ಇರುವ ಉದ್ಯೋಗವನ್ನೂ ಪ್ರಧಾನಿ ಮೋದಿ ಕಸಿದ ಕಾರಣ ದೇಶದಲ್ಲಿ ನಿರುದ್ಯೋಗ ಹೆಚ್ಚಳ: ಸಿಎಂ ಸಿದ್ದರಾಮಯ್ಯ

Date:

  • ಹೊಸದಾಗಿ 58 ಜಿಟಿಡಿಸಿಗಳ ಸ್ಥಾಪನೆ: ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಸಿಎಂ ಘೋಷಣೆ
  • ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಯುವ ಸಮೃದ್ಧಿ, ಉದ್ಯೋಗ ಸಮ್ಮೇಳನ

“ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿ, ಯುವಕರ ಮತ ಗಳಿಸಿದರು. ಈ ಲೆಕ್ಕದಲ್ಲಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ ಮೋದಿಯವರು ಇರುವ ಉದ್ಯೋಗವವನ್ನೂ ಕಸಿದುಕೊಂಡ ಕಾರಣ ನಿರುದ್ಯೋಗ ಪ್ರಮಾಣ ದೇಶದಲ್ಲಿ ಶೇ.8.40 ಕ್ಕೆ ಏರಿಕೆಯಾಗಿದೆ” ಸಿಎಂ ಸಿದ್ದರಾಮಯ್ಯ ತಿಳಿಸಿದರು.ಅರಮನೆ ಮೈದಾನದಲ್ಲಿ ನಡೆದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

“ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಿದೆ” ಎಂದು ಅಂಕಿ-ಅಂಶಗಳ‌ ಸಹಿತ ಸಿಎಂ ವಿವರಿಸಿದರು.

ನಮ್ಮ ಸರ್ಕಾರ ನಿರುದ್ಯೋಗಿ ಯುವಕರಿಗೆ ಯುವನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ವೇಳೆ ಘೋಷಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾವು ಯುವ ನಿಧಿಯನ್ನೂ ಕೊಡುತ್ತೇವೆ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ” ಎಂದು ಭರವಸೆ ನೀಡಿದರು.

“ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDCಗಳ ಜತೆಗೆ ಹೊಸದಾಗಿ ಇನ್ನಷ್ಟು GTDCಗಳನ್ನು ಸ್ಥಾಪನೆ ಮಾಡಲಾಗುವುದು” ಎಂದು ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಬೃಹತ್ ಉದ್ಯೋಗ ಮೇಳದಲ್ಲಿ 580 ಉದ್ಯಮಿಗಳು, ಕಂಪನಿಗಳು ಹಾಗೂ ಒಂದು ಲಕ್ಷದಷ್ಟು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...