ತುಮಕೂರು | 15ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Date:

ನಮ್ಮ ಕನ್ನಡ  ಭಾಷೆ ಅಳಿಯದಂತೆ ನೋಡಿಕೊಳ್ಳುವ ಶೈಕ್ಷಣಿಕ ಮತ್ತು ಶಾಸನಾತ್ಮಕ ಪ್ರಯತ್ನಗಳನ್ನು ಅವಿರತವಾಗಿ ನಡೆಸಬೇಕಾಗಿದೆ ಎಂದು ಪ್ರಖ್ಯಾತ ಕವಿ, ನಾಟಕಕಾರ ಮತ್ತು ತುಮಕೂರು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ಎಚ್ ಎಸ್ ಶಿವಪ್ರಕಾಶ್ ತಿಳಿಸಿದರು.

ತುಮಕೂರು ನಗರದ ಗಾಜಿನ ಮನೆ ಆವರಣದಲ್ಲಿ ನಡೆದ ತುಮಕೂರಿನ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“20ನೇ ಶತಮಾನದ ದೊಡ್ಡ ಪಾಠವೆಂದರೆ, ವಿಜ್ಞಾನ, ತಂತ್ರಜ್ಞಾನದ ಪ್ರಗತಿಗೂ ಇತಿ ಮಿತಿಗಳಿವೆ. ಅಲ್ಲದೆ ಜೀವಪರವಾದ ಸಾಂಸ್ಕೃತಿಕ, ಆಧ್ಯಾತ್ಮಿಕ ಮೌಲ್ಯಗಳಿಲ್ಲದಿದ್ದರೆ ಪ್ರಗತಿಯ ಎಲ್ಲ ಸಾಧನೆಗಳು ನಮ್ಮ ಉದ್ದೇಶಗಳಿಗೆ ವಿರುದ್ದವಾದ ದಿಕ್ಕಿನಲ್ಲಿ ನಮ್ಮನ್ನು ಒಯ್ಯುತ್ತವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜಗತ್ತಿನ ಕನ್ನಡ ಭಾಷಿಕ ಸಮುದಾಯದ ಸಾಂಸ್ಕೃತಿಕ ಮತ್ತು ಸಾರಸ್ವತ ವಿಕಾಸದಲ್ಲಿ ತುಮಕೂರು ಜಿಲ್ಲೆ ತನ್ನದೇ ಆದ ಛಾಪನ್ನು ಹೊಂದಿದೆ. ಬುಡಕಟ್ಟು ಸಮಾಜಗಳ ಆದಿಮ ಕಾವ್ಯಗಳಲ್ಲಿ ಜೀವ ಮತ್ತು ಜೀವಪರತೆಯನ್ನು ಮೆರೆಸುವ ಜುಂಜಪ್ಪನ ಕಾವ್ಯಕ್ಕೆ ಈ ಪ್ರದೇಶ ಹೆಸರಾಗಿದೆ. ಸಿದ್ದಗಂಗಾ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನ, ವಸತಿ ಮತ್ತು ವಿದ್ಯೆಯನ್ನು ನೀಡುತ್ತಾ ಬಂದಿದೆ” ಎಂದು ಹೇಳಿದರು.

ಕವಿ ಪ್ರೊ ಎಸ್ ಜಿ ಸಿದ್ದರಾಮಯ್ಯ ಮಾತನಾಡಿ, “ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಹಲವು ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸಾಹಿತಿಗಳು ಆತ್ಮಾವಲೋಕನದ ಮಾತುಗಳನ್ನಾಡದೇ ಹೋದರೆ ಸಮಾಜ ದ್ರೋಹಿಗಳಾಗುತ್ತೇವೆ. ವಾಸ್ತಾವಕ್ಕೆ ಕಣ್ಣುಮುಚ್ಚಿರುವ ರೀತಿಯಲ್ಲಿ ಸಾಹಿತಿಗಳು ಬರೆಯದೆ, ಮಾತನಾಡದೆ ಹೋದರೆ ಅದು ಆತ್ಮದ್ರೋಹ ಕೃತ್ಯವಾಗುತ್ತದೆ. ಸಮಾಜವನ್ನು ತಿದ್ದುವ ವಿಶೇಷವಾದ ಜವಾಬ್ದಾರಿ ಸಾಹಿತಿಗಳಿಗೆ ಇದೆಯೆಂದು ಪ್ರಜಾಪ್ರಭುತ್ವಕ್ಕೆ ಆತಂಕ ಎದುರಾದ ಸಂದರ್ಭದಲ್ಲಿ ಸಾಹಿತಿಗಳು ಜಾಣಮೌನ ವಹಿಸಬಾರದು. ಕನ್ನಡ ಸಾಹಿತ್ಯವನ್ನು ಒಮ್ಮೆ ಅವಲೋಕಿಸಿ ನೋಡಿದಾಗ ಅಲ್ಲಿ ನಡೆದ ಸಂಘರ್ಷಗಳ ಬಗ್ಗೆ ತಿಳಿಯುತ್ತದೆ. 12ನೇ ಶತಮಾನದಲ್ಲಿ ವಚನ ಸಾಹಿತ್ಯದ ಸಾಹಿತಿಗಳು, ಆಗ ಭಾರತದಲ್ಲಿದ್ದ ಚಾರ್ತುವರ್ಣದ ಕುರಿತು ಹಲವಾರು ವಚನಗಳ ಮೂಲಕ ಶೋಷಿತ ಮತ್ತು ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ” ಎಂದು ತಿಳಿಸಿದರು.

“́ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಹಿತಿಗಳು ಎಷ್ಟರ ಮಟ್ಟಿಗೆ ತಮ್ಮ ಸಾಮಾಜಿಕ ಬದ್ಧತೆಯನ್ನು ನಿರ್ವಹಿಸಿದ್ದಾರೆ ಎಂಬುವುದನ್ನು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಶಾಂತಿಯ ಕಾಲದಲ್ಲಿ ಕ್ರಾಂತಿಯ ಮಾತನಾಡುವ ಸಾಹಿತಿಗಳು, ಕ್ರಾಂತಿಯ ಕಾಲದಲ್ಲಿ ಜಾಣಮೌನ ವಹಿಸಬಾರದು” ಎಂದು ಹೇಳಿದರು.

 ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷೆತೆ, ಗೌರವಯುತ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ

ಕಾರ್ಯಕ್ರಮದಲ್ಲಿ ಶಾಸಕ ಜಿ ಬಿ ಜ್ಯೋತಿಗಣೇಶ್, ಜಿಲ್ಲಾ ಪಂಚಾಯತ್ ಸಿಇಒ ಜಿ ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಹಿರೇಮಠದ ಅಧ್ಯಕ್ಷ ಡಾ. ಶಿವಾನಂದ ಶಿವಾಚಾರ್ಯ ಮಹಾಸ್ವಾಮೀಜಿ, ಪಾವಗಡ ರಾಮಕೃಷ್ಣ ಸೇವಾಶ್ರಮದ ಜಪಾನಂದಜಿ ಮಹಾರಾಜ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಎಸ್ ಸಿದ್ಧಲಿಂಗಪ್ಪ, ಡಾ.ಎಂ ಎಸ್ ಆಶಾದೇವಿ, ಎಂ ವಿ ನಾಗರಾಜರಾವ್, ರೇಷ್ಮೆ ಇಲಾಖೆ ಉಪನಿರ್ದೇಶಕ ಡಾ ಬಾಲಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...