ಕೇರಳ | ಮುಂದುವರಿದ ತಿಕ್ಕಾಟ: ರಾಜ್ಯಪಾಲ ಆರಿಫ್ ಖಾನ್ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಎಫ್‌ಐ ಕಾರ್ಯಕರ್ತರು

Date:

ಕೇರಳ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗಳನ್ನು ಅಂಕಿತ ಹಾಕದೆ ವಿಳಂಬ ಮಾಡುತ್ತಿರುವ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದೆ.

ಸೋಮವಾರ ತಡರಾತ್ರಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಆಡಳಿತಾರೂಢ ಸಿಪಿಐ (ಎಂ)ನ ವಿದ್ಯಾರ್ಥಿ ಘಟಕವಾಗಿರುವ ಎಸ್‌ಎಫ್‌ಐ ಸಂಘಟನೆಯ ಕಾರ್ಯಕರ್ತರು ಏಕಾಏಕಿ ಕಾರಿಗೆ ಮುತ್ತಿಗೆ ಹಾಕಿರುವ ಘಟನೆ ಕೇರಳ ವಿಶ್ವವಿದ್ಯಾನಿಲಯದ ಆವರಣದ ಮುಂಭಾಗದಲ್ಲಿ ನಡೆದಿದೆ.

ಹೊಸದಿಲ್ಲಿಗೆ ಪ್ರಯಾಣಿಸುವುದಕ್ಕಾಗಿ ತಿರುವನಂತಪುರ ವಿಮಾನ ನಿಲ್ದಾಣದತ್ತ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್‌ಎಫ್‌ಐಯ ಕಾರ್ಯಕರ್ತರು ಕಪ್ಪು ಧ್ವಜ ಹಿಡಿದುಕೊಂಡು ಏಕಾಏಕಿ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ‘ಗೋ ಬ್ಯಾಕ್ ಗೋ ಬ್ಯಾಕ್, ಆರಿಫ್ ಖಾನ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ರಾಜ್ಯಪಾಲರು ಕಾರು ನಿಲ್ಲಿಸಿದ್ದಲ್ಲದೇ, ಕಾರಿನಿಂದ ಇಳಿದು ತೀವ್ರ ಆಕ್ರೋಶಭರಿತರಾಗಿ ಪೊಲೀಸ್ ಅಧಿಕಾರಿಗಳ ಹಾಗೂ ಸಿಎಂ ಪಿಣರಾಯಿ ವಿಜಯ್ ವಿರುದ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಸ್ಥಳದಲ್ಲಿದ್ದ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ಮೇಲೆ ಹಲ್ಲೆಯ ಸಂಚಿನ ಆರೋಪ ಮಾಡಿದ್ದಾರೆ.

