಆರ್‌ಎಸ್‌ ಸೇರಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ ವೆಂಕಟೇಶ್ವರ ರಾವ್‌ ವಿರುದ್ಧ ಬಿಆರ್‌ಎಸ್ (ಈ ಮುನ್ನ ಟಿಆರ್‌ಎಸ್‌ ಅಥವಾ ತೆಲಂಗಾಣ ರಾಷ್ಟ್ರ ಸಮಿತಿ ಎಂದು ಕರೆಯಲಾಗುತ್ತಿತ್ತು) ಸದಸ್ಯರಾಗಿದ್ದ ಜಲಗಂ ಅವರು ರಾಜ್ಯ ಹೈಕೋರ್ಟ್‌ಗೆ ದೂರು ನೀಡಿದ್ದರು.

ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಾಧಾ ರಾಣಿ ಅರ್ಜಿ ವಿಚಾರಣೆ ನಡೆಸಿ ವೆಂಕಟೇಶ್ವರ ರಾವ್‌ ಅವರನ್ನು ಅಮಾನತುಗೊಳಿಸಿ ₹5 ಲಕ್ಷ ದಂಡ ವಿಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಇಂಟರ್‌ನೆಟ್‌ ಸ್ಥಗಿತ ತೆರವು; ಸಾಮಾಜಿಕ ಮಾಧ್ಯಮಕ್ಕೆ ನಿರ್ಬಂಧ ಮುಂದುವರಿಕೆ

ಈ ವರ್ಷಾಂತ್ಯ ಡಿಸೆಂಬರ್‌ನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. 2024ರ ಜನವರಿ 16ರಂದು ಚುನಾವಣೆ ಕೊನೆಗೊಳ್ಳಲಿದೆ.

ವೆಂಕಟೇಶ್ವರ ರಾವ್‌ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮ್ಮ ಹಾಗೂ ತಮ್ಮ ಪತ್ನಿಯ ಆಸ್ತಿಯ ವಿವರ ಪೂರ್ಣ ಮಾಹಿತಿ ನೀಡಿಲ್ಲ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...