ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

Date:

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ನುಗ್ಗಿ ಧಿಕ್ಕಾರ ಕೂಗಿದರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪದ ಕುರಿತು ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಸಾರ್ವಜನಿಕರ ಸೋಗಿನಲ್ಲಿ ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶಿಸಿ ದಿಕ್ಕಾರ ಕೂಗಿದರು.

ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಹೆಡ್ಗೆವಾರ್ ಮತ್ತು ಸಾವರ್ಕರ್ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅವರ ಪರವಾಗಿ ಘೋಷಣೆ ಕೂಗಿ ಸಚಿವ ಮಧು ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೂಡಲೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಿಂದ ಹೊರದಬ್ಬಿದರು. ಬಳಿಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ; ಎಸ್‌ಪಿಗೆ ದೂರು ಸಲ್ಲಿಸಿದ ಶಾಸಕ ಬಿ ಆರ್‌ ಪಾಟೀಲ್‌

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಧಿಕ್ಕಾರ ಕೂಗಿರುವುದು ಗುಪ್ತಚರ ಇಲಾಖೆ ವೈಫಲ್ಯವಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಸಚಿವರ ವಿರುದ್ಧ ಪ್ರತಿಭಟನೆ ನಡೆಸುತ್ತಾರೆಂಬ ಮಾಹಿತಿ ಕಲೆಹಾಕಿ, ಅದನ್ನು ತಡೆಯುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ ಎನ್ನಲಾಗಿದೆ.

ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಪಠ್ಯ ಪುಸ್ತಕಗಳಲ್ಲಿ ಸೇರಿಸಿದ್ದ ಸಾವರ್ಕರ್ ಮತ್ತು ಹೆಡ್ಗೇವಾರ್ ಅವರ ಅಧ್ಯಾಯಗಳನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆದುಹಾಕಿದೆ. ಬಿ ಆರ್ ಅಂಬೇಡ್ಕರ್, ಜವಾಹರಲಾಲ್ ನೆಹರು ಮತ್ತು ಸಾವಿತ್ರಿಬಾಯಿ ಫುಲೆ ಅವರ ಪಾಠಗಳನ್ನು ಸರ್ಕಾರ ಸೇರಿಸಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ವಿವಾದಾತ್ಮಕ ವ್ಯಕ್ತಿಗಳ ಅಧ್ಯಾಯಗಳನ್ನು ತೆಗೆದುಹಾಕುವುದಾಗಿ ಭರವಸೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...