ಉಡುಪಿ | 108 ಆರೋಗ್ಯ ಕವಚ ಸಿಬ್ಬಂದಿಗೆ ಬಂದಿಲ್ಲ ತಿಂಗಳ ವೇತನ

Date:

108 ಆರೋಗ್ಯ ಕವಚ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 3ತಿಂಗಳಿಂದ ವೇತನ ಪಾವತಿಯಾಗದೇ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೊಟ್ರಪ್ಪ ಜಿ ಹೇಳಿದರು.

ಉಡುಪಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇದೇ ರೀತಿ ಸುಮಾರು 4-5 ವರ್ಷದಿಂದಲೂ ಸಹ ವೇತನ ವಿಚಾರವಾಗಿ 108 ಸಿಬ್ಬಂದಿ ತೊಂದರೆ ಅನುಭವಿಸುತ್ತಾ ಬಂದಿದ್ದೇವೆ. ಸರ್ಕಾರ ಮತ್ತು ಜಿ.ವಿ.ಕೆ ಸಂಸ್ಥೆಯ ಒಡಂಬಡಿಕೆಯ ಪ್ರಕಾರ ವಾರ್ಷಿಕ ವೇತನ ಹೆಚ್ಚಳ ಆಗಬೇಕಾಗಿದ್ದು, 2023ರ ಶೇ.15 ರಷ್ಟು ವೇತನ ಪರಿಷ್ಕರಣೆಯೂ ಸಹ ಆಗಿಲ್ಲ ಎಂದು ಅವರು ಆರೋಪಿಸಿದರು.

ಹಾಗೇ ಇತ್ತಿಚಿನ ದಿನಗಳಲ್ಲಿ ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಕನಿಷ್ಠ ವೇತನ ಸಹ ಜಾರಿ ಮಾಡಿದ್ದು, 108 ಸಿಬ್ಬಂದಿಗೆ ವೇತನವನ್ನು 36,008 ರೂ.ಗಳಿಗೆ ವೇತನ ನಿಗಧಿಮಾಡಿದ್ದು, ಈ ವೇತನವನ್ನು ಸುಮಾರು 6 ತಿಂಗಳುಗಳ ಕಾಲ ನೀಡಿ, ತದ ನಂತರ ಏಕಾಏಕಿ 6000 ರೂ.ಗಳನ್ನು ಕಡಿತ ಮಾಡಿ 30,000 ರೂ.ಗಳನ್ನು ನೀಡಿರುತ್ತಾರೆ ಎಂದು ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮತ್ತೊಮ್ಮೆ ಪ್ರಸ್ತುತ ವೇತನದಲ್ಲಿ ಕಡಿಮೆಯಾಗುವಂತ ಮಾಹಿತಿಯು ಸರ್ಕಾರದ ಅಧಿಕಾರಿಗಳ ಮಟ್ಟದಲ್ಲಿ ಕೇಳಿಬರುತ್ತಿದ್ದು, 108 ಆಂಬ್ಯುಲೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವಾಟ್ಸ್ಆಪ್ ಗ್ರೂಪ್‌ನಲ್ಲಿ ವದಂತಿಯ ಸಂದೇಶಗಳು ಹರಿದಾಡುತ್ತಿವೆ. ಹಾಗಾಗಿ, ಆರೋಗ್ಯ ಸಚಿವರು ಈ ಮೇಲಿನ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಬಾಕಿ ಇರುವ 4 ತಿಂಗಳ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಿಸಿ ಎಂದು ಒತ್ತಾಯಿಸಿದರು.

108 ಸಿಬ್ಬಂದಿ ದಿನನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸಭಾ ನಡವಳಿಯನ್ನು ಮಾಡಿಕೊಟ್ಟು ಮುಂದಿನ ದಿನಗಳಲ್ಲಿ ಇದೇ ರೀತಿಯ ಸಮಸ್ಯೆಗಳು ಬಾರದ ರೀತಿಯಲ್ಲಿ ಕ್ರಮ ಕೈಗೊಂಡು, ನಮ್ಮ ಸಿಬ್ಬಂದಿಗೆ ಇನ್ನೂ ಉತ್ತಮ ರೀತಿಯಲ್ಲಿ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಎಲ್ಲಾ ಜಿಲ್ಲಾ ಸಿಬ್ಬಂದಿಗಳ ಪರವಾಗಿ ಕೇಳಿಕೊಳ್ಳುತ್ತೇವೆ ಎಂದರು.

ಈ ಮೇಲಿನ ಎಲ್ಲಾ ಅಂಶಗಳನ್ನು ಮುಂದಿನ 10 ದಿನಗಳೊಳಗಾಗಿ ಸರಿಪಡಿಸಿ ಕೊಡದ ಪಕ್ಷದಲ್ಲಿ ನಾವು ಯಾವುದೇ ರೀತಿಯ ಬೇರೆ ದಾರಿ ಕಾಣದೇ ಅಸಹಾಯಕರಾಗಿ ಮುಷ್ಕರ ಕೈಗೊಳ್ಳುತ್ತೇವೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸೇವೆಗೆ ಅನಾನುಕೂಲತೆಗಳು ಉಂಟಾದಲ್ಲಿ ನೇರವಾಗಿ ಸಂಬಂಧಿಸಿದ ಸಂಸ್ಥೆಯೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಕಿಶೋರ್ ಕುಮಾರ್, ಶಾಂತ ಗೌಡ, ವಿಶ್ವನಾಥ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ...

ಮಾರ್ಚ್ 30ರಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ...

ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ...

ಮಂಡ್ಯ | ಕಾರ್ಖಾನೆಯ ಹಾರುವ ಬೂದಿ ನಿಯಂತ್ರಣಕ್ಕೆ ರೈತರ ಆಗ್ರಹ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ...