ಉಡುಪಿ | ಕಾನೂನುಬಾಹಿರ ಅಡ್ಡಾಗಳ ಮೇಲೆ ಪೊಲೀಸ್‌ ದಾಳಿ: ಪ್ರಕರಣ ದಾಖಲು

Date:

ಮಣಿಪಾಲ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿದ್ದು, ಹಲವು ಕಡೆ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ರಸ್ತೆ ಬದಿಯ ಅಡ್ಡಾಗಳ ಮೇಲೆ ದಾಳಿ ನಡೆಸಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲ ನಗರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ತಡರಾತ್ರಿ ಅನುಮಾನಾಸ್ಪದ ಹೋಟೆಲ್‌ಗಳ ಮೇಲೆ ದಾಳಿ ಮಾಡಿದ್ದಾರೆ. ಅನಧಿಕೃತ ರೀತಿಯಲ್ಲಿ ಅವಧಿ ಮೀರಿ ಹೋಟೆಲ್ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಬಹುತೇಕ ವಿದ್ಯಾರ್ಥಿಗಳು, ಅಪ್ರಾಪ್ತ ವಯಸ್ಕರು ಮದ್ಯ ಸೇವನೆಯಲ್ಲಿ ತೊಡಗಿದ್ದುದು ಕಂಡುಬಂದಿದೆ.

ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಗಾಂಜಾ ಮತ್ತಿತರ ಡ್ರಗ್ಸ್‌ ಅಂಶಗಳಿಗಾಗಿ ಶೋಧಿಸಲಾಗುತ್ತಿದೆ. ಇಲ್ಲಿನ ಹೋಟೆಲ್‌ಗಳ ಚಟುವಟಿಕೆಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಅಲ್ಲದೆ ಸಾರ್ವಜನಿಕರಿಂದಲೂ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮಣಿಪಾಲ ಠಾಣಾಧಿಕಾರಿ ದೇವರಾಜ್ ನೇತೃತ್ವದಲ್ಲಿ ತಂಡದಿಂದ ರಾತ್ರಿ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಬೆಂಕಿ ಅವಘಡ | ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರ

ಶನಿವಾರ ತಡರಾತ್ರಿ ನಾಕಾಬಂದಿ, ಚೆಕ್‌ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸಲಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯುವ ಉದ್ದೇಶದಿಂದ ಮಣಿಪಾಲಕ್ಕೆ ದೇಶದ ನಾನಾ ಕಡೆಗಳಿಂದ ಹಾಗೂ ವಿದೇಶದಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಆದರೆ ಕಳೆದ ಹಲವು ವರ್ಷಗಳಿಂದ ಇಲ್ಲಿನ ಹಲವು ವಿದ್ಯಾರ್ಥಿಗಳು ಗಾಂಜಾ ಮತ್ತು ಡ್ರಗ್ಸ್ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರೈತ ಸಂಘ ತೀರ್ಮಾನಿಸಿದೆ: ವೀರಸಂಗಯ್ಯ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ...

ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು...

ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ...

ತುಮಕೂರು | ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಪೇರಿ ಕಿತ್ತ ಬಿಜೆಪಿ ರಾಜ್ಯ ಸಂಯೋಜಕ

ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಗೃಹ ಲಕ್ಷ್ಮಿ, ಶಕ್ತಿ ಯೋಜನೆ ಕೊಟ್ಟಿದ್ದಾರೆಯೇ...