ಹುಲಿ ಉಗುರು | ವರ್ತೂರು ಸಂತೋಷ್​ ಬಳಿಕ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

Date:

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿ ಇದೀಗ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಹಾಗೂ ವಿನಯ್ ಗುರೂಜಿ ಅವರ ಮೇಲೆ ಹುಲಿ ಉಗುರು ಮತ್ತು ಹುಲಿ ಚರ್ಮ ಬಳಸಿದ ಆರೋಪ ಕೇಳಿಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಲಿ ಉಗುರು ಲಾಕೆಟ್ ಧರಿಸಿದ್ದಾರೆ ಹಾಗೂ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ ಇಬ್ಬರ ಮೇಲೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಎನ್ನುವವರು ಅರಣ್ಯಾಧಿಕಾರಿಗೆ ದೂರು ನೀಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಟ ದರ್ಶನ್ ವಿರುದ್ಧ ದೂರು ದಾಖಲಾಗಿದೆ.

ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿದ ಕಾರಣಕ್ಕೆ ಬಂಧನವಾದ ಬೆನ್ನಲ್ಲೇ, ಇದೀಗ ನಟ ದರ್ಶನ್ ಮತ್ತು ವಿನಯ್ ಗುರೂಜಿ ಅವರ ಮೇಲೆ ಆರೋಪ ಕೇಳಿಬಂದಿದೆ. ಈ ಹಿಂದೆ ದರ್ಶನ್ ಅವರು ಧರಿಸಿದ್ದ ಹುಲಿ ಉಗುರಿನ ಫೋಟೋ ವೈರಲ್ ಆಗಿತ್ತು. ಹಾಗೆಯೇ, ವಿನಯ್ ಗುರೂಜಿ ಅವರು ಹುಲಿಯ ಚರ್ಮದ ಮೇಲೆ ಕುಳಿತಿರುವ ಫೋಟೋ ಕೂಡ ವೈರಲ್ ಆಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಟೀಕೆಗಳು ವ್ಯಕ್ತವಾಗುತ್ತಿದ್ದು, ನ್ಯಾಯ ಎಂದರೆ ಎಲ್ಲರಿಗೂ ಒಂದೇ ರೀತಿ ಇರಬೇಕು. ಈಗ ಇವರಿಬ್ಬರ ಮೇಲೆ ಯಾವಾಗ ಕ್ರಮ ಕೈಗೊಳ್ಳಲಾಗುವುದು ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕ್ಯಾರಿ ಬ್ಯಾಗ್‌ಗೆ ₹20 ಶುಲ್ಕ ವಿಧಿಸಿದ ಐಕಿಯಾ; ₹3 ಸಾವಿರ ಪರಿಹಾರ ನೀಡಲು ಸೂಚಿಸಿದ ನ್ಯಾಯಾಲಯ

“ದರ್ಶನ್ ಬಂಗಾರದ ಚೈನ್ ಹಾಕಿದ್ದಾರೆ. ಅದರಲ್ಲಿ ಹುಲಿಯ ಉಗುರು ಇದೆ. ಅವರಿಂದ ಕಾನೂನಿನ ಉಲ್ಲಂಘನೆ ಆಗಿದೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ. ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು ಸಂತೋಷ ಅವರನ್ನು ಬಂಧಿಸಿದ್ದೀರಿ. ಅದೇ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ” ಎಂದು ದೂರು ನೀಡಿದ ಶಿವಕುಮಾರ್ ಹೇಳಿದ್ದಾರೆ.

ಹುಲಿ ಚರ್ಮ

“ನಟ ದರ್ಶನ್ ಅವರು ಧರಿಸಿರುವುದು ಹುಲಿ ಉಗುರು ನಕಲಿಯೋ ಅಥವಾ ಅಸಲಿಯೋ ಎಂಬ ಬಗ್ಗೆ ಅರಣ್ಯಾಧಿಕಾರಿಗಳು ತನಿಖೆ ನಡೆಸಬೇಕು. ದರ್ಶನ ಅವರು ಅರಣ್ಯ ಇಲಾಖೆಯ ರಾಯಭಾರಿ ಆಗಿದ್ದಾರೆ. ಈ ಬಗ್ಗೆ ಅವರಿಗೆ ಮಾಹಿತಿ ಇಲ್ಲವೇಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...