“ಕೇರಳದಲ್ಲಿ ಸಾಂವಿಧಾನಿಕ ಯಂತ್ರ ಕುಸಿದಂತೆ ಕಾಣಿಸುತ್ತಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತನ್ನ ಮೇಲೆ ದೈಹಿಕ ಹಲ್ಲೆ ಎಸಗಲು ತಮ್ಮ ಪಕ್ಷದ ವಿದ್ಯಾರ್ಥಿಯ ಗೂಂಡಾಗಳನ್ನು ಕಳುಹಿಸುವ ಮೂಲಕ ಸಂಚು ಹೂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇಂದು ತಿರುವನಂತಪುರದ ರಸ್ತೆಗಳಲ್ಲಿ ಗೂಂಡಾಗಳು ಆಳ್ವಿಕೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಎಸ್‌ಎಫ್‌ಐನವರು ಬಂದಾಗ ನಾನು ನನ್ನ ಕಾರನ್ನು ನಿಲ್ಲಿಸಿ, ಕಾರಿನಿಂದ ಇಳಿದೆ. ಇವರೆಲ್ಲ ಬ್ಲಡಿ ಫೂಲ್ಸ್, ಕ್ರಿಮಿನಲ್ಸ್. ನಾನು ಬಂದಾಗ ಅವರೇಕೆ ಓಡಿಹೋದರು? ಯಾಕೆಂದರೆ ಅವರ ತಂತ್ರಗಳಿಗೆ, ಅವರ ಒತ್ತಡಕ್ಕೆ ಒಳಗಾಗಿಲ್ಲ ಎಂದೇ? ಅವರು ನನಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ನನ್ನ ಕಾರಿಗೆ ಎರಡೂ ಕಡೆಯಿಂದ ದಾಳಿ ಮಾಡಿದ್ದಾರೆ. ಇದು ಸಿಎಂ ನಿರ್ದೇಶನದ ಮೇಲೆ ನಡೆದ ದಾಳಿ. ಸಿಎಂ ಅವರೇ ನಿರ್ದೇಶನ ನೀಡುತ್ತಿರುವಾಗ ಪೊಲೀಸರಿಂದ ಏನು ತಾನೇ ಮಾಡಲು ಸಾಧ್ಯ. ಒಂದು ವೇಳೆ ಇದೇ ರೀತಿ ದಾರಿಯಲ್ಲಿ ಸಿಎಂ ಬಂದಾಗ ಈ ರೀತಿಯಾಗಿ ನಡೆದುಕೊಳ್ಳಲು ಸಾಧ್ಯವೇ? ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತನ್ನ ಮೇಲೆ ದೈಹಿಕ ಹಲ್ಲೆ ಎಸಗಲು ಷಡ್ಯಂತ್ರ ರೂಪಿಸಿದ್ದಾರೆ” ಎಂದು ಸರ್ಕಾರ ಹಾಗೂ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಘಟನೆಯ ಬಳಿಕ ಕೇರಳ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಹೊಸ ತಿಕ್ಕಾಟವೊಂದು ಆರಂಭಗೊಂಡಂತಾಗಿದೆ.

19 ಎಸ್‌ಎಫ್‌ಐ ಕಾರ್ಯಕರ್ತರ ಬಂಧನ

ರಾಜ್ಯಪಾಲರ ಕಾರನ್ನು ತಡೆದು, ಪ್ರತಿಭಟನೆ ನಡೆಸಿದ 19 ಎಸ್‌ಎಫ್‌ಐ ಕಾರ್ಯಕರ್ತರನ್ನು ತಿರುವನಂತಪುರಂ ಪೊಲೀಸರು ಬಂಧಿಸಿದ್ದು, ಇಂದು(ಮಂಗಳವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಪೈಕಿ 7 ಮಂದಿ ವಿರುದ್ಧ ಜಾಮೀನು ರಹಿತ ಆರೋಪ ಹೊರಿಸಲಾಗಿದೆ. ಡಿಜಿಪಿ ಮತ್ತು ಕಾನೂನು ಸುವ್ಯವಸ್ಥೆ ಉಸ್ತುವಾರಿ ಎಡಿಜಿಪಿ ತಿರುವನಂತಪುರಂ ನಗರ ಪೊಲೀಸ್‌ ಆಯುಕ್ತರಿಗೆ ಘಟನೆಯ ಕುರಿತು ವರದಿ ಕೇಳಿದ್ದಾರೆ.

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಉನ್ನತ ಶಿಕ್ಷಣ ಕ್ಷೇತ್ರವನ್ನು ಕೇಸರಿಮಯಗೊಳಿಸಿದ್ದಾರೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ರಾಜ್ಯಪಾಲರನ್ನು ಸಾರ್ವಜನಿಕವಾಗಿ ತಡೆಯುವ ರೂಪದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಸ್‌ಎಫ್‌ಐ ಈ ಹಿಂದೆ ಘೋಷಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು...

ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು...

ಜನ ಹಸಿವಿನಿಂದ ಬಳಲುತ್ತಿಲ್ಲ ಎಂದಾದರೆ 83ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಯಾಕಾಗಿ? : ಪರಕಾಲ ಪ್ರಭಾಕರ

"ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಸಿವಿನಿಂದ ಜನರು ಕಂಗಾಲಾಗಿದ್ದಾರೆ. ಆದರೆ ಜನರ...

ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ...